nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ

    February 5, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ
    • ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ
    • ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ
    • ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ
    • ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು
    • ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ
    • ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ
    ತುಮಕೂರು February 5, 2026

    ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ

    By adminFebruary 5, 2026No Comments2 Mins Read
    siddalingaiah

    ತುಮಕೂರು: ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ, ಬಡವರ ನೋವನ್ನು ತಮ್ಮ ಬರವಣಿಗೆಯ ಮೂಲಕ ಜಗತ್ತಿಗೆ ಸಾದರಪಡಿಸಿದ ಸಾಹಿತ್ಯ ಲೋಕದ ಅಪ್ರತಿಮ ದೈತ್ಯ ಪ್ರತಿಭೆ ದಲಿತ ಕವಿ ಡಾ. ಸಿದ್ದಲಿಂಗಯ್ಯನವರ ಜನ್ಮ ದಿನಾಚರಣೆಯನ್ನು ನಗರದ ಅಮಾನಿಕೆರೆ ಗಾಜಿನ ಮನೆಯ ಆವರಣದಲ್ಲಿ ಆಚರಿಸಲಾಯಿತು.

    ದಲಿತ ಕವಿ ಸಿದ್ಧಲಿಂಗಯ್ಯರವರ ಕುರಿತು ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್ ಮಾತನಾಡುತ್ತಾ, ಕಾವ್ಯವನ್ನೇ ಖಡ್ಗವಾಗಿಸಿಕೊಂಡು ದಲಿತರ ಪರವಾಗಿ ಸಾಮಾಜಿಕ ಸಮಾನತೆಗಾಗಿ ತಮ್ಮ ಬದುಕಿನದ್ದಕ್ಕೂ ಹೋರಾಟ ನಡೆಸಿದ ಕನ್ನಡದ ಹೆಮ್ಮೆಯ ಬಂಡಾಯ ಕವಿಯಾಗಿದ್ದವರು ಡಾ.ಸಿದ್ದಲಿಂಗಯ್ಯನವರು. ಅವರು ಬಡ ಕುಟುಂಬವೊಂದರಲ್ಲಿ  ದೇವಯ್ಯ ಮತ್ತು ವೆಂಕಟಮ್ಮನವರ ಪುತ್ರರಾಗಿ 1954ರ ಫೆಬ್ರವರಿ ೩ರಂದು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಂಚನಬೆಲೆಯಲ್ಲಿ ಜನಿಸಿದರು.


    Provided by
    Provided by

    ಪ್ರೊ. ಜಿ.ಎಸ್. ಶಿವರುದ್ರಪ್ಪನವರ ಮಾರ್ಗದರ್ಶನದಲ್ಲಿ `ಗ್ರಾಮದೇವತೆಗಳು’ ಎಂಬ ಪ್ರೌಢ ಪ್ರಬಂಧವನ್ನು ಮಂಡಿಸಿ 1989ರಲ್ಲಿ ಪಿಎಚ್.ಡಿ. ಪದವಿಯನ್ನು ಗಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಸಿದ್ಧಲಿಂಗಯ್ಯನವರು, ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿನ ಅಸಮಾನತೆಗಳ ಬಗ್ಗೆ ತಮ್ಮೊಳಗೆ ಮೊಳೆಯುತ್ತಿದ್ದ ಸಿಟ್ಟು, ಆಕ್ರೋಶಗಳನ್ನು ವ್ಯಕ್ತಿಪಡಿಸಲು ಸಿದ್ಧಲಿಂಗಯ್ಯನವರು ಆಯ್ದುಕೊಂಡದ್ದು ಕಾವ್ಯ ಮಾಧ್ಯಮ. ಹೀಗೆ ಅವರು ಬರೆದ ಹಲವಾರು ಕವನಗಳ ಸಂಕಲನ `ಹೊಲೆಮಾದಿಗರ ಹಾಡು’ 1975ರಲ್ಲಿ ಪ್ರಕಟಗೊಂಡಿತು. ಮುಂದೆ ಅವರ `ಸಾವಿರಾರು ನದಿಗಳು’, `ಕಪುö್ಪಕಾಡಿನ ಹಾಡು’, `ಮೆರವಣಿಗೆ’,  `ನನ್ನ ಜನಗಳು ಮತ್ತು ಇತರ ಕವಿತೆಗಳು’, `ಆಯ್ದ ಕವನಗಳು’ ಮುಂತಾದ ಕವನ ಸಂಕಲನಗಳು ಪ್ರಕಟಗೊಂಡಿವೆ, ಇಂತಹ ಮಹಾನ್ ಚೇತನರ ಜನ್ಮ ದಿನಾಚರಣೆಯನ್ನು ಮಾಡುತ್ತಾ ಅವರು ಸಮಾಜಕ್ಕಾಗಿ ಮಾಡಿರುವ ಸೇವಾ ಕಾರ್ಯಗಳನ್ನು ನೆನೆಯುವುದಕ್ಕೆ ಬಹಳ ಗರ್ವವೆನ್ನಿಸುತ್ತದೆ ಎಂದರು.

    ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್ ಮಾತನಾಡುತ್ತಾ ಸಿದ್ಧಲಿಂಗಯ್ಯನವರ `ಪಂಚಮ ಮತ್ತು ನೆಲಸಮ’, `ಏಕಲವ್ಯ’ ಪ್ರಮುಖ ನಾಟಕಗಳು, ಇವಲ್ಲದೆ ರಸಗಳಿಗೆಗಳು, ಎಡಬಲ, ಹಕ್ಕಿನೋಟ, ಜನಸಂಸ್ಕೃತಿ ಉರಿಕಂಡಾಯ ಮುಂತಾದ ಲೇಖನಗಳನ್ನು ಬರೆದ ಖ್ಯಾತಿ ಅವರಿಗೆದೆ ಅವರ `ಊರು ಕೇರಿ’ ಆತ್ಮಕಥೆ ಇಂಗ್ಲಿಷ್ ಹಾಗೂ ತಮಿಳಿಗೂ ಅನುವಾದಗೊಂಡಿದ್ದು ಇಂಗ್ಲಿಷ್ ಅನುವಾದವನ್ನು ಕೇಂದ್ರ ಸಾಹಿತ್ಯ ಅಕಾಡಮಿಯು ಪ್ರಕಟಿಸಿದೆ. ಅವರ ಹಲವಾರು ಕವಿತೆಗಳು ಇಂಗ್ಲಿಷ್, ಹಿಂದಿ, ತಮಿಳು, ಬಂಗಾಳಿ, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಅನುವಾದಗೊಂಡಿವೆ, ನಮ್ಮ ರಾಜ್ಯಕ್ಕೆ ಅತ್ಯಂತ ಕೀರ್ತಿ ತಂದುಕೊಟ್ಟ ಮಹಾನ್ ಕವಿ ಆಗಿದ್ದರು, ಅವರು ಅಪಾರ ದಲಿತ ವಿದ್ಯಾಮಣಿಗಳಿಗೆ ಕೀರ್ತಿಪ್ರದಾಯಕರೂ ಸಹ ಹೌದು ಎಂದರು.

    ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಎಸ್.ಲಕ್ಷ್ಮೀನಾರಾಯಣರವರು ಮಾತನಾಡಿ, ಸಿದ್ಧಲಿಂಗಯ್ಯನವರ ಸೃಜನಶೀಲ ಸಾಹಿತ್ಯ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ಡಾ.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ.ಅಂಬೇಡ್ಕರ್ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ ಮುಂತಾದ ಪ್ರಶಸ್ತಿ ಗೌರವಗಳು ಸಂದಿದ್ದವು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ  ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ತುಮಕೂರು ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎನ್., ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮೀನಾರಾಯಣ ಎಸ್., ಯುವ ಘಟಕದ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಅಟ್ರಾಸಿಟಿ ಕಮಿಟಿ ಸದಸ್ಯರಾದ ಗೋವಿಂದರಾಜ್ ಕೆ., ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಟೈಲರ್ ಜಗದೀಶ್, ಯುವ ಘಟಕದ ಕಾರ್ಯಾಧ್ಯಕ್ಷರಾದ ಮಾರ್ಗೋ ವೆಂಕಟೇಶ್ ಕೊತ್ತಿಹಳ್ಳಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ತ್ಯಾಗರಾಜ್ ಕೆ., ಕಾರ್ಮಿಕ ಘಟಕದ ತಾಲೂಕು ಅಧ್ಯಕ್ಷರಾದ ಹನುಮನರಸಯ್ಯ, ಮುಖಂಡರುಗಳಾದ ನಟರಾಜ್ ಜಿ.ಎಲ್., ಇಲ್ಲಾಸ್ ಅಹಮದ್, ನಿರಂಜನ್, ಮಾರ್ಕೆಟ್ ಮಣ್ಣೆಪ್ಪ, ರಂಗಸ್ವಾಮಯ್ಯ ಕೊತ್ತಿಹಳ್ಳಿ, ಮಂಜುನಾಥ್, ಟಿ.ಎನ್. ನರಸಿಂಹಮೂರ್ತಿ, ಮೋಯಿನ್ ಅಹಮದ್, ಇನ್ನು ಮುಂತಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026

    Leave A Reply Cancel Reply

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    ತುಮಕೂರು: ಪ್ರವಾಸಿ ಸ್ಥಳಗಳಲ್ಲಿ ಶಾಲಾ ಹಾಗೂ ಪ್ರವಾಸಿಗ ಮಕ್ಕಳ ಸುರಕ್ಷತೆ ಖಾತರಿಪಡಿಸಲು ನಿಯಮ ಅಳವಡಿಸುವ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ…

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ

    February 5, 2026

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.