ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಟೆಲಿಫರ್ಫಾರ್ಮೆನ್ಸ್ ಹಾಗೂ ವೆಕ್ ಫೋರ್ಡ್ ಲ್ಯಾಬೊರೇಟರಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮಾರ್ಚ್ 11ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಪಿ.ಯು.ಸಿ, ಯಾವುದೇ ಪದವಿ, ಡಿಪ್ಲೊಮಾ (ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಎಲೆಕ್ಟ್ರಾನಿಕ್ಸ್) ಹಾಗೂ ಬಿ.ಇ.(ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಎಲೆಕ್ಟ್ರಾನಿಕ್ಸ್) ಪಾಸಾದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ಮಾರ್ಚ್ 11ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಡಿ.ಡಿ.ಪಿ.ಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟೆಲ್ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು–572102, ಇಲ್ಲಿ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488, ಮೊ.ಸಂ. 8792669410 ಯನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


