nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    ಕೊರಟಗೆರೆ February 10, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    By adminFebruary 10, 2026No Comments3 Mins Read
    sidharabetta shivarathri

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ ಜನರಿಗೆ ಆಧ್ಯಾತ್ಮಿಕ ಚಿಂತನೆಯನ್ನ ಮೂಡಿಸಬೇಕು ಎಂದು ಸಿದ್ದರಬೆಟ್ಟದಲ್ಲಿ ಅದ್ದೂರಿ ಜಾಗರಣೆ ಮಹೋತ್ಸವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ತಿಳಿಸಿದರು.

    ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಸಿದ್ದರಬೆಟ್ಟ ಶ್ರೀ ಕ್ಷೇತ್ರದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

    ನಮ್ಮ ಗ್ರಾಮೀಣ ಭಾಗದಲ್ಲಿ ಇದೇ ಪ್ರಥಮ ಬಾರಿಗೆ ಶ್ರೀ ಮಠದಲ್ಲಿ ಶಿವರಾತ್ರಿ ಹಬ್ಬದಂದು ಜಾಗರಣೆ ಮಾಡುವ ವಿಶೇಷ ಕಾರ್ಯಕ್ರಮಗಳನ್ನ ಎಲೆರಾಂಪುರ ಶ್ರೀಗಳು ಮಾರ್ಗದರ್ಶನ ಹಾಗೂ ಯುವ ಉದ್ಯಮಿ ಹಾಗೂ ಪರ್ವ ಗ್ರೂಪ್ ನ ಅಧ್ಯಕ್ಷರಾದ ನಿಲೇಶ್ ಅವರ ನೇತೃತ್ವದಲ್ಲಿ ಈ ಜಾಗರಣಾ ಮಹೋತ್ಸವವನ್ನ ಏರ್ಪಡಿಸಲಾಗಿದ್ದು, ಹಬ್ಬದ ದಿನದಂದು ಸಂಜೆ 6 ಗಂಟೆಗೆ ಪ್ರಾರಂಭವಾದ ಕಾರ್ಯಕ್ರಮ ಬೆಳಗಿನ ಜಾವದವರೆಗೂ ನಡೆಯಲಿದೆ. ಶಿವರಾತ್ರಿ ಹಬ್ಬದಂದು ಜಾಗರಣೆಗೆ ಬರುವ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಭಾಗವಹಿಸುವರು. ಬರುವ ಎಲ್ಲಾ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

    ಗ್ರಾಮೀಣ ಭಾಗದ ಒಬ್ಬ ಯುವಕ ಇಂದು ಹೊರ ದೇಶವಾದ ದುಬೈನಲ್ಲಿ ಉದ್ಯಮ ಮಾಡಿ ಬಹಳಷ್ಟು ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವ ಮೂಲಕ ಮತ್ತು ತಾಯ್ನುಡಿನಲ್ಲಿ ಬಂದು ಇಂತಹ ಧಾರ್ಮಿಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿ ಧರ್ಮ ಜಾಗೃತಿ ಮೂಡಿಸುತ್ತಿರುವ ಹೆಮ್ಮೆಯ ವಿಷಯವಾಗಿ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನ ವಹಿಸಿಕೊಂಡಿದ್ದಾರೆ ಎಂದು ತಿಳಿಸಿದರು.

    ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ಮಾತನಾಡಿ, ಶಿವರಾತ್ರಿ ಜಾಗರಣೆ ಮಹೋತ್ಸವ ಜನರಲ್ಲಿ ಭಕ್ತಿ ಭಾವ ಹೆಚ್ಚು ಮಾಡಲಿ. ಈ ಜಾಗರಣೆಯಿಂದ ಜನರು ಜಾಗೃತರಾಗಬೇಕು. ಇದೆ ಪ್ರಥಮವಾಗಿ ಜಿಲ್ಲೆಯಲ್ಲೇ ಎಲ್ಲಿಯೂ ಮಾಡದಂತ ಜಾಗರಣಾ ಕಾರ್ಯಕ್ರಮಕ್ಕೆ ಸುಮಾರು ಒಂದು ಕೋಟಿ ರೂ ಖರ್ಚಿನಲ್ಲಿ ಉದ್ಯಮಿ ನೀಲೇಶ್ ಅವರು ಈ ಕಾರ್ಯಕ್ರಮದ ಜವಾಬ್ದಾರಿಯನ್ನ ವಹಿಸಿಕೊಂಡಿದ್ದಾರೆ. ಈ  ಜಾಗರಣೆ ಕಾರ್ಯಕ್ರಮದಲ್ಲಿ ಹೆಸರಾಂತ ಸಿನಿಮಾ ನಟರು ರಿಯಾಲಿಟಿ ಶೋ ಹಾಗೂ ಭಕ್ತಿಗೀತೆ ಗಾಯಕರು ಶಿವ ಮತ್ತು ನಂದಿ ಸೇರಿದಂತೆ ಧಾರ್ಮಿಕ ಇರುವ ಎಲ್‌ ಇ ಡಿ ಲೇಜರ್ ಶೋ, ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಕೊರಟಗೆರೆ ಸೇರಿದಂತೆ ಜಿಲ್ಲೆಯ ಹೆಚ್ಚು ಹೆಚ್ಚು ಜನರು ಈ ಕಾರ್ಯಕ್ರಮಕ್ಕೆ ಆಗಮಿಸಿ ಶಿವರಾತ್ರಿ ಜಾಗರಣೆ ಯಶಸ್ವಿಗೊಳಿಸಿ ಎಂದು ತಿಳಿಸಿದರು.

