nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ
    ತುಮಕೂರು March 2, 2026

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    By adminMarch 2, 2026No Comments2 Mins Read
    k n rajanna

    ತುಮಕೂರು: ಯಾವುದೇ ಸಭೆ ಸಮಾರಂಭಗಳಲ್ಲಿ ಮೇಲ್ವರ್ಗದವರು, ಕೆಳವರ್ಗದವರು ಎಂಬ ಪದ ಬಳಕೆ ಮಾಡಬಾರದು. ಬದಲಾಗಿ ಮುಂದುವರಿದವರು ಮತ್ತು ಹಿಂದುಳಿದವರು ಎಂಬ ಪದ ಬಳಕೆ ಮಾಡಿ ಎಂದು ಮಾಜಿ ಸಚಿವರು, ಶಾಸಕರಾದ ಕೆ.ಎನ್.ರಾಜಣ್ಣ ಸಲಹೆ ನೀಡಿದರು.

    ಇಲ್ಲಿನ ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಚರಕ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಮತ್ತು ವಿಚಾರ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಬಹಳಷ್ಟು ಕಾರ್ಯಕ್ರಮಗಳಲ್ಲಿ ಮೇಲು–ಕೀಳು ಎಂಬ ಪದ ಬಳಕೆ ಮಾಡಲಾಗುತ್ತದೆ. ಇದನ್ನು ಬದಲಾಯಿಸಿಕೊಳ್ಳುವುದು ಒಳಿತು. ಏಕೆಂದರೆ, ಯಾರೂ ಕೀಳಲ್ಲ. ಮೇಲು–ಕೀಳು ಎಂಬ ಪದ ಬಳಕೆಯೇ ಸರಿ ಇಲ್ಲ. ಇದರ ಬದಲಿಗೆ ಹಿಂದುಳಿದವರು ಎಂಬ ಪದ ಬಳಕೆ ಮಾಡುವುದು ಸೂಕ್ತ ಎಂದರು.

    ಹಿಂದುಳಿದ ವರ್ಗಗಳಲ್ಲಿಯೂ ಸಾಕಷ್ಟು ಬುದ್ಧಿವಂತಿದ್ದಾರೆ. ಅವರನ್ನು ನಾವುಗಳು ಗುರುತಿಸಬೇಕು. ಇಂತಹ ಸಮಾರಂಭಗಳಲ್ಲಿ ಅವರ ಸಾಧನೆಯನ್ನು ಗೌರವಿಸಿದಾಗ ಮತ್ತಷ್ಟು ಕೆಲಸ ಮಾಡಲು ಶಕ್ತಿ ನೀಡಿದಂತಾಗುತ್ತದೆ. ಈ ಕಾರಣಕ್ಕಾಗಿ ಅಭಿನಂದನಾ ಸಮಾರಂಭಗಳು ಮುಖ್ಯವಾಗುತ್ತವೆ ಎಂದರು.

    ದಲಿತ ಸಂಘಟನೆಗಳ ಹೋರಾಟ ಯಾವತ್ತೂ ತಮ್ಮ ಹಕ್ಕುಗಳಿಗೆ ವಂಚನೆಯಾದಾಗ ಪ್ರತಿಭಟಿಸುವ ರೀತಿ ಇರಬೇಕು. ಆದರೆ ಇತರೆ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಹೋಗಬೇಕು. ಯಾವಾಗಲೂ ಇತರರನ್ನು ದೂಷಿಸುತ್ತಾ ಹೋದರೆ ನಮ್ಮ ಹೋರಾಟ ಗುರಿ ಮುಟ್ಟುವುದಿಲ್ಲ. ಇತರೆ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಹೋರಾಟ ಮುಂದುವರಿಸಬೇಕೇ ಹೊರತು, ಅವರನ್ನು ದ್ವೇಷಿಸುತ್ತಾ ಮುನ್ನಡೆಯುವುದು ಸರಿಯಲ್ಲ ಎಂದು ಕರೆ ನೀಡಿದರು.

    “ಹಿಂದಿನ ದಲಿತ ಸಂಘರ್ಷ ಸಮಿತಿ ಆಶಯ ಮತ್ತು ಈಗಿನ ಹೋರಾಟಗಳಿಗೆ ಸಾಕಷ್ಟು ಭಿನ್ನತೆಗಳು ಇವೆ. ಈಗಿನ ಹೋರಾಟಗಳು ಸ್ವಾರ್ಥಕ್ಕೆ ಆಗುತ್ತಿವೆಯೇನೋ ಎಂದೆನಿಸುತ್ತದೆ. ಸಂಘಟನೆಗಳನ್ನು ಯಾವತ್ತೂ ಸ್ವಾರ್ಥಕ್ಕೆ ಬಳಸಿಕೊಳ್ಳಬಾರದು. ಸಮುದಾಯದಲ್ಲಿರುವ ಅಜ್ಞಾನವನ್ನು ತೊಡೆದು ಹಾಕಲು, ಶಿಕ್ಷಣವಂತರನ್ನಾಗಿಸಲು ಸಂಘಟನೆಗಳು ಶ್ರಮಿಸಬೇಕು. ಇಂತಹ ಅರಿವಿನಿಂದಲೇ ಹಿಂದುಳಿದ, ಅಶಕ್ತ, ದಲಿತ ಸಮುದಾಯ ಮುಂದೆ ಬರಲು ಸಾಧ್ಯ ಎಂದರು.

