ತುಮಕೂರು: ಹಿರಿಯ ನಟ ದುನಿಯಾ ವಿಜಯ್ ಅವರು ನಾಯಕರಾಗಿ ಅಭಿನಯಿಸಿರುವ ‘ಲ್ಯಾಂಡ್‌ಲಾರ್ಡ್’ ಸಿನಿಮಾದ ಬಿಡುಗಡೆ ಅಂಗವಾಗಿ ಶುಕ್ರವಾರ ನಗರದ ಮಾರುತಿ ಚಿತ್ರಮಂದಿರದಲ್ಲಿ ದುನಿಯಾ ವಿಜಯ್ ಅಭಿಮಾನಿಗಳು ಸಿಹಿ ವಿತರಿಸಿ ಸಂಭ್ರಮಿಸಿದರು. ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿ ಅಭಿಮಾನ ಮೆರೆದರು.
ವಿಜಯಸೇನೆ ರಾಜ್ಯಾದ್ಯಕ್ಷ ಹೆಚ್. ಎನ್.ದೀಪಕ್ ಈ ಸಂಭ್ರಮ ಸಮಾರಂಭದಲ್ಲಿ ಭಾಗಿಯಾಗಿ, ಲ್ಯಾಂಡ್‌ಲಾರ್ಡ್ ಸಿನಿಮಾ ತುಮಕೂರು ಜಿಲ್ಲೆಯ ವಿವಿಧೆಡೆ ಚಿತ್ರೀಕರಣವಾಗಿದೆ. ಇತಿಹಾಸ ಪ್ರಸಿದ್ಧ ಕೈದಾಳದ ಚನ್ನಕೇಶವಸ್ವಾಮಿ ದೇವಸ್ಥಾನ ಸುತ್ತಮುತ್ತ ಹಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಈ ಸಿನಿಮಾ ಯಶಸ್ವಿಯಾಗಲಿ, ದುನಿಯಾ ವಿಜಯ್ ಅವರು ಮುಂದೆ ಮತ್ತಷ್ಟು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡದ ಕೀರ್ತಿ ಬೆಳಗಲಿ ಎಂದು ಹೇಳಿದರು.
ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಂಕರ್ ಮಾತನಾಡಿ, ದುನಿಯಾ ವಿಜಯ್ ಅಭಿಮಾನಿಗಳ ಸಂಘದವರು ಚಿತ್ರ ಬಿಡುಗಡೆಯನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಿ ಮಾದರಿಯಾಗಿದ್ದಾರೆ. ಜಿಲ್ಲೆಯ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಿನಿಮಾ ವೀಕ್ಷಣೆ ಮಾಡಿ ಚಿತ್ರವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು.
ಚಿತ್ರ ಬಿಡುಗಡೆ ಸಂದರ್ಭದಲ್ಲಿ ಅಭಿಮಾನಿಗಳು ಮಾರುತಿ ಚಿತ್ರಮಂದಿರದಲ್ಲಿ ವಿಜಯ್ ಅವರ ಬೃಹತ್ ಕಟೌಟ್ ನಿರ್ಮಿಸಿ, ಪೋಸ್ಟರ್‌ಗಳನ್ನು ಹಾಕಿ ಹಬ್ಬದ ವಾತಾವರಣ ನಿರ್ಮಿಸಿದ್ದರು. ವಿಜಯಸೇನೆ ರಾಜ್ಯ ಉಪಾಧ್ಯಕ್ಷ ರಂಜಿತ್, ದುನಿಯಾ ವಿಜಯ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ದುನಿಯಾ ಬಾಬು ಮೊದಲಾದವರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


