nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ
    ಮಧುಗಿರಿ January 25, 2026

    ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ

    By adminJanuary 25, 2026No Comments2 Mins Read
    arasikere

    ಅರಸೀಕೆರೆ: ಸರ್ಕಾರಿ ಪ್ರೌಢಶಾಲೆ ಅರಸೀಕೆರೆ ಶಾಲೆಯ ಸಾಧನೆಯ ಕಿರೀಟಕ್ಕೆ ಇನ್ನೊಂದು ಗರಿ ಸೇರ್ಪಡೆಯಾಗಿದ್ದು, ಇಡೀ ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮವಾಗಿ ಈ ಸಾಧನೆ ಮಾಡಿದಂತಾಗಿದೆ. ಇಲ್ಲಿನ 10 ತರಗತಿಯ ವಿದ್ಯಾರ್ಥಿ ಹೃತಿಕ್.ಹೆಚ್ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ತನ್ನ ವಿಜ್ಞಾನ ಮಾದರಿಯಾದ ಶಾಲೆ ಮತ್ತು ಆಸ್ಪತ್ರೆಯ ಸೂಚನಾ ವ್ಯವಸ್ಥೆ ಮತ್ತು ಅಗ್ನಿನಂದಕ ರೋಬೋ ಕಾರ್ ವೈಯಕ್ತಿಕ ವಿಭಾಗದಲ್ಲಿ ಐದನೇ ಸ್ಥಾನಗಳಿಸಿದ ಹೆಗ್ಗಳಿಕೆ ಸಾಧಿಸಿದ್ದಾನೆ.

    10ನೇ ತರಗತಿಯ ಹೃತಿಕ್ ಹೆಚ್. ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಬಹುಮಾನಗಳಿಸಿ ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ ಆಗಿದ್ದರು. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೊಲ್ಲೂರಿನಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಗಾಡಿಯಂ ಶಾಲೆಯಲ್ಲಿ ದಿನಾಂಕ : 19—01–2026 ರಿಂದ  23—01–2026 ರವರೆಗೆ ಸುಮಾರು ಐದು ದಿನಗಳ ಕಾಲ ನಡೆದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವು ಶುಕ್ರವಾರ ಮುಕ್ತಾಯವಾಗಿದ್ದು, ಈ ವಿಜ್ಞಾನ ಮೇಳದಲ್ಲಿ ಅವರು ಪ್ರದರ್ಶಿಸಿದ ಮಾದರಿ ವೈಯಕ್ತಿಕ ವಿಭಾಗದಲ್ಲಿ ಐದನೇ ಸ್ಥಾನ ಗಳಿಸಿದೆ. ಈ ವಿದ್ಯಾರ್ಥಿಯು ತಯಾರಿಸಿದ ಮಾದರಿಯ ವಿಶೇಷತೆ ಏನೆಂದರೆ ಶಾಲೆ ಮತ್ತು ಆಸ್ಪತ್ರೆಯ ಹತ್ತಿರ ಯಾವುದೇ ವಾಹನಗಳು ಬಂದಾಗ ತಕ್ಷಣವೇ ಸೆನ್ಸಾರ್ ಮೂಲಕ ಸೂಚನಾ ವ್ಯವಸ್ಥೆ ಮತ್ತು ಯಾವುದೇ ಬೆಂಕಿ ಅವಘಡಗಳು ಸಂಭವಿಸಿ ದಾಗ ತಕ್ಷಣವೇ ಮಾಹಿತಿಯನ್ನು ಸ್ವೀಕರಿಸಿ ಅಗ್ನಿ ನಂದಕವಾಗಿ ಕಾರ್ಯನಿರ್ವಹಿಸುವ ರೋಬೋ ಕಾರ್ ನ ಮಾದರಿಯನ್ನು ಪ್ರದರ್ಶಿಸಲಾಗಿತ್ತು. ಇದರಲ್ಲಿ ಸುಮಾರು ದಕ್ಷಿಣ ಭಾರತದ ಕರ್ನಾಟಕ, ಆಂದ್ರಪ್ರದೇಶ, ತಮಿಳುನಾಡು ಕೇರಳ, ಪುದುಚೇರಿ ಮತ್ತು ತೆಲಂಗಾಣ ರಾಜ್ಯಗಳಿಂದ ಭಾಗವಹಿಸಿದ್ದರು.


