nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ

    August 18, 2026

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
    ಜಿಲ್ಲಾ ಸುದ್ದಿ February 26, 2026

    ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

    By adminFebruary 26, 2026No Comments2 Mins Read
    santhosh lad

    ಧಾರವಾಡ:  ನಮಗೆ, ನಮಗೆಲ್ಲರಿಗೂ ಇರುವ ಸಂಬಳ, ಸವಲತ್ತು ಸಾರ್ವಜನಿಕರಿಂದ ಬಂದಿದ್ದು, ನಮ್ಮ ನಮ್ಮ ಕೆಲಸ, ಕರ್ತವ್ಯಗಳನ್ನು ಮಾನವೀಯತೆ, ಆತ್ಮಸಾಕ್ಷಿಯಿಂದ ಮಾಡಬೇಕು. ವಿನಾಕಾರಣ ವಿಳಂಬ, ಉದ್ಯೋಗದಲ್ಲಿ ಆಲಸ್ಯ ತೋರಿಸುವ ಮತ್ತು ನಡಿತೈತಿ ಬಿಡು ಎನ್ನುವ ಮನೋಭಾವನೆಯ ಅಧಿಕಾರಿ, ಸಿಬ್ಬಂದಿಗಳು ಮನೆಗೆ ಹೋಗಬಹುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

    ಅವರು ಇಂದು (ಫೆ.24) ಮಧ್ಯಾಹ್ನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಧಾರವಾಡ ಜಿಲ್ಲಾಡಳಿತವು ಆಯೋಜಿಸಿದ್ದ ಜಿಲ್ಲಾ ಮಟ್ಟದ 12 ನೇ ಜನತಾ ದರ್ಶನದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉದ್ದೇಶಿಸಿ, ಮಾತನಾಡಿದರು.

    ಜನತಾ ದರ್ಶನದಲ್ಲಿ ಬರುವ ಅರ್ಜಿಗಳನ್ನು ಗಮನಿಸಿದಾಗ ಆಯಾ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ದೂರುಗಳನ್ನು ಸರಿಯಾಗಿ ಪರಿಶೀಲಿಸದೆ ಕಾಟಾಚಾರಕ್ಕೆ ಉತ್ತರಿಸುತ್ತಿದ್ದಾರೆ ಎಂಬುದು ತಿಳಿಯುತ್ತದೆ. ಸಲ್ಲಿಕೆ ಆಗುವ ಸಮಸ್ಯೆಗಳನ್ನು ಸರಿಯಾಗಿ ಪರಿಶೀಲಿಸಿ, ಸೂಕ್ತ ಪರಿಹಾರ ನೀಡಬೇಕು. ಬೇರೆ ಹಂತಕ್ಕೆ ಅರ್ಜಿ ರವಾನಿಸಬೇಕಾದಲ್ಲಿ ಅರ್ಜಿದಾರನಿಗೆ ಸೂಕ್ತ ತಿಳುವಳಿಕೆ ನೀಡಬೇಕು. ಆದರೆ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳು ಸಾರ್ವಜನಿಕ ಕಳಕಳಿ, ಮಾನವೀಯತೆ ನೋಡದೆ ಯಾಂತ್ರಿಕವಾಗಿ ವರ್ತಿಸುತ್ತಿದ್ದಾರೆ ಎಂಬುದು ಸಲ್ಲಿಕೆ ಆಗುತ್ತಿರುವ ಅರ್ಜಿಗಳಿಂದ ತಿಳಿದುಬರುತ್ತಿದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

    ಜಿಲ್ಲೆಯ ಅಧಿಕಾರಿ, ನೌಕರರು ಕರ್ತವ್ಯದಲ್ಲಿ ಅಶಿಸ್ತು ತೋರಿದರೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಸಣ್ಣಪುಟ್ಟ ಸಮಸ್ಯೆಗಳಿಗಾಗಿ ಜಿಲ್ಲಾ ಹಂತದ ಕಚೇರಿಗಳಿಗೆ, ಜನತಾ ದರ್ಶನಕ್ಕೆ ಬರುವುದು ಉಚಿತವಲ್ಲ. ಎಲ್ಲ ಅಧಿಕಾರಿ ಸಿಬ್ಬಂದಿಗಳು ತಮ್ಮ ಹಂತದಲ್ಲಿಯೇ ಸಾರ್ವಜನಿಕ ಸಮಸ್ಯೆಗಳನ್ನು ಸಂಯಮದಿಂದ ಆಲಿಸಿ, ಪರಿಹರಿಸಬೇಕು. ಅಗತ್ಯವಿದ್ದಲ್ಲಿ ಮಾತ್ರ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಿ, ಕಳುಹಿಸಬೇಕೆಂದು ಅವರು ಹೇಳಿದರು.

