nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ

    April 20, 2026

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    ಜಿಲ್ಲಾ ಸುದ್ದಿ February 28, 2026

    ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    By adminFebruary 28, 2026No Comments3 Mins Read
    jana samparka sabhe

    ಬಳ್ಳಾರಿ: ನಗರದಲ್ಲಿ ಟ್ರಾಫಿಕ್ ಸಮಸ್ಯೆಗೆ ಸಂಬಂಧಿಸಿದಂತೆ ಹಂತ– ಹಂತವಾಗಿ ಪರಿಹಾರ ಮಾರ್ಗ ಕಂಡುಕೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ಹೇಳಿದರು.

    ಜಿಲ್ಲಾ ಪೊಲೀಸ್ ಇಲಾಖೆ, ಸಂಚಾರ ಪೊಲೀಸ್ ಠಾಣೆ ವತಿಯಿಂದ ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆ, ಇದರಿಂದಾಗಿ ಸಾರ್ವಜನಿಕರಿಗೆ ಆಗುವ ಸಮಸ್ಯೆ ಹಾಗೂ ಪರಿಹಾರ ಕುರಿತು ಚರ್ಚಿಸಲು ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಂಚಾರ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎಲ್ಲಾ ಇಲಾಖೆಗಳ ಅಗತ್ಯ ಸಹಕಾರದೊಂದಿಗೆ ಆಟೋ, ಲಾರಿ, ಕಿರಾಣಿ ಅಂಗಡಿ- ಬೀದಿ ಬದಿ ವ್ಯಾಪಾರಸ್ಥರು ಹಾಗೂ ವಿವಿಧ ಸಂಘ– ಸಂಸ್ಥೆಗಳ ಪದಾಧಿಕಾರಿಗಳ ಕೈಜೋಡಿಸುವಿಕೆಯ ಅಭಿಮತ ಬೇಕಿದೆ ಎಂದರು.

    ನಗರದಲ್ಲಿ ಟ್ರಾಫಿಕ್ ಕುರಿತಂತೆ ಸಮಸ್ಯೆಗಳನ್ನು ಆಲಿಸಲು ಈ ಸಭೆಯು ಅತ್ಯಂತ ಉಪಯುಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಅವರು, ಸಮಸ್ಯೆಗಳನ್ನು ಅರಿತು ಹಂತ– ಹಂತವಾಗಿ ಪರಿಹಾರ ಮಾರ್ಗ ಕಂಡುಕೊಂಡು ಸೂಕ್ತ ಕ್ರಿಯಾಯೋಜನೆ ರೂಪಿಸಿ  ಸಾರ್ವಜನಿಕ ಓಡಾಟಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

    ವಾಹನ ಸವಾರರು ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಿಕೊಂಡು ನಿಧಾನಗತಿಯಲ್ಲಿ ಚಲಾಯಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಎಂದು ಹೇಳಿದ ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್ ಅವರು, ನಗರದಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಪ್ರೇರಿತರಾಗಿ ಟ್ರಾಫಿಕ್ ವಾರ್ಡನ್ ಆಗಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

    ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಅವರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ವೃತ್ತ, ಬಡಾವಣೆಗಳಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರವೂ ಅಗತ್ಯವಿದೆ ಎಂದರು.

    ನಗರದಲ್ಲಿ ಆಟೋ ಚಾಲಕರು ನಿಧಾನಗತಿಯಲ್ಲಿ ವಾಹನ ಚಲಾಯಿಸಬೇಕು. ತತ್ ಕ್ಷಣ ಬ್ರೇಕ್ ಹಾಕುವುದು, ಹಿಂಬದಿ ಸವಾರರಿಗೆ ತೊಂದರೆ ಉಂಟುಮಾಡುವುದು ಮಾಡಬಾರದು.  ಹಾಗಾಗಿ ನಿಧಾನಗತಿಯಲ್ಲಿ ವಾಹನ ಚಲಾವಣೆ ಮಾಡಬೇಕು ಎಂದರು.

    ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಮಾರ್ಗ ಕಂಡುಕೊಳ್ಳಲು ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆಯೊಂದಿಗೆ ಮಹಾನಗರ ಪಾಲಿಕೆಯು ಒಳಗೊಂಡ ಚರ್ಚಿಸಿ ಪೂರಕ ಕ್ರಮ ವಹಿಸಲಾಗುವುದು ಎಂದರು.

    ಸಾರ್ವಜನಿಕರಿಂದ ಅಹವಾಲು:

    ನಗರದಲ್ಲಿ ಅವಶ್ಯಕತೆ ಇರುವಲ್ಲಿ ಸೂಕ್ತ ಸ್ಥಳ ಗುರುತಿಸಿ, ಆಟೋ ಸ್ಟ್ಯಾಂಡ್ ವ್ಯವಸ್ಥೆ ಕಲ್ಪಿಸಬೇಕು. ನಗರದ ವಿವಿಧೆಡೆ ಸಂಚಾರ ದಟ್ಟಣೆ ಇರುವಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸಬೇಕು. ಸಂಜೆ ವೇಳೆಯಾದರೆ ನಗರದ ಹೊರಭಾಗದ ಲೇ ಔಟ್ ಗಳಲ್ಲಿ ಮದ್ಯ ಸೇವನೆ, ರಾತ್ರಿಯಾದರೆ ಕಳ್ಳತನ ಪ್ರಕರಣ ಹೆಚ್ಚುತ್ತಿವೆ. ಹಾಗಾಗಿ ಲೇ ಔಟ್ ಮಾಲೀಕರಿಗೆ ಸಿಸಿಟಿವಿ, ಭದ್ರತಾ ಸಿಬ್ಬಂದಿ ನಿಯೋಜಿಸುವಂತೆ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕು. ನಗರದಲ್ಲಿ ಅನಧಿಕೃತ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರೊಬ್ಬರು ಸಭೆಗೆ ತಿಳಿಸಿದರು.

