ಗುಬ್ಬಿ: ಗುಬ್ಬಿ ತಾಲೂಕಿನ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹಲಸಿನ ನಾಗೇನಹಳ್ಳಿ ಗ್ರಾಮದ ಕಾಂತರಾಜು ಎರಡು ಮತಗಳ ಅಂತರದಲ್ಲಿ ಭರ್ಜರಿ ಜಯಗಳಿಸಿದರು.
ಈ ಹಿಂದೆ ಅಧ್ಯಕ್ಷರಾಗಿದ್ದ ನರಸಯ್ಯ ಅವರ ಅವಿಶ್ವಾಸದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂತರಾಜು ದಿಲೀಪ್ ಕುಮಾರ್ ಹಾಗೂ ಲೋಕೇಶ್ ಮೂರು ಜನ ನಾಮಪತ್ರವನ್ನು ಸಲ್ಲಿಸಿದ್ದರು.
ಮತ್ತಿಕೆರೆ ಗ್ರಾಮದ ಲೋಕೇಶ್ ರವರು ನಾಮಪತ್ರವನ್ನು ವಾಪಸ್ ಪಡೆದರು. ಚುನಾವಣೆ ಕಣದಲ್ಲಿ ಕಾಂತರಾಜು ಹಾಗೂ ದಿಲೀಪ್ ಕುಮಾರ್ ಇಬ್ಬರು ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಅಧಿಕಾರಿಗಳು ಚುನಾವಣೆಯನ್ನು ನಡೆಸಿದರು.
ಕಾಂತರಾಜ್ ಒತ್ತು ಮತಗಳನ್ನು ಪಡೆದರೆ ಪ್ರತಿಸ್ಪರ್ಧಿ ದಿಲೀಪ್ ಕುಮಾರ್ 8 ಮತಗಳನ್ನು ಪಡೆದು ಪರಾಜಿತಗೊಂಡರು 10 ಮತಗಳನ್ನು ಪಡೆದ ಕಾಂತರಾಜ್ ಅವರು ಅಧ್ಯಕ್ಷರಾಗಿ ಆಯ್ಕೆಯಾದರು. ಚುನಾವಣೆ ಪ್ರಕ್ರಿಯೆಯನ್ನು ಉಪ ತಹಶೀಲ್ದಾರ್ ಪ್ರಶಾಂತ್ ನಡೆಸಿಕೊಟ್ಟರು.
ನೂತನ ಅಧ್ಯಕ್ಷ ಕಾಂತರಾಜು ಮಾತನಾಡಿ, ನನ್ನನ್ನು ಅಧ್ಯಕ್ಷರಾಗಿ ಮಾಡಿದ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರಿಗೆ ಮೊದಲು ಅಭಿನಂದನೆ ಸಲ್ಲಿಸುತ್ತೇನೆ. ನಮ್ಮೆಲ್ಲಾ ಸದಸ್ಯರ ಸಹಕಾರದೊಂದಿಗೆ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಹಾಗೂ ಜನಪ್ರಿಯ ಶಾಸಕರಾದ ಶ್ರೀನಿವಾಸ್ ಅವರ ಸಹಕಾರ ಪಡೆದು ಅನುದಾನ ತಂದು ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಸಹಕರಿಸುತ್ತೇನೆ. ಜೊತೆಗೆ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುತ್ತೇನೆ ರಸ್ತೆ, ಬೀದಿ ದೀಪ, ಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಬದನಾಗಿದ್ದು ಗ್ರಾಮೀಣ ಭಾಗದ ಹಳ್ಳಿಗಾಡಿನ ಜನರಿಗೆ ಯಾವುದೇ ತೊಂದರೆ ಆಗದಂತೆ, ನೋಡಿಕೊಂಡು ನಮ್ಮೆಲ್ಲರ ಸದಸ್ಯರ ಸಹಕಾರದೊಂದಿಗೆ ಉತ್ತಮ ಕೆಲಸವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ರುಕ್ಮಿಣಿ ಗೋವಿಂದರಾಜು, ಸಿದ್ದಗಂಗಯ್ಯ, ಮೋಹನ್, ಕಂದಯ ಅಧಿಕಾರಿ ಮೋಹನ್ , ಹಾಗೂ ಗ್ರಾಮಸ್ಥರು ಸಿಬ್ಬಂದಿಗಳು ಭಾಗವಹಿಸಿದ್ದರು.
ವರದಿ: ಚೇತನ್ ಗೌಡ, ಗುಬ್ಬಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


