nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026
    Facebook Twitter Instagram
    ಟ್ರೆಂಡಿಂಗ್
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    ತುರುವೇಕೆರೆ February 14, 2026

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    By adminFebruary 14, 2026No Comments2 Mins Read
    masala jayaram

    ತುರುವೇಕೆರೆ: ಮುಂಬರುವ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ನಾನೇ ಅಭ್ಯರ್ಥಿ ಇದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು  ತುರುವೇಕೆರೆ ಮಾಜಿ ಶಾಸಕ ಮಸಾಲ ಜಯರಾಮ್ ಹೇಳಿದ್ದಾರೆ.

    ತುರುವೇಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಮುಂಬರುವ ವಿಧಾನ ಸಭಾ ಕ್ಷೇತ್ರ ಚುನಾವಣೆ ಟಿಕೆಟ್ ಗಾಗಿ ಈಗಲೇ ಸ್ಪರ್ಧೆ ಆರಂಭಗೊಂಡಿದೆ. ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ ಹಾಗೂ ಜೆಡಿಎಸ್  ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೊಡ್ಡಘಟ್ಟ ಚಂದ್ರೇಶ್ ನಡುವೆ ಬಿಜೆಪಿ –ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸ್ಪರ್ಧೆ ಸೃಷ್ಟಿಯಾದ ಬೆನ್ನಲ್ಲೇ ತುರುವೇಕೆರೆ ಮಾಜಿ ಶಾಸಕ ಮಸಾಲ ಜಯರಾಮ್ ಕೂಡ ಅಖಾಡಕ್ಕಿಳಿದಿದ್ದು,  ತುರುವೇಕೆರೆ ತಾಲೂಕಿನ ಮಾಯಸಂದ್ರ ರಸ್ತೆಯಲ್ಲಿರುವ ಚಿಕ್ಕೋನಹಳ್ಳಿ ಗೇಟ್ ಬಳಿಯಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.


    Provided by
    Provided by

    ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಎಲ್ಲರಿಗೂ ತಿಳಿದಿರುವ ವಿಚಾರ, ಆದರೆ ಕೆಲವರು ತಾಲೂಕಿನಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಸ್ವಯಂ ಘೋಷಿತ ಹೇಳಿಕೆಯನ್ನು ನೀಡುತ್ತಿದ್ದಾರೆ, ನಾನು ಕೂಡ ಈಗಾಗಲೇ ಈ ಹಿಂದೆ ನಡೆದ ಚುನಾವಣೆಯಲ್ಲಿ ಸುಮಾರು 60 ಸಾವಿರಕ್ಕೂ ಹೆಚ್ಚು ಮತ  ಪಡೆದಿದ್ದೇನೆ, ತಾಲೂಕಿನಲ್ಲಿ ನಾನು ಸಹ ರಾಜಕಾರಣ ಮಾಡಲು ಇರುವುದು,  ಭಾರತೀಯ ಜನತಾ ಪಾರ್ಟಿಯಲ್ಲಿ ಪಕ್ಷ ಸಂಘಟನೆ ಮಾಡಿಕೊಂಡು ಬಂದಿದ್ದೇನೆ ಜೊತೆಗೆ ಒಂದು ಬಾರಿ ಶಾಸಕನಾಗಿಯೂ ಸಹ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಈ ಬಾರಿ ಕೆಲವು ಅಡಚಣೆಯಿಂದಾಗಿ ಕಡಿಮೆ ಅಂತರದಲ್ಲಿ ಸೋತಿರಬಹುದು ಆದರೆ ನಾನು ನನ್ನ ಪಕ್ಷದಲ್ಲಿ ನಿಷ್ಠೆಯಿಂದ ಈಗಲೂ ಸಹ ಪಕ್ಷ ಸಂಘಟನೆ ಮಾಡುತ್ತಿದ್ದು ಮೊದಲಿಗಿಂತಲೂ ನನ್ನ ಕಾರ್ಯಕರ್ತರು ಈ ಬಾರಿ ಹೆಚ್ಚಾಗಿದ್ದು ಕಾರ್ಯಕರ್ತರು ಸಹ ಪಕ್ಷ ಸಂಘಟನೆಯಲ್ಲಿ ನಿಷ್ಠೆಯಿಂದ ತೊಡಗಿದ್ದಾರೆ ಜೊತೆಗೆ ಈಗಾಗಲೇ ಕೇಂದ್ರದ ಹಿರಿಯ ನಾಯಕರು ಹೆಚ್ಚಿನ ಪಕ್ಷ ಸಂಘಟನೆಯನ್ನು ಮಾಡಲು ಸೂಚಿಸಿದ್ದು ಮುಂದೆಯೂ ಸಹ ಸಂಘಟನೆಯಲ್ಲಿ ತೊಡಗಲಿದ್ದೇನೆ  ಎಂದರು.

