ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು ಸೇರಿ ಯಶಸ್ವಿಯಾಗಿ ರಕ್ಷಿಸಿದ್ದಾರೆ.
ಶನಿವಾರ ಬೆಳಿಗ್ಗೆ ತೋಟದ ಬಾವಿಯಲ್ಲಿ ಚಿರತೆ ಬಿದ್ದಿರುವುದನ್ನು ಗಮನಿಸಿದ ಗ್ರಾಮಸ್ಥರು ತೀವ್ರ ಆತಂಕಕ್ಕೊಳಗಾಗಿದ್ದರು. ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ, ಮಧ್ಯಾಹ್ನದವರೆಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಬಾರದ ಕಾರಣ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಬಾವಿಯೊಳಗೆ ಬಿದ್ದಿದ್ದ ಚಿರತೆಯು ನೀರಿನಲ್ಲಿ ಮುಳುಗದಂತೆ ಅಲ್ಲಿದ್ದ ಕಟ್ಟಿಗೆಯ ತುಂಡೊಂದರ ಮೇಲೆ ಆಸರೆ ಪಡೆದು ಕುಳಿತಿತ್ತು.
ಮಧ್ಯಾಹ್ನದ ನಂತರ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ, ಗ್ರಾಮಸ್ಥರ ಸಹಕಾರದೊಂದಿಗೆ ಬಾವಿಯೊಳಗೆ ಬಲೆಯನ್ನು ಇಳಿಸಿ ಚಿರತೆಯನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು. ರಕ್ಷಿಸಲಾದ ಚಿರತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿರತೆ ರಕ್ಷಣೆಯಾದ ಬಳಿಕ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


