ಬೀದರ್: ಜಿಲ್ಲೆಯ ಔರಾದ ತಾಲೂಕಿನ ಹಂದಿಕೇರಾ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ಎಸ್‌ಡಿಎಂಸಿ (SDMC) ಅಧ್ಯಕ್ಷರಾದ ಉಮಾಕಾಂತ ಬೋಸ್ಲೆ ಹಾಗೂ ಜ್ಞಾನೋಬಾ ವಾಗ್ಮಾರೆ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯಗುರುಗಳಾದ ರೋಹಿದಾಸ್ ಮೆತ್ರೆ ಹಾಗೂ ಆರ್.ಆರ್. ಪಾಟೀಲ್ ಅವರು ಗಣರಾಜ್ಯೋತ್ಸವದ ಮಹತ್ವದ ಕುರಿತು ಪ್ರಾಸ್ತವಿಕ ನುಡಿಗಳನ್ನಾಡಿ, ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು.
ಗಣರಾಜ್ಯೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಕ್ಕಳ ಭಾಷಣ ಸ್ಪರ್ಧೆ ಹಾಗೂ ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ವಿಶೇಷವಾಗಿ, 2025ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗ್ರಾಮದ ಹಿರಿಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಉಮಕಾಂತ್ ನಾಗಮಾರಪಳ್ಳಿ ಅಭಿಮಾನಿ ಬಳಗದ ವತಿಯಿಂದ ಅಮೂಲ್ ಬಿರಾದಾರ್ ಅವರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಲ್ಲರಿಗೂ ಶಂಕರ ಭೋಸಲೆ ಅವರು ಭೋಜನದ ವ್ಯವಸ್ಥೆ ಮಾಡಿದ್ದರು. ಇಡೀ ಕಾರ್ಯಕ್ರಮವನ್ನು ರಾಜಕುಮಾರ ವಡಗಾವಿ ಅವರು ಅಚ್ಚುಕಟ್ಟಾಗಿ ನಿರೂಪಿಸಿದರೆ, ಮನೋಜ್ ಕುಮಾರ್ ಸೋಮವಂಶಿ ಅವರು ವಂದನಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದ, ಗ್ರಾಮದ ಮುಖಂಡರು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


