ಸರಗೂರು: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಮಕ್ಕಳ ಬಗ್ಗೆ ಪೋಷಕರಿಗೆ ಇರುವಷ್ಟೇ ಶಿಕ್ಷಕರಿಗೂ ಇರುತ್ತದೆ ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈಸೂರು ಜಿಲ್ಲಾ ನಿರ್ದೇಶಕ ವಿ.ವಿಜಯ ಕುಮಾರ್ ನಾಗನಾಳ ತಿಳಿಸಿದರು.
ಪಟ್ಟಣದ ಪಟ್ಟಣ 11 ನೇ ವಾರ್ಡಿನ ವ್ಯಾಪ್ತಿಯ ಪಡುವಲ ವಿರಕ್ತ ಮಠದ ಶ್ರೀ ಕಾಳ ಓಡಯ ಗುರುಗಳ ಮಹಾವಿಧ್ಯಾಪೀಠದಲ್ಲಿ ಶನಿವಾರದಂದು ಗುರುಕುಲೋತ್ಸವ 2026 ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದರು.
ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳ ಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು.
ರಾಷ್ಟ್ರನಾಯಕರು, ಮಹಾನ್ ವ್ಯಕ್ತಿಗಳ ಸಾಧನೆ ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿ ಪ್ರೇರಣೆಯಾಗಬೇಕು’ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಠದ ಮಹದೇವಸ್ವಾಮಿಗಳು ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಾಲೆಗಳು ಹೊಣೆಗಾರಿಕೆ ಬಹುಮುಖ್ಯವಾದರೂ ಪೋಷಕರು ಜವಾಬ್ದಾರಿಯೂ ಅಷ್ಟೇ ಸಮನಾಗಿದೆ. ವಿದ್ಯೆ ಮನುಷ್ಯನ ಬಾಳು ಬೆಳಸುತ್ತದೆ. ಎತ್ತರಕ್ಕೆ ಬೆಳೆದ ವ್ಯಕ್ತಿ ಸಮಾಜದ ಪ್ರಗತಿ, ದೇಶದ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.
ಪಟ್ಟಣ ಪಂಚಾಯತಿ ಸದಸ್ಯ ಚೆಲುವ ಕೃಷ್ಣ ಮಾತನಾಡಿ ‘ಗ್ರಾಮಸ್ಥರು ಹಾಗೂ ದಾನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು’ ಎಂದರು.
‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಅಗತ್ಯ. ಪೋಷಕರು ಮಕ್ಕಳ ಪ್ರೌಢಶಿಕ್ಷಣ ಮುಗಿದ ನಂತರ ಪಿಯುಸಿ ವ್ಯಾಸಂಗಕ್ಕೆ ಪಟ್ಟಣ ಹಾಗೂ ನಗರ ಪ್ರದೇಶದ ಉತ್ತಮ ಕಾಲೇಜುಗಳಿಗೆ ಸೇರಿಸಿ ಅವರಿಗೆ ಉನ್ನತ ಶಿಕ್ಷಣ ಕೊಡಿಸುವತ್ತ ಚಿಂತನೆ ಹರಿಸಬೇಕು’ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಯೋಜನಾಧಿಕಾರಿ ವಿ.ಭಾಸ್ಕರ್ ಮಾತನಾಡಿ, ‘ಪೋಷಕರು ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರ ಹಾಗೂ ಹವ್ಯಾಸಗಳನ್ನು ಕಲಿಸುವತ್ತ ಗಮನ ಹರಿಸಬೇಕು. ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರುವಾಗಿದ್ದು, ಉತ್ತಮ ಪರಿಸರದಲ್ಲಿ ಮಕ್ಕಳು ಬೆಳೆಯುವ ವಾತಾವರಣ ನಿರ್ಮಿಸಬೇಕು’ ಎಂದರು.
ಶಾಲೆಯ ಆಡಳಿತಾಧಿಕಾರಿ ಕೆ.ಕೆಂಪಣ್ಣ ಶಾಲಾ ಚಟುವಟಿಕೆಗಳ ಹಾಗೂ ಶಾಲೆಯ ವರದಿಯನ್ನು ಮಂಡಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳು ಮನರಂಜನೆ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕಿ ಎಸ್.ಪೂಜಾ, ಕೆಂಪಣ್ಣ, ನಂದಿನಿ, ಸೌಜನ್ಯ, ಪಲ್ಲವಿ, ವೈಷ್ಣವಿ, ಚಂದನ, ಉಮಾಮಹೇಶ್ವರಿ, ಹರಿಪ್ರಿಯಾ, ನವೀನ್ ಕುಮಾರ್, ಶಿಕ್ಷಕ ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