    ವಿವಿಧ ಗ್ರಾಮಗಳಿಂದ ಹಾಗೂ ನಗರ ಪ್ರದೇಶಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಅಹವಾಲುಗಳನ್ನು ಸಲ್ಲಿಸಿದರು.

    ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಸಂಬಂಧಿಸಿದ ಅಧಿಕಾರಿಗಳನ್ನು ಕರೆದು, ಚರ್ಚಿಸಿ, ಇತ್ಯರ್ಥಕ್ಕೆ ನಿರ್ದೇಶಿಸಿದರು.

    ಇಂದಿನ ಜನತಾ ದರ್ಶನದಲ್ಲಿ ವಿವಿಧ ಇಲಾಖೆಗಳಿಗೆ ಸಂಭಂದಿಸಿದ 87 ಕ್ಕೂ ಹೆಚ್ಚು ಅರ್ಜಿಗಳನ್ನು ಸ್ಥಳದಲ್ಲಿಯೇ, ಪರಿಶೀಲಿಸಿ, ಪರಿಹಾರಕ್ಕೆ ಸೂಚಿಸಿದರು.

    ಜಿಲ್ಲಾಧಿಕಾರಿ ಸ್ನೇಹಲ್.ಆರ್., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಭುವನೇಶ ಪಾಟೀಲ, ಐಎಎಸ್ ಪ್ರೊಬೇಷನರಿ ಅಧಿಕಾರಿ ರೀತಿಕಾ ವರ್ಮಾ, ಉಪವಿಭಾಗಾಧಿಕಾರಿ ಶಾಲಂ ಹಿಸೇನ್ ವೇದಿಕೆಯಲ್ಲಿದ್ದು, ಸಾರ್ವಜನಿಕ ಅಹವಾಲು ಇತ್ಯರ್ಥಪಡಿಸಲು ಸಚಿವರಿಗೆ ನೇರವಾದರು.

    ಜನತಾ ದರ್ಶನದಲ್ಲಿ ವಿವಿಧ ನಗರ, ಗ್ರಾಮಗಳ ನಾಗರಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿದ್ದರು.

    ಶಿರಸ್ತೆದಾರರಾದ ಮಲ್ಲಿಕಾರ್ಜುನ ಸೊಲಗಿ ಸ್ವಾಗತಿಸಿ, ಸಭೆ ನಿರ್ವಹಿಸಿದರು. ಶಿರಸ್ತೆದಾರರಾದ ಶ್ರೀಧರ ಕೆ. ಅವರು ವಂದಿಸಿದರು. ಸಹಾಯಕ ನಿರ್ದೇಶಕ ರಾಜಶೇಖರ ಕಂಟೆಪ್ಪಗೌಡರ ಸಾರ್ವಜನಿಕ ಅಹವಾಲಗಳನ್ನು ಕ್ರೋಡೀಕರಿಸಿ, ಜನತಾ ದರ್ಶನ ನಿರ್ವಹಿಸಿದರು.

    87 ಅಹವಾಲು ಸ್ವೀಕಾರ: ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅರ್ಜಿಗಳು: ಧಾರವಾಡ ಜಿಲ್ಲಾಡಳಿತದಿಂದ ಇಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ  ಕಂದಾಯ ಇಲಾಖೆಯ 21, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ 20, ನಗರಾಭಿವೃದ್ಧಿ ಇಲಾಖೆ 19, ವಸತಿ ಇಲಾಖೆ 7, ಸಾರಿಗೆ ಇಲಾಖೆ 4, ಗೃಹ ಇಲಾಖೆ ಮತ್ತು ಇಂದನ ಇಲಾಖೆ 3 ಹಾಗೂ ಕೃಷಿ, ಶಾಲಾ ಶಿಕ್ಷಣ ಇಲಾಖೆ, ಆಹಾರ ಇಲಾಖೆಯ 2, ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆಗಳ ತಲಾ ಒಂದು ಅಹವಾಲುಗಳು ಸೇರಿದಂತೆ ಒಟ್ಟು 87 ಅರ್ಜಿಗಳ ಸ್ವೀಕರಿಸಲಾಯಿತು.

    ಸ್ವೀಕರಿಸಿದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ

    August 18, 2026

    ತುಮಕೂರು: ನಗರದ ಎಸ್ ಐಟಿ ಮುಖ್ಯರಸ್ತೆಯ ಸಿದ್ದೇಶ್ವರ ಕನ್ವೆನ್ಷನ್ ಸೆಂಟರ್ ಪಕ್ಕ ಉಪ್ಪಿನ ಕೊಳಗ ಹಾಸ್ಟೆಲ್ ಮುಂಭಾಗ ಕಸ ತಂದು…

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.