nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026
    Facebook Twitter Instagram
    ಟ್ರೆಂಡಿಂಗ್
    • ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್
    • ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
    • ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    • ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ
    • ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್
    • ಬಳ್ಳಾರಿ: ಫೆ.27ರಂದು ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ
    • ಬಳ್ಳಾರಿ: ಮಾ.14 ರಂದು ರಾಷ್ಟ್ರೀಯ ಲೋಕ್ ಅದಾಲತ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿ: ಫೆ.27ರಂದು ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ
    ಜಿಲ್ಲಾ ಸುದ್ದಿ February 27, 2026

    ಬಳ್ಳಾರಿ: ಫೆ.27ರಂದು ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ

    By adminFebruary 27, 2026No Comments2 Mins Read

    ಬಳ್ಳಾರಿ: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.27 ರಂದು ಬೆಳಿಗ್ಗೆ 08:30 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಆವರಣದಲ್ಲಿ ಜಿಲ್ಲೆಯ ವಿವಿಧ ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ ಆರ್) ಅಡಿ ಬಳ್ಳಾರಿ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.


    Provided by
    Provided by

    ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಘನ ಉಪಸ್ಥಿತಿ ಇರುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

    ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್‌ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್‌ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷ್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಭಾಗವಹಿಸುವರು.

    ಕಲಬುರಗಿ ಪ್ರಾದೇಶಿಕ ಆಯುಕ್ತರಾದ ಜಹೀರಾ ನಾಸೀಮ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ ತ್ರಿಲೋಕಚಂದ್ರ, ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಹೆಚ್.ಎನ್ ಗೋಪಾಲಕೃಷ್ಣ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಕಲಬುರಗಿಯ ಕಲಬುರಗಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ಡಾ.ವೆಂಕಟೇಶ ಎ.ಶಿಂಧಿಹಟ್ಟಿ, ಹುಬ್ಬಳ್ಳಿಯ ಹುಬ್ಬಳ್ಳಿ ವಲಯ ಕಾರ್ಖಾನೆಗಳ ಜಂಟಿ ನಿರ್ದೇಶಕ ರವೀಂದ್ರನಾಥ್ ಎನ್.ರಾಠೋಡ್, ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕ ವರುಣ. ಆರ್., ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ., ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಎಸ್.ಜಿ. ಖೈನೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ವಿಶೇಷ ಚೇತನರು ಹಾಗೂ ಅವರ ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ

    February 27, 2026

    ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್

    February 27, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ ಸಿರಿವಂತರು ಹೊರಬರುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ…

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್

    February 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.