ತುಮಕೂರು: ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಎಲ್. ಅವರು ಫೆಬ್ರವರಿ 17 ಮತ್ತು 18, ರಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿ, ವಿವಿಧ ಇಲಾಖಾವಾರು ಪರಿಶೀಲನೆ ಹಾಗೂ ಸಂವಾದ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಿಂದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಿದ್ಧತೆ ಕೈಗೊಳ್ಳುವಂತೆ ಸೂಚಿಸಲಾಗಿದೆ.
ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಸಿಟಿ ಕಾರ್ಪೊರೇಷನ್, ನಗರಸಭೆ, ಪುರಸಭೆಗಳಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳ ವಿವರ ಮತ್ತು ತೆರಿಗೆ ಹಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗದ ಅಭಿವೃದ್ಧಿಗೆ ವಿನಿಯೋಗಿಸುತ್ತಿರುವ ವಿವರಗಳ ಮಾಹಿತಿ ಕುರಿತು 18 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


