ತಿಪಟೂರು: ಪ್ರತಿ ಕ್ವಿಂಟಾಲ್ ಗೆ 4,886ರೂ. ಗಳ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮಾಡಲಾಗುತ್ತಿದೆ. ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಲಾಗಿದ್ದು, ಫಲಾನುಭವಿ ರೈತರು ಸ್ವತಃ ಖರೀದಿ ಕೇಂದ್ರಕ್ಕೆ ಬಂದು ಬಯೋಮೆಟ್ರಿಕ್ (ಬೆರಳುಚ್ಚು) ನೀಡುವ ಮೂಲಕ ರಾಗಿ ಮಾರಾಟ ಮಾಡಬೇಕು ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದ್ದಾರೆ.
ಸರ್ಕಾರ ಪ್ರತಿ ಚೀಲಕ್ಕೆ 50 ಕೆ.ಜಿ. 600 ಗ್ರಾಂ ತೂಕ ನಿಗದಿಪಡಿಸಿದ್ದು, ಯಾವುದೇ ಕಾರಣಕ್ಕೂ ಹೆಚ್ಚುವರಿ ರಾಗಿ ನೀಡಬಾರದು ಎಂದು ಸೂಚಿಸಿ, ನೋಂದಣಿ ಆಧಾರದ ಮೇಲೆ ಜೇಷ್ಠತಾ ಪಟ್ಟಿ ತಯಾರಿಸಿ ಮಾರುಕಟ್ಟೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ರೈತರು ತಮಗೆ ನಿಗದಿಪಡಿಸಿದ ದಿನಾಂಕದಂದು ಮಾತ್ರ ರಾಗಿ ಮಾರಾಟ ಮಾಡಬೇಕು.
ಮಾರಾಟ ಮಾಡಿದ ರೈತರಿಗೆ ನಿಗದಿಪಡಿಸಿದ ಅವಧಿಯೊಳಗೆ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಖರೀದಿ ಕೇಂದ್ರದಲ್ಲಿ ಯಾವುದೇ ಅವ್ಯವಹಾರ ನಡೆದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


