nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026
    Facebook Twitter Instagram
    ಟ್ರೆಂಡಿಂಗ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    • ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ
    • ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    ಕೊರಟಗೆರೆ February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    By adminFebruary 19, 2026No Comments1 Min Read
    koratagere

    ಕೊರಟಗೆರೆ: ಸಮಾಜದ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಅನನ್ಯ. ಆದರೆ ಅನೇಕ ಕಡೆಗಳಲ್ಲಿ ಇಂದಿಗೂ ಅವರನ್ನು ಕೀಳರಿಮೆಯಿಂದ ನೋಡುವ ಪ್ರವೃತ್ತಿ ಇದೆ. ಈ ಮನೋಭಾವನೆ ಬದಲಾಗಬೇಕಿದೆ ಎಂಬ ಮಾತಿಗೆ ಪೂರಕವಾಗಿ, ಕೊರಟಗೆರೆ ತಾಲ್ಲೂಕಿನ ಬೊಮ್ಮಲದೇವೀಪುರ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು ತಮ್ಮ ನಿಸ್ವಾರ್ಥ ಸೇವೆಯ ಮೂಲಕ ಇಡೀ ಜಿಲ್ಲೆಗೆ ಮಾದರಿಯಾಗಿದ್ದಾರೆ.

    ಈ ಪಂಚಾಯಿತಿ ವ್ಯಾಪ್ತಿಯ 19 ಗ್ರಾಮಗಳಲ್ಲಿ ವಾರಕ್ಕೆ ಎರಡು ದಿನ ಶಿಸ್ತುಬದ್ಧವಾಗಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇಲ್ಲಿನ ವಿಶೇಷವೆಂದರೆ, ಪಂಚಾಯಿತಿಯ ವಾಹನ ಚಾಲಕಿ ಆಶಾ, ಕಾರ್ಮಿಕರಾದ ಜಯಮ್ಮ ಮತ್ತು ನಾಗಮ್ಮ ಅವರ ಶ್ರದ್ಧೆ. ಪಂಚಾಯಿತಿ ನೀಡಿರುವ ಸ್ವಚ್ಛತಾ ವಾಹನದ ಮೂಲಕ ಪ್ರತಿ ಮನೆಬಾಗಿಲಿಗೆ ತೆರಳುವ ಇವರು, ‘ಕಸದ ಗಾಡಿ ಬಂದಿದೆ, ದಯವಿಟ್ಟು ಕಸ ನೀಡಿ’ ಎಂದು ಆತ್ಮೀಯವಾಗಿ ಕೂಗಿ ಕರೆಯುತ್ತಾರೆ. ಇವರ ಈ ನಯವಾದ ನಡವಳಿಕೆ ಮತ್ತು ಸೌಜನ್ಯದ ಮಾತುಗಳು ಗ್ರಾಮಸ್ಥರ ಮನಗೆದ್ದಿವೆ.


    Provided by
    Provided by

    ಕೇವಲ ಕಸ ವಿಲೇವಾರಿ ಮಾಡುವುದಷ್ಟೇ ಅಲ್ಲದೆ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿಯೂ ಇವರು ಯಶಸ್ವಿಯಾಗಿದ್ದಾರೆ. ಇವರ ಕಾರ್ಯವೈಖರಿಗೆ ಸ್ಪಂದಿಸುತ್ತಿರುವ ಗ್ರಾಮಸ್ಥರು, ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡುವ ಮೂಲಕ ಪೂರ್ಣ ಸಹಕಾರ ನೀಡುತ್ತಿದ್ದಾರೆ. “ಪೌರ ಕಾರ್ಮಿಕರು ಸಮಾಜದ ಮುಖ್ಯವಾಹಿನಿಯ ಭಾಗ. ಅವರು ನೀಡುವ ಗೌರವಕ್ಕೆ ಪ್ರತಿಯಾಗಿ ನಾವು ಅವರಿಗೆ ಸಹಕಾರ ನೀಡಬೇಕು” ಎಂಬ ಅರಿವು ಈ ಭಾಗದ ಜನರಲ್ಲಿ ಮೂಡಿದೆ. ಚರಂಡಿ ಅಥವಾ ರಸ್ತೆ ಬದಿ ಕಸ ಎಸೆಯುವ ಅಭ್ಯಾಸವನ್ನು ಬಿಟ್ಟು, ಪಂಚಾಯಿತಿ ವ್ಯವಸ್ಥೆಗೆ ಕೈಜೋಡಿಸಿರುವುದು ಇಲ್ಲಿನ ಪೌರ ಕಾರ್ಮಿಕರ ಶ್ರಮಕ್ಕೆ ಸಂದ ಜಯವಾಗಿದೆ. ಇವರ ಈ ಸೇವೆಯನ್ನು ಕಂಡು ಇಡೀ ಪಂಚಾಯಿತಿಯ ಸಾರ್ವಜನಿಕರು ಮೆಚ್ಚುಗೆಯ ಸುರಿಮಳೆಗೈಯುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ

    February 15, 2026

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

    February 12, 2026

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕಂಪನಿಯೊಂದರ ಲೆಟರ್ ಹೆಡ್, ಮೊಹರು, ಸಹಿ ನಕಲು ಮಾಡಿ ಸುಳ್ಳು ಅನುಭವ ಪ್ರಮಾಣ ಪತ್ರ ಪಡೆದ ಆರೋಪದ ಮೇರೆಗೆ…

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು

    February 19, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.