    ಇನ್ನೋರ್ವ ಸಾರ್ವಜನಿಕರೊಬ್ಬರು ಮಾತನಾಡಿ, ನಗರದ ಬೆಂಗಳೂರು ರಸ್ತೆಯಲ್ಲಿ ಪಾದಚಾರಿ ಮಾರ್ಗ ಬೀದಿ ಬದಿ ವ್ಯಾಪಾರಿಗಳಿಂದ ಅತಿಕ್ರಮೇಣಗೊಂಡಿದ್ದು, ಸಾರ್ವಜನಿಕರು ಓಡಾಡಲು ಬಹಳ ತೊಂದರೆಯಾಗುತ್ತಿದೆ. ಹಣ್ಣು ವ್ಯಾಪಾರಿಗಳು ತಳ್ಳುವ ಬಂಡಿಗಳಿಂದ ಧ್ವನಿ ವರ್ಧಕಗಳ ಮೂಲಕ ಅತಿಯಾಗಿ ಶಬ್ದ ಮಾಡಿಕೊಂಡು ಓಡಾಡುತ್ತಿದ್ದು, ಇದು ಸಹ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸರ್ಕಾರಿ ಬಸ್ ಗಳೇ ರಸ್ತೆಗಳ ಮಧ್ಯದಲ್ಲಿಯೇ ಎಲ್ಲಿ ಅಂದರಲ್ಲಿ ನಿಲುಗಡೆ ಮಾಡುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇವೆಲ್ಲವುಗಳಿಗೂ ಸೂಕ್ತ ಪರಿಹಾರ ಮಾರ್ಗ ಕಲ್ಪಿಸಬೇಕು ಎಂದು ಸಭೆಯಲ್ಲಿ ಪ್ರಸ್ತಾಪಿಸಿದರು.

    ನಗರದಲ್ಲಿ ಸುಮಾರು 20 ಕ್ಕೂ ಹೆಚ್ಚು ಜನ ಮಹಿಳೆಯರು ಪರವಾನಿಗೆ ಪಡೆದು ಹಣ್ಣು- ತರಕಾರಿ ವ್ಯಾಪಾರ ಮಾಡುತ್ತಿದ್ದೇವೆ. ಆದರೆ ಮಾರಾಟ ಮಾಡಲು  ಸೂಕ್ತ ಸ್ಥಳವಿಲ್ಲ, ನಮಗೆ ವ್ಯಾಪಾರಕ್ಕಾಗಿ ಸೂಕ್ತ ಸ್ಥಳ ವ್ಯವಸ್ಥೆ ಮಾಡಿಕೊಡಬೇಕು ಎಂದು ಮಹಿಳಾ ವ್ಯಾಪಾರಿಯೊಬ್ಬರು ಅಧಿಕಾರಿಗಳ ಗಮನಕ್ಕೆ ತಂದರು.

    ನಗರದಲ್ಲಿ ವಿವಿಧ ಬಡಾವಣೆಗಳ ಮುಖ್ಯರಸ್ತೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಇವುಗಳಿಗೆ ವೇಗ ನೀಡಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರೊಬ್ಬರು ಸಭೆಯಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ಪಿ.ರವಿಕುಮಾರ್. ನವೀನ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಿಜಾಮುದ್ದೀನ್ ಶರೀಫ್, ಲೋಕೋಪಯೋಗಿ ಇಲಾಖೆಯ ಅಭಿಯಂತರ ಬಸರೆಡ್ಡಿ, ಸಂಚಾರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ರುದ್ರಪ್ಪ ಸೇರಿದಂತೆ ಕೆಕೆಆರ್ಟಿಸಿ, ಕೆಇಬಿ ಅಧಿಕಾರಿಗಳು, ಬಳ್ಳಾರಿ ಚೇಂಬರ್ಸ್ ಆಫ್ ಕಾಮರ್ಸ್ ನ ಅಧ್ಯಕ್ಷರು, ಕಿರಾಣಿ ಅಂಗಡಿ ವ್ಯಾಪಾರಸ್ಥರು, ಖಾಸಗಿ ಬಸ್ ಮಾಲೀಕರು– ಚಾಲಕರು, ಲಾರಿ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಆಟೋ ಯೂನಿಯನ್ ಅಧ್ಯಕ್ಷರು ಹಾಗೂ ಮಾಲೀಕ– ಚಾಲಕರು, ಟ್ಯಾಕ್ಸಿ ಸಂಘದ ಅಧ್ಯಕ್ಷರು ಹಾಗೂ ಮಾಲಿಕ–ಚಾಲಕರು, ಬೀದಿ ಬದಿ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ

    April 20, 2026

    ತಿಪಟೂರು: ನಗರದ ಬಂಡಿಹಳ್ಳಿಯಲ್ಲಿ ಚಿನ್ನ ಕಳ್ಳತನ ಮಾಡಿ ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಘಟನೆ ನಡೆದ…

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.