ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಹುದಿನಗಳಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಕಟಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಹಾಗೂ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ ಎಂದು ಮಾಹಿತಿ ನೀಡಿದ್ದಾರೆ.
ಪರೀಕ್ಷೆಯ ಸಮಯ:
ದ್ವಿತೀಯ ಪಿಯುಸಿ: ಪ್ರತಿದಿನ ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ.
ಎಸ್‌ಎಸ್‌ಎಲ್‌ಸಿ: ಪ್ರತಿದಿನ ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:15 ಗಂಟೆಯವರೆಗೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವೇಳಾಪಟ್ಟಿ:
- ಮಾರ್ಚ್ 18: ಪ್ರಥಮ ಭಾಷೆ
- ಮಾರ್ಚ್ 23: ವಿಜ್ಞಾನ
- ಮಾರ್ಚ್ 25: ದ್ವಿತೀಯ ಭಾಷೆ
- ಮಾರ್ಚ್ 28: ಗಣಿತ
- ಮಾರ್ಚ್ 30: ತೃತೀಯ ಭಾಷೆ
- ಏಪ್ರಿಲ್ 02: ಸಮಾಜ ವಿಜ್ಞಾನ
ದ್ವಿತೀಯ ಪಿಯುಸಿ ಪ್ರಮುಖ ಪರೀಕ್ಷಾ ದಿನಾಂಕಗಳು:
- ಫೆಬ್ರವರಿ 28: ಕನ್ನಡ, ಅರೇಬಿಕ್
- ಮಾರ್ಚ್ 03: ಇಂಗ್ಲಿಷ್
- ಮಾರ್ಚ್ 05: ಇತಿಹಾಸ
- ಮಾರ್ಚ್ 06: ಭೌತಶಾಸ್ತ್ರ
- ಮಾರ್ಚ್ 10: ಅರ್ಥಶಾಸ್ತ್ರ
- ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ
- ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಇದೇ ವೇಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಸಹ ಪ್ರಕಟಿಸಲಾಗಿದ್ದು, ಮೇ 18 ರಿಂದ ಮೇ 23 ರವರೆಗೆ ಎರಡನೇ ಪರೀಕ್ಷೆ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ. ಸುಲಲಿತವಾಗಿ ಪರೀಕ್ಷೆ ನಡೆಸಲು ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