    ಯಾವುದೇ ಕಾರಣಕ್ಕೂ ಹಿಂಜರಿಯುವ ಮಾತೇ ಇಲ್ಲ ಮುಂಬರುವ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ನಾನೇ ಅಭ್ಯರ್ಥಿ, ಇದನ್ನು ಯಾರು ತಡೆಯಲು ಸಾಧ್ಯವಿಲ್ಲ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ನಾನು ಕೂಡ ಬಿಜೆಪಿಯಿಂದ ಅಭ್ಯರ್ಥಿಯಾಗುವುದು ಅಷ್ಟೇ ಸತ್ಯ. ಈಗಾಗಲೇ ನನ್ನ ಪಕ್ಷದ ಹಿರಿಯ ನಾಯಕರು ಸಹ ನನಗೆ ಟಿಕೆಟ್ ಭರವಸೆ ನೀಡಿದ್ದು ಎನ್ ಡಿ ಎ ಮೈತ್ರಿಯಿಂದ ಮುಂದಿನ ಅಭ್ಯರ್ಥಿ ನಾನೇ ಎಂದು ಸ್ಪಷ್ಟನೆ ನೀಡಿದರು.

    ತಾಲೂಕಿನಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಮತ್ತು ಕಾರ್ಯಕರ್ತರು ಸಹ ಮುಂದಿನ ಅಭ್ಯರ್ಥಿ ನೀವೇ ಹಾಗೆ ನಿಮ್ಮ ಪರವಾಗಿ ನಾವುಗಳು ಸದಾ ಜೊತೆ ಇರುತ್ತೇವೆ ಎಂದು ಹೆಚ್ಚಿನ ಭರವಸೆ ನೀಡಿದ್ದು, ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ, ತಾಲೂಕಿನಲ್ಲಿ ಜೆಡಿಎಸ್ ಪಕ್ಷದ ಹಾಲಿ ಶಾಸಕರಾದ ಎಂ.ಟಿ.ಕೃಷ್ಣಪ್ಪ  ಮುಂದಿನ ಅಭ್ಯರ್ಥಿ ನಾನೇ ಎಂದು ಹೇಳಿಕೆ ನೀಡಿರುವುದು ಕೆಲವು ಮಾಧ್ಯಮದ ಮೂಲಕ ತಿಳಿದಿದ್ದೇನೆ, ಬಹುಶಃ ಜೆಡಿಎಸ್ ಬಿಜೆಪಿ ಮೈತ್ರಿ ಇರುವುದರಿಂದ ಮುಂಬರುವ ಚುನಾವಣೆಯಲ್ಲಿ ಹಾಲಿ ಶಾಸಕರು ನನ್ನನ್ನೇ ಅಭ್ಯರ್ಥಿಯನ್ನಾಗಿಸಿ ಗೆಲ್ಲಿಸಬಹುದೇನೋ, ಕಾರ್ಯಕರ್ತರು ಯಾವುದೇ ಕಾರಣಕ್ಕೂ ಗೊಂದಲಕ್ಕೆ ಒಳಗಾಗದೆ ನೀವುಗಳು ನಿಷ್ಠೆಯಿಂದ ಪಕ್ಷ ಸಂಘಟನೆಯಲ್ಲಿ ತೊಡಗಿ ಟಿಕೆಟ್ ತರುವುದು ನನಗೆ ಬಿಡಿ ಎಂದರು.

    ಇದೇ ಸಂದರ್ಭದಲ್ಲಿ ತಾಲೂಕಿನ ಬಿಜೆಪಿ ಅಧ್ಯಕ್ಷ ಪ್ರಕಾಶ್ ಯಾದವ್, ಪ್ರಧಾನ ಕಾರ್ಯದರ್ಶಿ ಮಹೇಶ್, ಜಿಪಂ ಮಾಜಿ ಸದಸ್ಯ ಉಗ್ರಯ್ಯ, ಮುಖಂಡರಾದ ಕಡೆಹಳ್ಳಿ ಸಿದ್ದಯ್ಯ, ಅಂಜನ್ ಕುಮಾರ್, ಸೋಮೇನಹಳ್ಳಿ ಜಗದೀಶ್, ಚಿದಾನಂದ್, ಭುಗುಡನಹಳ್ಳಿ ಕೃಷ್ಣಮೂರ್ತಿ, ಮಂಜಣ್ಣ, ಇನ್ನು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ವಿಸ್ತರಣೆಯ ಕಸರತ್ತು ತೀವ್ರಗೊಂಡಿದ್ದು, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ…

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.