ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಗ್ರಾಮಯ ಅಧ್ಯಕ್ಷ ಸಿ.ಡಿ.ಪ್ರಭಾಕರ್ ಹಾಗೂ ಅಭಿವೃದ್ಧಿ ಅಧಿಕಾರಿ ರಂಗನರಸಯ್ಯ ನೇತೃತ್ವದಲ್ಲಿ ಪಂಚಾಯತಿ ವ್ಯಾಪ್ತಿಯ ವಿಶೇಷ ಚೇತನರ ಸಭೆ ನಡೆಯಿತು.
ಗ್ರಾ.ಪಂ. ಅಧ್ಯಕ್ಷ ಸಿ.ಡಿ.ಪ್ರಭಾಕರ್ ಮಾತನಾಡಿ, ವಿಶೇಷ ಚೇತನರ ಅಧಿನಿಯಮ 1995ರ ಕಾಯಿದೆಯಡಿ ವಿಶೇಷ ಚೇತನರಿಗೆ ನೀಡಬೇಕಾದ ಸೌಲಭ್ಯಗಳು, ಅನುದಾನ ಮೀಸಲು ಬಳಕೆ, ಸಬಲೀಕರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸ್ಪಷ್ಟವಾಗಿ ತಿಳಿಸಿದರು.
ಅನುದಾನದಲ್ಲಿ ಶೇ.3ರಷ್ಟನ್ನು ವಿಶೇಷ ಚೇತನರ ಸಬಲೀಕರಣಕ್ಕೆ ಮೀಸಲಿಡಬೇಕು. ಕ್ರಿಯಾ ಯೋಜನೆ ರೂಪಿಸಿ ಅನುದಾನವನ್ನು ಸದ್ಬಳಕೆ ಮಾಡಿಕೊಡಬೇಕು. ಸರ್ಕಾರವು ಅಂಗವಿಕಲರ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಬೇಕು.
ಪಡಿತರ ವಿತರಣೆಯಲ್ಲಿ ಅಂಗವಿಕರಿಗೆ ಮೊದಲ ಆದ್ಯತೆ ನೀಡಬೇಕು. ಬಸ್‌ಗಳಲ್ಲಿ ವಿಕಲಚೇತನರಿಗೆ ಮೀಸಲಿರುವ ಆಸನಗಳನ್ನು ವಿಕಲಚೇತನರಿಗೆ ಒದಗಿಸಲು ನಿರ್ವಾಹಕರು ನೆರವಾಗಬೇಕು. ಅಂಗವಿಕಲರ ವಸತಿ ನಿಲಯದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಬಸ್ ನಿಲ್ದಾಣದಲ್ಲಿ ಪೆಟ್ಟಿ ಅಂಗಡಿಗಳನ್ನು ಹಾಕಿಕೊಳ್ಳಲು ಅನುಮತಿ ನೀಡಿದರೆ ಅವರು ಸಹ ನಮ್ಮಂತೆಯೇ ಬದುಕು ಕಟ್ಟಿಕೊಂಡು ಜೀವನ ಸಾಗಿಸಲು ಸಹಾಯವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಸರಸ್ವತಮ್ಮ ಮಂಜುನಾಥ್, ಕಾರ್ಯದರ್ಶಿ ಮುನಿಯಯ್ಯ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಪದ್ಮ ಸೇರಿದಂತೆ ಇನ್ನಿತರರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


