ತುಮಕೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಯನ್ನು 2026ರ ಏಪ್ರಿಲ್ 5 ರಂದು ಆಚರಿಸುವ ಡಾ.ಬಾಬು ಜಗಜೀವನರಾಮ್ ಅವರ 119ನೇ ಜನ್ಮ ದಿನಾಚರಣೆ ಹಾಗೂ ಏಪ್ರಿಲ್ 14 ರಂದು ಆಚರಿಸುವ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯ ದಿನದಂದು ರಾಜ್ಯ ಮಟ್ಟದಲ್ಲಿ ನೀಡಲಾಗುವುದು.
ಆಸಕ್ತರು ಮಾರ್ಚ್ 8 ರೊಳಗಾಗಿ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಎಸ್. ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


