ಮಧುಗಿರಿ: ಎರಡು ಪ್ರತ್ಯೇಕ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು, ಹಲವರಿಗೆ ಗಾಯವಾಗಿರುವ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ವ್ಯಾಪ್ತಿಯಲ್ಲಿ ನಡೆದಿದೆ.
ಕಾರು ಡಿಕ್ಕಿ: ಮಹಿಳೆ ಸಾವು
ಮಿಡಿಗೇಶಿ: ಪಾದಚಾರಿ ಮಹಿಳೆಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದ ಕೆಪಿಟಿಸಿಎಲ್ ಕಚೇರಿ ಮುಂಭಾಗ ಫೆ.21 ರಂದು ನಡೆದಿದೆ. ಮೃತ ಮಹಿಳೆಯನ್ನು ಲತಾ (45) ಎಂದು ಗುರುತಿಸಲಾಗಿದೆ. ಸದರಿ ಮಹಿಳೆಯು ನ್ಯಾಯಬೆಲೆ ಅಂಗಡಿಯಿಂದ ಮನೆಗೆ ಪಡಿತರ ತರುವ ವೇಳೆ ಈ ಘಟನೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರೆಲ್ಲರೂ ಸುರಕ್ಷಿತರಾಗಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ ಹನುಮಂತರಾಯಪ್ಪ ಅವರು ಭೇಟಿ ನೀಡಿ ಪರಿಶೀಲಿಸಿದರು. ಕಾರಿನ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ್ವಿಚಕ್ರ ವಾಹನಗಳ ಡಿಕ್ಕಿ:
ಮಿಡಿಗೇಶಿ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ಹಲವರಿಗೆ ಪೆಟ್ಟಾಗಿರುವ ಘಟನೆ ಮಧುಗಿರಿ ತಾಲ್ಲೂಕಿನ ರಾಜ್ಯ ಹೆದ್ದಾರಿ ರಸ್ತೆಯ ಮಿಡಿಗೇಶಿ ಬಸ್ ನಿಲ್ದಾಣದ ಸಮೀಪ ನಡೆದಿದೆ. ಪಾವಗಡ ಕಡೆಯಿಂದ ಮಧುಗಿರಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಗಾಯಾಳುಗಳು ಸುರೇಶ್, ಕರಿಯಣ್ಣ, ಲಕ್ಷ್ಮಮ್ಮ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


