nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    • ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ
    ತುಮಕೂರು February 22, 2026

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    By adminFebruary 22, 2026No Comments2 Mins Read
    nikhil kumar

    ತುಮಕೂರು: ಮುಂದೆ ರಾಜ್ಯದಲ್ಲಿ ಜನತಾದಳ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದಕ್ಕೆ ಈಗಿನಿಂದಲೇ ತಳಮಟ್ಟದಿಂದ ಪಕ್ಷ ಸಂಘಟಿಸಬೇಕು. ಜಿಲ್ಲೆಯಲ್ಲಿ ಈ ಹಿಂದೆ 11 ವಿಧಾನಸಭಾ ಕ್ಷೇತ್ರಗಳಲ್ಲಿ 9 ಸ್ಥಾನಗಳನ್ನು ಗೆಲ್ಲಿಸಿ ತುಮಕೂರು ಜಿಲ್ಲೆ ಕೊಡುಗೆ ನೀಡಿದೆ ಅಂತಹ ಸುವರ್ಣ ಕಾಲ 2028ಕ್ಕೆ ಮರುಕಳಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದರು.

    ತಾಲ್ಲೂಕಿನ ನಾಗವಲ್ಲಿಯಲ್ಲಿ ಶನಿವಾರ ನಡೆದ ತುಮಕೂರು ಗ್ರಾಮಾಂತರ ಕ್ಷೇತ್ರದ ಜನರೊಂದಿಗೆ ಜನತಾದಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಕಟ್ಟಿದ ಜೆಡಿಎಸ್ 25 ವರ್ಷ ಪೂರೈಸಿದೆ. ಇದರ ಯಶಸ್ಸು ಕಾರ್ಯಕರ್ತರಿಗೆ ಸಲ್ಲಬೇಕು. ಎಂತಹ ಕಷ್ಟಕಾಲದಲ್ಲೂ ಕಾರ್ಯಕರ್ತರು ಪಕ್ಷವನ್ನು ಬಿಡದೆ ಬೆಂಬಲಿಸಿದ್ದಾರೆ. ಆದರೆ ಇಲ್ಲಿ ಬೆಳೆದು ಉನ್ನತ ಸ್ಥಾನಕ್ಕೆ ಏರಿದವರು ಪಕ್ಷ ಬಿಟ್ಟುಹೋಗಿದ್ದಾರೆ. ಆದರೆ ಪಕ್ಷದ ತತ್ವದಡಿ ಕಾರ್ಯಕರ್ತರಿಗೆ ರಾಜಕೀಯ ಅಧಿಕಾರ ಸಿಗಬೇಕು. ಈ ಹಿನ್ನೆಲೆಯಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಬೇಕು ಎಂದು ಸಲಹೆ ನೀಡಿದರು.


    Provided by
    Provided by

    ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿಗಾಗಿ ತಾವು ರಾಜ್ಯಾದ್ಯಂತ ಜನರೊಂದಿಗೆ ಜನತಾದಳ ಸಮಾವೇಶ ನಡೆಸುತ್ತಿದ್ದು, ಇದುವರೆಗೆ 54 ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾವೇಶಗಳಾಗಿವೆ. ಈ ತಿಂಗಳ 27ರಂದು ವಿಜಯಪುರದಲ್ಲಿ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಸಮಾವೇಶ ಹಾಗೂ ಪಕ್ಷದ ಬೆಳ್ಳಿ ಹಬ್ಬ ಆಚರಣೆ ಹಮ್ಮಿಕೊಳ್ಳಲಾಗಿದೆ. ತುಮಕೂರು ಜಿಲ್ಲೆಯ 11 ಕ್ಷೇತ್ರಗಳು ಒಳಗೊಂಡ ಬೆಳ್ಳಿ ಹಬ್ಬ ಸಮಾವೇಶ ಆಯೋಜಿಸಲು ಚರ್ಚೆ ನಡೆದಿದೆ ಎಂದರು.

    ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ, ಬದ್ಧತೆ ಇಲ್ಲ. ರೈತರ ಯಾವ ಸಮಸ್ಯೆಗಳಿಗೂ ಸ್ಪಂದಿಸುತ್ತಿಲ್ಲ. ಈ ಸರ್ಕಾರದ ಅವಧಿಯಲ್ಲಿ 2800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಜಿಲ್ಲೆಯ 40ಕ್ಕೂ ಹೆಚ್ಚು ರೈತರು ಜೀವ ಕಳೆದುಕೊಂಡಿದ್ದಾರೆ. ಅತಿವೃಷ್ಟಿ, ಅನಾವೃಷ್ಟಿಯಿಂದ ಸಂಕಷ್ಟದ ರೈತರಿಗೆ ಪರಿಹಾರ ನೀಡಿ, ಅವರಿಗೆ ಸ್ಪಂದಿಸುವ ಪ್ರಯತ್ನವನ್ನು ಈ ಸರ್ಕಾರ ಮಾಡಿಲ್ಲ ಎಂದು ಟೀಕಿಸಿದರು.

