ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಅದರಂತೆ ಜಿಲ್ಲೆಯ ವಿವಿಧೆಡೆ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ತಿಪಟೂರು ಹಾಗೂ ತುಮಕೂರು ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಜಾಲತಾಣ https://www.karnatakaone.gov.in/Public/FranchiseeTerms ಮೂಲಕ ಮಾರ್ಚ್ 2 ರೊಳಗಾಗಿ ಸಲ್ಲಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


