ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು ಈಗ ನಮ್ಮ ಜೊತೆಯಲ್ಲಿಲ್ಲ” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಮೈಸೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದ ಬಗ್ಗೆ ನಿಯತ್ತು ಮತ್ತು ನಿಷ್ಠೆ ಇಲ್ಲದವರನ್ನು ಜೊತೆಯಲ್ಲಿ ಇಟ್ಟುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಗುಡುಗಿದ್ದಾರೆ. “ನನ್ನ ಮುಂದೆ ಪದೇಪದೆ ಅವರ ಹೆಸರು ಪ್ರಸ್ತಾಪ ಮಾಡಬೇಡಿ. ಮುಖ್ಯಮಂತ್ರಿಗಳಿಗೆ ಪ್ರಮಾಣಪತ್ರ ನೀಡುವ ಅವರು, ನಮ್ಮ ವಿರುದ್ಧವೇ ಮಾತನಾಡುತ್ತಾರೆ. ಇಂತಹ ವರ್ತನೆ ತೋರುವವರನ್ನು ನಾವು ಹೇಗೆ ಸಹಿಸಲು ಸಾಧ್ಯ?” ಎಂದು ಪ್ರಶ್ನಿಸಿದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಮೆಟ್ರೋ ದರ ಏರಿಕೆಗೆ ಕೇಂದ್ರವನ್ನು ಹೊಣೆ ಮಾಡುವುದು ಸರಿಯಲ್ಲ ಎಂದರು. ಮಂಡ್ಯದಲ್ಲಿ 500 ಕೋಟಿ ರೂ. ವೆಚ್ಚದ ಆಟೋಮೋಟಿವ್ ಸಂಶೋಧನಾ ಕೇಂದ್ರ ಸ್ಥಾಪನೆಗೆ ಭೂಮಿ ನೀಡುವಂತೆ ಸಿಎಂಗೆ ಪತ್ರ ಬರೆದಿರುವುದಾಗಿ ತಿಳಿಸಿದ ಅವರು, ಸಮಯ ಬಂದಾಗ ತಾವು ರಾಜ್ಯ ರಾಜಕೀಯಕ್ಕೆ ಮರಳುವುದಾಗಿ ಮಾರ್ಮಿಕವಾಗಿ ನುಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