    ಮುಂದುವರಿದ ಜನಾಂಗಕ್ಕಿಂತ ಹೆಚ್ಚಾಗಿ ದಲಿತರು ಮತ್ತು ಹಿಂದುಳಿದವರೇ ಹೆಚ್ಚು ದೈವ ಭಕ್ತರು. ಈ ಜನಾಂಗದವರೇ ದೇವರುಗಳಿಗೆ ಹೆಚ್ಚು ಹರಕೆ ಮಾಡುತ್ತಾರೆ. ಮುಂದುವರಿದ ಜಾತಿಗಳಿಗಿಂತ ಇವರೇ ಹೆಚ್ಚು ಹೋಮ, ಹವನ ನಡೆಸುತ್ತಾರೆ. ದಲಿತ ಸಂಘರ್ಷ ಸಮಿತಿ ಹೋರಾಟ ಕಲಿಸಿಕೊಟ್ಟಿರುವುದು ಇದನ್ನೇನಾ ಎಂದು ನಾವೆಲ್ಲಾ ಪ್ರಶ್ನಿಸಿಕೊಳ್ಳಬೇಕು ಎಂದು ಸೂಕ್ಷ್ಮವಾಗಿ ವಿಶ್ಲೇಷಿಸಿದರು.

    ಸಹಕಾರ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ತರಲು ನಾನು 1980 ರಿಂದ ಪ್ರಯತ್ನಿಸುತ್ತಿದ್ದೇನೆ. ಕೆಲವು ಪಟ್ಟಭದ್ರರು ಈ ಕ್ಷೇತ್ರವನ್ನು ತಮ್ಮ ಮುಷ್ಠಿಯಲ್ಲಿ ಹಿಡಿದುಕೊಂಡಿದ್ದರು. ಈಗ ಬದಲಾಗಿದೆ. ಎಲ್ಲರಿಗೂ ಸಾಲ ನೀಡುವಂತಾಗಿದೆ. ಹಿಂದೆ ಸಾಲ ನೀಡುವವರೂ ಅವರೇ, ಪಡೆದುಕೊಳ್ಳುವವರೂ ಅವರೇ ಆಗಿದ್ದರು. ದಲಿತರಿಗೆ ಇಲ್ಲಿ ಅವಕಾಶವೇ ಇರಲಿಲ್ಲ. ಮೀಸಲಾತಿಯಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿವೆ. ಸಹಕಾರ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಹಿಂದುಳಿದವರು, ದಲಿತರು, ಮಹಿಳೆಗೆ ಇಲ್ಲಿ ಅವಕಾಶವಿದೆ. ಧ್ವನಿ ಇಲ್ಲದವರಿಗೂ ಇಲ್ಲಿ ಧ್ವನಿ ನೀಡಲಾಗಿದೆ. ನಾವು ಮಾಡಬೇಕಾಗಿರುವುದು ಇದೇ ಕೆಲಸ ಎಂದರು.

    ಸಮಕಾಲೀನ ಸಾಮಾಜಿಕ ರಾಜಕೀಯ ಸಾಂಸ್ಕೃತಿಕ ತಲ್ಲಣಗಳು ಕುರಿತು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ವಿಚಾರ ಗೋಷ್ಠಿಯಲ್ಲಿ ವಿಷಯ ಮಂಡಿಸಿದರು. ದಲಿತ ಚಳುವಳಿಯ ಸವಾಲು ಮತ್ತು ಸಾಧ್ಯತೆಗಳು ಕುರಿತು ರವಿಕುಮಾರ್ ಬಾಗಿ, ಸಮಕಾಲೀನ ಕರ್ನಾಟಕ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆ ಕುರಿತು ಎ.ಎಲ್.ನರಸಿಂಹಮೂರ್ತಿ ಅವರು ವಿಷಯ ಮಂಡಿಸಿ ಮಾತನಾಡಿದರು.

    ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ ತಂಬೂರಿ ರಾಮಯ್ಯ, ಬಾಬು ಜಗಜೀವನರಾಂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಕುಂದೂರು ತಿಮ್ಮಯ್ಯ, ಕೆ.ದೊರೈರಾಜ್ ಅವರಿಗೆ ಅಭಿನಂದನೆ ನಡೆಯಿತು. ಡಾ.ರವಿಕುಮಾರ್ ನೀಹ ಅಭಿನಂದನಾ ನುಡಿಗಳನ್ನಾಡಿದರು. ಡಾ.ಶಿವಣ್ಣ ತಿಮ್ಮಾಪುರ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಚರಕ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಪರಶುರಾಮ ಅಧ್ಯಕ್ಷತೆ ವಹಿಸಿ ಆಶಯ ನುಡಿಗಳನ್ನಾಡಿದರು. ಉಪ ವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ಲೇಖಕಿಯರ ಸಂಘದ ಅಧ್ಯಕ್ಷೆ ಆಶಾ ಬೆಳ್ಳದೂರು, ಸಾಮಾಜಿಕ ಹೋರಾಟಗಾರ ಶ್ರೀ ಪಾದ ಭಟ್ ಇತರರಿದ್ದರು. ಎ.ರಾಮಚಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದ್ಯಾಗೇರಹಳ್ಳಿ ವಿರೂಪಾಕ್ಷ, ತುಮಕೂರು ಶ್ರೀ ಧರ್, ಕುಂದೂರು ಮುರುಳಿ ಇತರರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.