nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ

    June 14, 2026

    ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ

    June 14, 2026

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ
    • ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ
    • ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಜೂನ್ 21ರಂದು ಉಚಿತ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾರಂಭ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ
    • ತುಮಕೂರು: ಜೂನ್ 26 ರಿಂದ ಪುಸ್ತಕ ಸಂತೆ
    • ರುಡ್‌ ಸೆಟ್ ಸಂಸ್ಥೆ: ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    ರಾಜ್ಯ ಸುದ್ದಿ February 22, 2026

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    By adminFebruary 22, 2026No Comments2 Mins Read
    h d kumaraswamy

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇತ್ತೀಚಿನ ಸರಣಿ ಟ್ವೀಟ್ ಹಾಗೂ ಹೇಳಿಕೆಗಳ ಕುರಿತು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಅಧಿಕಾರಕ್ಕಾಗಿ ಕುರುಬ ಸಮಾಜವನ್ನು ಎಳೆದು ತರುವುದು ನ್ಯಾಯವಲ್ಲ, ಸಿದ್ದರಾಮಯ್ಯ ಅವರಿಗೆ ಕುರ್ಚಿ ಬಿಟ್ಟುಕೊಡುವ ಜಾಯಮಾನವೇ ಇಲ್ಲ” ಎಂದು ಅವರು ವ್ಯಂಗ್ಯವಾಡಿದ್ದಾರೆ.

    ಜಾತಿ ರಾಜಕಾರಣದ ಆರೋಪ: ಸಿದ್ದರಾಮಯ್ಯ ಅವರು ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳುವಾಗ ಕುರುಬ ಸಮುದಾಯದ ಹೆಸರನ್ನು ಬಳಸುತ್ತಿರುವುದಕ್ಕೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಸಿದ್ದರಾಮಯ್ಯ ಬೆಳೆಯಲು ಕೇವಲ ಒಂದು ಸಮುದಾಯವಲ್ಲ, ಎಲ್ಲಾ ಸಮುದಾಯಗಳ ಬೆಂಬಲವಿದೆ. ಈಗ ಅಧಿಕಾರ ಉಳಿಸಿಕೊಳ್ಳಲು ಜಾತಿ ಕಾರ್ಡ್ ಬಳಸುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.


    Provided by
    Provided by

    ಸಿದ್ದರಾಮಯ್ಯ ಅವರು ಈ ಸಂದೇಶವನ್ನು ವಿರೋಧ ಪಕ್ಷಗಳಿಗಿಂತ ಹೆಚ್ಚಾಗಿ, ತಮ್ಮನ್ನು ಸಿಎಂ ಸ್ಥಾನದಿಂದ ಇಳಿಸಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರಿಗೇ ನೀಡಿದಂತಿದೆ. ಅವರು ಈಗ ಕಾಂಗ್ರೆಸ್‌ನ ಹಳೆಯ ನಾಯಕರನ್ನೇ ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ.

    ಅಧಿಕಾರ ದಾಹ: “ನಾನು ಸಿದ್ದರಾಮಯ್ಯ ಅವರ ನಡವಳಿಕೆಯನ್ನು ಜೆಡಿಎಸ್‌ನಲ್ಲಿದ್ದ ಕಾಲದಿಂದಲೂ ನೋಡಿದ್ದೇನೆ. ಅವರಿಗೆ ವೈಯಕ್ತಿಕ ಕುರ್ಚಿ ಮುಖ್ಯವೇ ಹೊರತು ಅಹಿಂದ ಅಥವಾ ರಾಜ್ಯದ ಜನರ ಹಿತವಲ್ಲ. ಆಶ್ರಯ ಕೊಟ್ಟ ಪಕ್ಷವನ್ನೇ ಆವರಿಸಿಕೊಳ್ಳುವುದು ಅವರ ಗುಣ” ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

    ಹೊಸ ಅಸ್ತ್ರ: ಸಿದ್ದರಾಮಯ್ಯ ಅವರು ‘ನಾನು ಇಲ್ಲದಿದ್ದರೆ ಕಾಂಗ್ರೆಸ್ ಇಲ್ಲ’ ಎಂಬ ವಾತಾವರಣ ನಿರ್ಮಿಸುತ್ತಿದ್ದಾರೆ. ಇದು ಸಿಎಂ ಸ್ಥಾನ ಬಿಡದಿರಲು ಅವರು ಹೂಡಿರುವ ಹೊಸ ಅಸ್ತ್ರವಾಗಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.

    ಮೈತ್ರಿ ಸಮನ್ವಯ ಸಮಿತಿ: ಇದೇ ವೇಳೆ ಬಿಜೆಪಿ–ಜೆಡಿಎಸ್ ಮೈತ್ರಿಯ ಬಗ್ಗೆ ಮಾತನಾಡಿದ ಅವರು, ಎರಡೂ ಪಕ್ಷಗಳ ನಡುವಿನ ಗೊಂದಲ ನಿವಾರಿಸಲು ಸಮನ್ವಯ ಸಮಿತಿ ರಚನೆಯಾಗಬೇಕು ಎಂಬುದು ಮೊದಲಿನಿಂದಲೂ ನಮ್ಮ ಆಶಯವಾಗಿದೆ. ಮೈತ್ರಿಗೆ ಧಕ್ಕೆ ಬಾರದಂತೆ ನಾವು ನಡೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    ಸಿದ್ದರಾಮಯ್ಯ ಅವರಿಗೆ ಈಗ ಜ್ಞಾನೋದಯವಾಗಿದೆ, ಅವರ ಇಂದಿನ ನಡವಳಿಕೆಯನ್ನು ಅವರನ್ನು ಬೆಳೆಸಿದವರೂ ಸಹ ಊಹೆ ಮಾಡಿರಲಿಲ್ಲ ಎಂದು ಕುಮಾರಸ್ವಾಮಿ ಈ ಸಂದರ್ಭದಲ್ಲಿ ಲೇವಡಿ ಮಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ

    June 14, 2026

    ಸಿರಾ: ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ, ಜನಜಾಗೃತಿ ವೇದಿಕೆ ಟ್ರಸ್ಟ್, ರಾಜ್ಯ ಮದ್ಯಪಾನ…

    ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ

    June 14, 2026

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026

    ಸಿದ್ದರಬೆಟ್ಟ: ಜೂನ್ 21ರಂದು ಉಚಿತ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾರಂಭ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ

    June 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.