nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ
    ಜಿಲ್ಲಾ ಸುದ್ದಿ February 16, 2026

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    By adminFebruary 16, 2026No Comments2 Mins Read
    beladakuppe

    ಸರಗೂರು:  ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಸ್ವಾಮಿಗೆ ಪವಿತ್ರ ಗಂಗಾ ಜಲದಿಂದ ಅಭಿಷೇಕ ಮತ್ತು ರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ ವಿಶೇಷ ಪೂಜೆ ನಡೆಸಲಾಯಿತು.

    ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹಾಗೂ ಬಂಡಿಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವ ಶ್ರೀಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ  ಅರ್ಚಕರು ನುಸುಕಿನ ವೇಳೆಯಲ್ಲಿ ಮಾದೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಮಾಡಿ ಗಂದಾಭಿಷೇಕ, ಪುಷ್ಷಭಿಷೇಕ, ಮಹಾ ಮಂಗಳಾರತಿ ಸೇವೆಯನ್ನು ನೆರವೇರಿಸಿದ ಬಳಿಕ ಭಕ್ತರ ಧರ್ಶನಕ್ಕೆ ಅನುವು ಮಾಡಿಕೊಡಲಾಯಿತು.

    ಮಹದೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಮಜ್ಜನದ ಬಾವಿ ಬಳಿ ಬಿಂದಿಗೆಗಳನ್ನು ಒಂದೆಡೆ ಇರಿಸಿ, ಜೊತೆಯಲ್ಲಿ ಎಳನೀರನ್ನು ಒಂದೆಡೆ ಇರಿಸಿ, ಮಂತ್ರ ಘೋಷ ಸಮೇತ ಪೂಜೆ ನೆರವೇರಿಸಿದರು. ನಂತರ ಮಜ್ಜನರ ಬಾವಿಗೆ ಗಂಗಾ ಪೂಜೆ ನೆರವೇರಿಸಿ, 101 ಬಿಂದಿಗೆಗೂ ಜಲ ತುಂಬಿಸಿದರು. ಬಳಿಕ ಅಲ್ಲಿಂದ ಛತ್ರಿ ಚಾಮರಗಳನ್ನು ಒಳಗೊಂಡು, ಮಂಗಳ ವಾದ್ಯಗಳ ಸಮೇತ ಮೆರವಣಿಗೆಯಲ್ಲಿ ಎಳನೀರು ಹಾಗೂ ಜಲವನ್ನು ಹೊತ್ತು ತಂದು, ದೇವಾಲಯದ ಹೊರ ಆವರಣದಲ್ಲಿ ಪ್ರದಕ್ಷಿಣೆ ಹಾಕಿ, ದೇವಾಲಯದ ಒಳಭಾಗದಲ್ಲಿ ಒಂದೆಡೆ ಇರಿಸಿದರು. ಮತ್ತೆ ಪೂಜೆ ನೆರವೇರಿಸಿದ ಬಳಿಕ ಮಾದೇಶ್ವರ ಸ್ವಾಮಿಗೆ ಎಳನೀರು ಅಭಿಷೇಕ ಹಾಗೂ ಜಲಾಭಿಷೇಕ ಮಾಡಲಾಯಿತು.

    ದೇವಸ್ಥಾನದಲ್ಲಿ ಸುತ್ತ ಹಸಿರು ತೋರಣ ಹಾಗೂ ಮುಂಭಾಗದಲ್ಲಿ ರಂಗೋಲಿ ಬಿಡಿಸಿ ಬೆಳಗಿನ ಜಾವದಿಂದಲೇ ಮಹದೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನಗಳು, ರುದ್ರಾಭಿಷೇಕ ಮಾಡಲಾಯಿತು.  ಅಂಗವಾಗಿ ನದಿಗೆ ತೆರಳಿ ಗಂಗೆ ಪೂಜೆ ನಡೆಸಿ ದೇವರ ದೇವರ ಉತ್ಸವಮೂರ್ತಿ ವಿವಿಧ ಹೂವಿನಿಂದ ಅಲಂಕರಿಸಿ ಭಕ್ತರು, ದಾರಿಯುದ್ದಕ್ಕೂ ಭಕ್ತರು  ಮಲೇಮಹದೇಶ್ವರನಿಗೆ  ಜೈಕಾರ ಕೂಗುವ ಮೂಲಕ ದೇವರಿಗೆ ನಮಿಸಿದರು.  ವಾದ್ಯಗೋಷ್ಠಿಗಳು ಮೊಳಗಿದವು. ಸತ್ತಿಗೆ ಸೂರಿಪಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಉತ್ಸವ ಮೂರ್ತಿಯು ದೇವಸ್ಥಾನದ ಬಳಿಗೆ ಬಂದ ಕೂಡಲೇ ದೇವಸ್ಥಾನ ಸುತ್ತ ಪ್ರದಕ್ಷಿಣೆ ಹಾಕಲಾಯಿತು. ನಂತರ ನೂರಾರು ಭಕ್ತರು ದೇವರ ದರ್ಶನ ಪಡೆದು ಹರಕೆ ತಿರಿಸಿದರು.

    ನಂತರ ಮಾತನಾಡಿದ ದೇವಸ್ಥಾನದ ಪಾರುಪತ್ತೇದಾರ ರಾಕೇಶ್ ಗೌಡ ರವರು ಮಹದೇಶ್ವರ ದೇವಸ್ಥಾನಕ್ಕೆ ಮಹಾಶಿವರಾತ್ರಿ, ಅಮಾವಾಸ್ಯೆ, ಹುಣ್ಣಿಮೆ, ಮತ್ತು ಕಾರ್ತಿಕ ಸೋಮವಾರ ಮತ್ತು ಶುಕ್ರವಾರ ವಿಶೇಷ ಪೂಜೆಗಳು ನಡೆಯುತ್ತವೆ. ಮುಖ್ಯವಾಗಿ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಮಂಗಳಾರತಿ, ಗಂಧದ ಅಭಿಷೇಕ, ಮತ್ತು ಪುಷ್ಪಾರ್ಚನೆಗಳನ್ನು ಬೆಳಗಿನಿಂದಲೇ ಹಮ್ಮಿಕೊಳ್ಳಲಾಗುತ್ತದೆ. ಮಹಾಶಿವರಾತ್ರಿಯಂದು ವಿಶೇಷ ಜಾಗರಣೆ ನಡೆಯುತ್ತದೆ.

    ಶಿವರಾತ್ರಿ ಹಬ್ಬದ ಹಾಗೂ ಅಮಾವಾಸ್ಯೆಯ ಅಂಗವಾಗಿ ಕೆಎಸ್ಸಾರ್ಟಿಸಿ 5 ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.ಪ್ರಸಾದ ವಿನಿಯೋಗ  ವ್ಯವಸ್ಥೆ ಮಾಡಲಾಗಿದೆ.ಇನ್ನೂ ಮುಂದಿನ ದಿನಗಳಲ್ಲಿ ಪ್ರತಿ ದಿನ ದೇವರ ದರ್ಶನ ಪಡೆಯಲು ಅವಕಾಶ ಇರುತ್ತದೆ ಎಂದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಔರಾದ್: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಸ್ವಚ್ಛ ಹಾಗೂ ಸುಸ್ಥಿರ ಸಮಾಜ ನಿರ್ಮಾಣಕ್ಕಾಗಿ ಏಕಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ…

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.