ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3 (2026)’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಪ್ರತಿಷ್ಠಿತ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವು ಏಪ್ರಿಲ್ 18ರಂದು ನಗರದ ವಿಶ್ವಕರ್ಮ ಬಾಂಕ್ವೇಟ್ ಹಾಲ್‌ನಲ್ಲಿ ಜರುಗಲಿದೆ.
ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಪರಿಣಿತ ಮಾರ್ಗದರ್ಶಕರಿಂದ ಸ್ಪರ್ಧಿಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಗುವುದು. ಆಸಕ್ತಿಯುಳ್ಳ ಮಕ್ಕಳು, ಯುವಕರು ಹಾಗೂ ಮಹಿಳೆಯರು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ.
ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ರಾಷ್ಟ್ರಮಟ್ಟದಲ್ಲಿ ಕೀರ್ತಿ ಗಳಿಸಲು ಸೂಕ್ತ ವೇದಿಕೆ ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಗುರಿಯಾಗಿದೆ.
“ಪ್ರತಿಯೊಬ್ಬರೂ ತಮ್ಮಲ್ಲಿರುವ ಕಲಾತ್ಮಕ ಪ್ರತಿಭೆಯನ್ನು ಹೊರಹಾಕಲು ಇದೊಂದು ಸುವರ್ಣಾವಕಾಶ. ಆಸಕ್ತಿಯುಳ್ಳವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.”
— ರಂಜನಾ ಪಾಟೀಲ್, ಕಾರ್ಯಕ್ರಮದ ಆಯೋಜಕಿ.
ನೋಂದಣಿ ಮಾಡಿಕೊಳ್ಳುವುದು ಹೇಗೆ?
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು 8088980416 ಅಥವಾ 8618038059 ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು:
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