    Provided by
    Provided by

    ಅಭಿನಂದನಾ ಕಾರ್ಯಕ್ರಮದಲ್ಲಿ SISFನ ನಿರ್ದೇಶಕರಾದ ಶಂಕರ್, ಕರ್ನಾಟಕ ರಾಜ್ಯದ ನೋಡಲ್ ಅಧಿಕಾರಿಯಾದ ಶಶಿಧರ್ ಕೇಸರಿ ADPI ಬೆಂಗಳೂರು ಮತ್ತು ದೀಪಕ್  ಕುಲಕರ್ಣಿ DIET ಧಾರವಾಡದ ಹಿರಿಯ ಉಪನ್ಯಾಸಕರು ಹಾಗೂ ತೆಲಂಗಾಣ ರಾಜ್ಯದ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

    ಆಧುನಿಕ ತಂತ್ರಜ್ಞಾನ ಬಳಸಿ ಅಭಿವೃದ್ಧಿಪಡಿಸಿದ ಮಾದರಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಯಿತು. ಈ ಸಾಧನೆಯ ಹಿಂದೆ  ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ಮಿನಿ ವಿಜ್ಞಾನ ಸಂಪನ್ಮೂಲ ಕೇಂದ್ರ ಹಾಗೂ ಮಾರ್ಗದರ್ಶಿ ಶಿಕ್ಷಕರು ಮತ್ತು ಪ್ರಭಾರಿ ಮುಖ್ಯಶಿಕ್ಷಕರಾದ ರೇಣುಕರಾಜ್ ಜಿ.ಹೆಚ್.ರವರ  ಮಾರ್ಗದರ್ಶನ ಮತ್ತು ಪ್ರೋತ್ಸಾಹ ಪ್ರಮುಖ ಪಾತ್ರವಹಿಸಿದೆ. ವಿದ್ಯಾರ್ಥಿಗಳಲ್ಲಿನ ವೈಜ್ಞಾನಿಕ ಚಿಂತನೆ ಹಾಗೂ ನವೋದ್ಯಮ ಮನೋಭಾವ ಬೆಳೆಸುವಲ್ಲಿ ವಿಜ್ಞಾನ ಸಂಪನ್ಮೂಲ ಕೇಂದ್ರದ ಪ್ರಯೋಗಾಲಯ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಈ ಸಾಧನೆ ಸಾಕ್ಷಿಯಾಗಿದೆ.

    ವಿದ್ಯಾರ್ಥಿ ಹೃತಿಕ್.ಹೆಚ್ ಮತ್ತು ಮಾರ್ಗದರ್ಶಕ ಶಿಕ್ಷಕ ರೇಣುಕರಾಜ್ ಜಿ.ಹೆಚ್ ಅವರ ಸಾಧನೆಗೆ  ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರಾದ ಮಾಧವರೆಡ್ಡಿ, ಡಯಟ್ ಪ್ರಾಂಶುಪಾಲರಾದ ಗಂಗಾಧರ್, ಪಾವಗಡದ ಕ್ಷೇತ್ರಶಿಕ್ಷಣಾಧಿಕಾರಿಗಳಾದ ರೇಣುಕಮ್ಮಎಂ., ಬಿ.ಆರ್.ಸಿ.ವೆಂಕಟೇಶಪ್ಪ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪ್ರೇಮ್ ಕುಮಾರ್, ಉಪಾಧ್ಯಕ್ಷಿಣಿ ಕವಿತಮ್ಮ ಮತ್ತು ಸರ್ವ ಸದಸ್ಯರು, ಪ್ರಭಾರಿ ಮುಖ್ಯ ಶಿಕ್ಷಕ ರೇಣುಕರಾಜ್ ಜಿ.ಹೆಚ್.,   ಶಿಕ್ಷಕರಾದ ಹನುಮೇಶ್ ಎನ್., ಮೋಹನ್ ಕುಮಾರ್ ಜಿ.ಕೆ., ಕುಮಾರ್ ಎಸ್., ಅಭಿಷೇಕ್ ಎಂ.ವಿ.ಶಿಕ್ಷಕಿಯರಾದ ವಿಮಲಾ ಆರ್., ರಶ್ಮಿ ಸಿ.ಎಸ್., ಮಾನಸ ಎನ್., ಶ್ರೀಲಕ್ಷ್ಮೀ ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಾಧನೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Leave A Reply Cancel Reply

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಬೆಂಗಳೂರು: ರಾಜ್ಯದಲ್ಲಿ ವಿವಿಧ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸಲು ಆಸ್ತಿಗಳ ‘ಮಾರ್ಗಸೂಚಿ ದರ’ವನ್ನು (Guideline…

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.