    ಉದ್ಯಮಿ ನೀಲೇಶ್ ಮಾತನಾಡಿ, ಇತ್ತೀಚಿನ ಪೀಳಿಗೆಗೆ ಧರ್ಮದ ಬಗ್ಗೆ, ಧರ್ಮ ಜಾಗೃತಿಯ ಅರಿವು ಮೂಡಿಸಲು ಮಹಾಶಿವರಾತ್ರಿ ಹಬ್ಬದೊಂದ ಸಿದ್ದರಬೆಟ್ಟದ ಶ್ರೀ ಮಠದ ಅವರಣದಲ್ಲಿ ಅದ್ದೂರಿ ಜಾಗರಣೆ ಮಹೋತ್ಸವವನ್ನ ಏರ್ಪಡಿಸಲಾಗಿದ್ದು, ಅಂದು ಜಾಗರಣೆಯಲ್ಲಿ ಮನರಂಜನೆ, ಶಿವ ಭಜನೆ, ಹಾಡುಗಳು ಹಾಗೂ ಹಾಸ್ಯ, ಜಾನಪದ ನೃತ್ಯ ಎಲ್ಲಾ ತರಹದ ಕಾರ್ಯಕ್ರಮ ಇರುವುದು ಸೇರಿದಂತೆ ಹೆಸರಾಂತ ಸಿನಿಮಾ ನಟರು ರಿಯಾಲಿಟಿ ಶೋ ಸ್ಪರ್ಧಿಗಳು ಹಾಗೂ ಭಕ್ತಿಗೀತೆ ಗಾಯಕರು ಇನ್ನೂ ಅನೇಕ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

    ಅಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಲಿದ್ದಾರೆ. ಇವರ ಜೊತೆ ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಮಧುಗಿರಿ ಶಾಸಕ ರಾಜಣ್ಣ, ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ಮಠಾಧೀಶರು, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

    ಈ ಕಾರ್ಯಕ್ರಮಕ್ಕೆ ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್, ಚಲನಚಿತ್ರ ನಟರಾದ ರವಿಚಂದ್ರನ್ ಜಗ್ಗೇಶ್, ಡಾಲಿ ದನಂಜಯ್, ನಿರೂಪಕಿ ಅನುಶ್ರೀ, ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ, ಅವರಿಂದ ಸಂಗೀತ, ಜನಪದ ಗಾಯಕರಾದ ಅಂಕಿತ ಕುಂಡು, ಅನುಪಮ ಭಟ್ ಸೇರಿದಂತೆ ಹೆಸರಾಂತ ಸಿನಿಮಾ ನಟರು ರಿಯಾಲಿಟಿ ಶೋ ಸ್ಪರ್ಧಿಗಳು ಹಾಗೂ ಭಕ್ತಿಗೀತೆ ಗಾಯಕರು ಇನ್ನೂ ಅನೇಕ ಗಣ್ಯರು ಆಗಮಿಸಲಿದ್ದಾರೆ.

    ಪರ್ವ ಗ್ರೂಪ್ ನ ಉದ್ಯಮಿ ನೀಲೇಶ್ ಮಾತನಾಡಿ, ಇದೇ ಪ್ರಪ್ರಥಮವಾಗಿ ನನ್ನ ತವರು ತಾಲ್ಲೂಕು ಆದ ಕೊರಟಗೆರೆ ತಾಲ್ಲೂಕಿನ ಸಿದ್ದರ ತಪೋ ಭೂಮಿ ಸಿದ್ದರಬೆಟ್ಟದಲ್ಲಿ ಮಹಾಶಿವರಾತ್ರಿ ಅಂಗವಾಗಿ ಅದ್ದೂರಿಯಾಗಿ ಜಾಗರಣೆ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿದ್ದು, ಇದರಲ್ಲಿ ಯಾವುದೇ ನನ್ನ ವೈಯಕ್ತಿಕ ಇಲ್ಲದೆ ಧರ್ಮ ರಕ್ಷಣೆ, ಧರ್ಮ ಜಾಗೃತಿ ಸೇರಿದಂತೆ ಧಾರ್ಮಿಕ ಸೇವೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.