nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    ಜಿಲ್ಲಾ ಸುದ್ದಿ February 20, 2026

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    By adminFebruary 20, 2026No Comments2 Mins Read
    karavara

    ಕಾರವಾರ:  ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ ಮತ್ತು ಮರಣ ಘಟನೆಗಳನ್ನು 21 ದಿನಗಳ ಒಳಗೆ ಕಡ್ಡಾಯವಾಗಿ ಶೇ.100 ರಷ್ಟು ನೋಂದಣಿ ಮಾಡಲು ಕ್ರಮವಹಿಸುವಂತೆ ಜಿಲ್ಲೆಯ ಎಲ್ಲಾ ಜನನ ಮರಣ ನೋಂದಣಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚನೆ ನೀಡಿದರು.

    ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಜನನ ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ಜಿಲ್ಲೆಯ ಗ್ರಾಮ ಪಂಚಾಯತ್ ಗಳು ಮತ್ತು ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಭವಿವಿಸುವ ಪ್ರತಿಯಿಂದು ಜನನ ಮತ್ತು ಮರಣ ಘಟನೆಗಳನ್ನು 21 ದಿನಗಳ ಒಳಗೆ ಕಡ್ಡಾಯ ನೋಂದಣಿ ಮಾಡಬೇಕಿದ್ದು, ಈ ಬಗ್ಗೆ ಪ್ರತೀ ತಿಂಗಳು ತಹಶೀಲ್ದಾರ್ಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿ, ಪರಿಶೀಲನೆ ನಡೆಸುವಂತೆ ತಿಳಿಸಿದ ಅವರು, ಜನನ ಮರಣ ನೋಂದಣಿ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಹಾಗೂ ಸ್ವಚ್ಛ ವಾಹಿನಿ ವಾಹನಗಳ ಮೂಲಕ ಪ್ರತಿದಿನ ಈ ಬಗ್ಗೆ ಪ್ರಚಾರ ಮಾಡುವಂತೆ ಮತ್ತು ತಮ್ಮ ವ್ಯಾಪ್ತಿಯಲ್ಲಿ ಬ್ಯಾನರ್, ಪೋಸ್ಟರ್ ಗಳನ್ನು ಅಳವಡಿಸುವಂತೆ ನಿರ್ದೇಶನ ನೀಡಿದರು.

    ಆರೋಗ್ಯ ಇಲಾಖೆಯ ಮೂಲಕ ಸರ್ಕಾರಿ ಅಧೀನದ ಎಲ್ಲಾ ವೈದ್ಯಕೀಯ ಕೆಂದ್ರಗಳು ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಸಂಭವಿಸುವ ಜನನ ಮರಣ ಘಟನೆಗಳನ್ನು ನಿಗಧಿತ ಸಮಯದಲ್ಲಿ ನೋಂದಣಿ ಮಾಡುವಂತೆ ಮತ್ತು ಇ–ಜನ್ಮ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಮತ್ತು ಮರಣಗಳಿಗೆ ಮರಣ ಕಾರಣದ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಮತ್ತು ಮರಣೋತ್ತರ ಪರೀಕ್ಷೆಯ ವರದಿಗಳನ್ನು ಕಡ್ಡಾಯವಾಗಿ ಜನನ ಮರಣ ಮುಖ್ಯ ನೋಂದಣಾಧಿಕಾರಿಗಳಿಗೆ ಸಲ್ಲಿಸಬೇಕು, ಮನೆಯಲ್ಲಿ ಸಂಭವಿಸುವ ಜನನಗಳನ್ನು ಪರಿಶೀಲನೆಯಿಂದ ದೃಢೀಕರಿಸಿ ನೋಂದಣಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.

    ಜನನ ಮರಣ ವಿಷಯಕ್ಕೆ ಸಂಬಂಧಿಸಿದಂತೆ ಅನುಸರಿಸಬೇಕಾದ ಕ್ರಮಗಳು ಮತ್ತು ಇತ್ತೀಚಿನ ಬದಲಾವಣೆಗಳ ಕುರಿತಂತೆ ಎಲ್ಲಾ ನೋಂದಣಾಧಿಕಾರಿಗಳು ತಿಳಿದಿರಬೇಕು, ನಿಗಧಿತ ಅವಧಿಯ ನಂತರದ ನೋಂದಣಿಗಳನ್ನು ನ್ಯಾಯಾಲಯದ ಆದೇಶ ಪಡೆದು ಮಾಡಬೇಕು . 2024 ವರ್ಷಕ್ಕಿಂತ ಹಿಂದಿನ ಅವಧಿಯ ಜನನ ಮರಣ ದಾಖಲೆಗಳನ್ನು ಸಂರಕ್ಷಣಾಧಿಕಾರಿಗಳಿಗೆ ವರ್ಗಾಯಿಸುವಂತೆ ತಿಳಿಸಿದರು.

    ನೋಂದಣಿ ದಾಖಲೆಗಳಲ್ಲಿ ದಿನಾಂಕಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ ನಮೂದಿಸಬೇಕು, ತಾಲೂಕು ಮಟ್ಟದಲ್ಲಿ ಜನನ ಮರಣ ನೋಂದಣಿಯು ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿರುವ ಕುರಿತಂತೆ ಪ್ರತೀ ತಿಂಗಳು ಕನಿಷ್ಠ ನೋಂದಣಿ ಘಟಕಗಳ ಪರಿಶೀಲನೆ ಕೈಗೊಳ್ಳುವಂತೆ ಹಾಗೂ ನೋಂದಣಿಯ ದಾಖಲೆಗಳನ್ನು ಶಾಶ್ವತವಾಗಿ ಕಾಯ್ದಿರಿಸಲು ಕೈಗೊಂಡಿರುವ ಡಿಜಿಟಲ್ ದಾಖಲೀಕರಣ ಕಾರ್ಯವನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ತಿಳಿಸಿದರು.

    ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸೋಮಶೇಖರ್ ಮೇಸ್ತಾ ಮಾತನಾಡಿ, ಜಿಲ್ಲೆಯಲ್ಲಿ 2025 ರಲ್ಲಿ, 17,227 ಜನನ ಮತ್ತು 11,579 ಮರಣದ ಕುರಿತು ದಾಖಲೆಗಳು ನೋಂದಣಿಯಾಗಿದ್ದು, ಜನವರಿ 2026 ರಲ್ಲಿ 1,325 ಜನನ ಮತ್ತು 1,104 ಮರಣಗಳು ದಾಖಲಾಗಿವೆ. ಈ ಕುರಿತ ದಾಖಲೆಗಳನ್ನು ಡಿಜಿಟಲ್ ಸಹಿಯೊಂದಿಗೆ ವಿತರಿಸಲಾಗುತ್ತಿದೆ ಎಂದರು.

    ಸಭೆಯಲ್ಲಿ ಕ್ರಿಮ್ಸ್ ನ ಡೀನ್ ಡಾ.ಪೂರ್ಣಿಮಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆ ಉಪ ನಿರ್ದೇಶಕ ವಿರೂಪಾಕ್ಷ ಪಾಟೀಲ್ ಮತ್ತು ಆನ್‌ಲೈನ್ ಮೂಲಕ ಎಲ್ಲಾ ತಾಲೂಕುಗಳ ತಹಶೀಲ್ದಾರ್‌ ಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳು ಮುಖ್ಯಾಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.