ತುಮಕೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಪ್ರಮುಖ ಹೇಳಿಕೆ ನೀಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಜೆಡಿಎಸ್ ಜೊತೆಗಿನ ಮೈತ್ರಿ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅನಿವಾರ್ಯವಾಗಿದೆ. ಈ ಸಂಬಂಧ ಈಗಾಗಲೇ ನವದೆಹಲಿಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲಾಗಿದೆ,” ಎಂದು ತಿಳಿಸಿದರು.
ಮೆಟ್ರೊ ದರ ಏರಿಕೆಗೆ ಆಕ್ರೋಶ: ಇದೇ ಸಂದರ್ಭದಲ್ಲಿ ಬೆಂಗಳೂರಿನ ಮೆಟ್ರೊ ಪ್ರಯಾಣ ದರ ಹೆಚ್ಚಳದ ಕುರಿತು ರಾಜ್ಯ ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದರು. “ಈಗಾಗಲೇ ಜನಸಾಮಾನ್ಯರು ಜೀವನ ನಡೆಸಲು ಕಷ್ಟಪಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮೆಟ್ರೊ ದರ ಏರಿಕೆ ಮಾಡಿರುವುದು ಸರಿಯಲ್ಲ. ಸರ್ಕಾರ ಕೂಡಲೇ ಹೆಚ್ಚಿಸಿರುವ ದರವನ್ನು ವಾಪಸ್ ಪಡೆಯಬೇಕು,” ಎಂದು ಅವರು ಆಗ್ರಹಿಸಿದರು.
ಈ ಮೂಲಕ ಮುಂಬರುವ ಚುನಾವಣೆಗಳಲ್ಲಿ ಮೈತ್ರಿಕೂಟ ಒಗ್ಗಟ್ಟಿನಿಂದ ಸ್ಪರ್ಧಿಸಲಿದೆ ಎಂಬ ಬಲವಾದ ಸಂದೇಶವನ್ನು ಯಡಿಯೂರಪ್ಪ ರವಾನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