    ಜೆಡಿಎಸ್ ನಾಯಕರನ್ನು ತಯಾರಿಸುವ ಕಾರ್ಖಾನೆಯಾಗಿದೆ. ಇಲ್ಲಿ ನಾಯಕರಾಗಿ ಬೆಳೆದು ಉನ್ನತ ಸ್ಥಾನ ಪಡೆದ ಸುಮಾರು 50ಕ್ಕೂ ಹೆಚ್ಚು ನಾಯಕರು ಜೆಡಿಎಸ್ ಬಿಟ್ಟುಹೋಗಿ ಬೇರೆ ಪಕ್ಷ ಸೇರಿದ್ದಾರೆ. ಚುನಾವಣೆಗಳಲ್ಲಿ ತಮ್ಮನ್ನು ಗೆಲ್ಲಿಸಿದ, ರಾಜಕೀಯವಾಗಿ ಬೆಳೆಸಿದ ಕಾರ್ಯಕರ್ತರನ್ನು ಬೀದಿಯಲ್ಲಿ ಬಿಟ್ಟುಹೋಗುವುದು ನಾಯಕನಾದವನಿಗೆ ಶೋಭೆತರುವುದಿಲ್ಲ. ನಾಯಕರು ಹೋದರೂ ನಾಯಕರನ್ನು ರೂಪಿಸುವ ಶಕ್ತಿವಂತ, ಚಿನ್ನದಂತಹ ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ. ಯಾರೇ ಕೈ ಬಿಟ್ಟರೂ ನಾವು ನಿಮ್ಮನ್ನು ಬಿಡುವುದಿಲ್ಲ, ನಿಮ್ಮ ಜೊತೆಗಿರುತ್ತೇವೆ ಎಂದು ಕಾರ್ಯಕರ್ತರು ಪಕ್ಷದ ಪರ ಗಟ್ಟಿಯಾಗಿ ನಿಂತಿದ್ದಾರೆ ಎಂದರು.

    ಜಿಲ್ಲಾ ಜೆಡಿಎಸ್ ಅಧ್ಯಕ್ಷ, ಮಾಜಿ ಶಾಸಕ ಹೆಚ್.ನಿಂಗಪ್ಪ ಮಾತನಾಡಿ, ಹಿಂದೆ ನಾನು 9 ವರ್ಷ ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೆ. ದೇವೇಗೌಡರು, ಕುಮಾರಸ್ವಾಮಿಯವರು ನನ್ನ ಮೇಲೆ ವಿಶ್ವಾಸವಿಟ್ಟು ಮತ್ತೊಮ್ಮೆ ಅಧ್ಯಕ್ಷನಾಗುವ ಅವಕಾಶ ನೀಡಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಆಡಳಿತಾವಧಿ ಅಭಿವೃದ್ಧಿಯಲ್ಲಿ ದಾಖಲೆ ಮಾಡಿದ ಕಾಲಘಟ್ಟ. ಗ್ರಾಮಾಂತರ ಕ್ಷೇತ್ರದಲ್ಲಿ ಆ ಅವಧಿಯಲ್ಲಿ ಗೂಳೂರು, ಹೆಬ್ಬೂರು ಪೀಠಾಂತರದವರಿ, ತುಮಕೂರು ವಿವಿಗೆ ಬಿಡದರಕಟ್ಟೆಯಲ್ಲಿ ಜಾಗ, ಆಸ್ಪತ್ರೆಗಳು, 6 ಉಪವಿದ್ಯುತ್ ಸ್ಥಾವರಗಳ ಸ್ಥಾಪನೆ, ಶಾಲಾ, ಕಾಲೇಜುಗಳ ಸ್ಥಾಪನೆ, ನೀರಾವರಿ ಕಾರ್ಯಕ್ರಮಗಳು, ರಸ್ತೆಗಳ ಅಭಿವೃದ್ಧಿ ಹೀಗೆ ಹಲವಾರು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಎಚ್‌ಡಿಕೆ ಕಾರಣರಾದರು. ಮತ್ತೊಮ್ಮೆ ಅಂತಹ ಅಭಿವೃದ್ಧಿಪರ್ವ ಮರುಕಳಿಸಬೇಕೆಂದರೆ 2028ರಲ್ಲಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ನಾವೆಲ್ಲರೂ ಸಂಕಲ್ಪ ಮಾಡಿ ಪಕ್ಷ ಕಟ್ಟುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

    ಮುಖಂಡರಾದ ಗುಬ್ಬಿ ನಾಗರಾಜು, ಹೊದಿಕೆರೆ ಮಂಜುನಾಥ್, ಗಂಗಣ್ಣ, ವಿಜಯ್ ಗೌಡ, ಬೆಳಗುಂಬ ವೆಂಕಟೇಶ್, ತಿಮ್ಮಪ್ಪಗೌಡರು, ಯೋಗಾನಂದಕುಮಾರ್, ಗೂಳೂರು ನವೀನ್, ಲೀಲಾವತಿ, ಹನುಮಂತರಾಯಪ್ಪ ಮೊದಲಾದವರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಗುಬ್ಬಿ: ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ನಮ್ಮ ಬೆಂಬಲವಿದೆ. ಆದರೆ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು. ಮಹಿಳೆಯರಿಗೆ…

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.