ಮಧುಗಿರಿ: ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಪಡಿತರ (ರೇಷನ್) ತರಲು ಹೋಗುತ್ತಿದ್ದ ಮಹಿಳೆಯೊಬ್ಬರು ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತ ಮಹಿಳೆಯು ಮನೆಗೆ ಬೇಕಾದ ಪಡಿತರ ಪದಾರ್ಥಗಳನ್ನು ತರಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಹಿಳೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಅಪಘಾತವು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಯಿಂದಾಗಿ ಸ್ಥಳೀಯವಾಗಿ ಆಕ್ರೋಶ ಮತ್ತು ವಿಷಾದ ವ್ಯಕ್ತವಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಕಾರಿನೊಂದಿಗೆ ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


