ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಭೀಮ ಗಾಯನ ಕಾರ್ಯಕ್ರಮವನ್ನು ಮಾರ್ಚ್ 5, 2026 ರಂದು ಬೆಳಿಗ್ಗೆ 10:30 ಗಂಟೆಗೆ ಧಾರವಾಡದ ಡಾ. ಬಿ.ಆರ್.ಅಂಬೇಡ್ಕರ ಪಾರಂಪರಿಕ ಕಟ್ಟಡ ಆವರಣದ ಜ್ಞಾನ ಬುದ್ಧವಿಹಾರ (ಬುದ್ಧ ರಕ್ಕಿಥ ಪ್ರೌಢಶಾಲೆ ಆವರಣ) ದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.
ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್‍ಪೀರ್ ಎಸ್.ಖಾದ್ರಿ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಅಡಿವೇಶ ಗಿ. ಇಟಗಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ನಾಗೇಂದ್ರ ಕುಮಾರ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ವಿನಯ ಕುಲಕರ್ಣಿ, ಎನ್.ಎಚ್.ಕೋನರಡ್ಡಿ, ಎಸ್. ವ್ಹಿ. ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ಎಫ್.ಹೆಚ್.ಜಕಪ್ಪನವರ, ಹುಬ್ಬಳ್ಳಿ–ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪಾಟೀಲ ಅವರು ಭಾಗವಹಿಸುವರು. ಬುದ್ಧ ರಕ್ಕಿಥ ವಸತಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ ಕೆ.ಹಲಗಿ ಅವರು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ ಭಾಗವಹಿಸುವರೆಂದು ಸಹಾಯಕ ನಿರ್ದೇಶಕ (ಪ) ಡಾ.ಸುರೇಶ ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣಾರ್ಥ ಭೀಮ ಗಾಯನ ಆಯೋಜನೆ: ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಯ ಕಲಾವಿದರನ್ನೊಳಗೊಂಡ ಕಲಾತಂಡಗಳಿಂದ ಭೀಮ ಗಾಯನ ಕಾರ್ಯಕ್ರಮ ಏರ್ಪಸಲಾಗಿದ್ದು, ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕøತಿಕ ಅಭಿವೃದ್ಧಿ ಸಂಘದ ಕಲಾವಿದರು ಅಂಬೇಡ್ಕರ ಅವರ ವಿಚಾರಧಾರೆಗಳ ಕುರಿತು ಗಾಯನ ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ.
ಅಂಬೇಡ್ಕರ ಅವರ ಸಾಧನೆ, ಸಮಾನತೆ, ಅಸ್ಪೃಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ನಡೆಯಲಿದೆ. ಸಮಾನತೆಯ ಸ್ವರ ಸಂಭ್ರಮ ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಜೀವಂತಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಸಮರ್ಪಣೆ ಕಾರ್ಯಕ್ರಮವೇ ಭೀಮ ಗಾಯನವಾಗಿದೆ. ಅಂಬೇಡ್ಕರ್ ಗೀತೆಗಳ ಮಹೋತ್ಸವಕ್ಕೆ ಸರ್ವರು ಆಗಮಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


