ತುಮಕೂರು: ಜಿಲ್ಲೆಯ ತುಮಕೂರು ತಾಲ್ಲೂಕಿನ ನಾಗವಲ್ಲಿ ಸಮೀಪದ ರಂಗಾಪುರ ಬಳಿಯ ಸೋಪನಹಳ್ಳಿ ಗೇಟ್‌ನಲ್ಲಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದಾರೆ.
ಕೇರಳದ ರಷೀದ್ ಅಲಿ (25) ಮತ್ತು ಅಮೀನ್ (23) ಮೃತಪಟ್ಟ ದುರ್ದೈವಿಗಳು. ಇವರು ಆಂಧ್ರಪ್ರದೇಶದಿಂದ ಕೇರಳಕ್ಕೆ ಲಾರಿಯಲ್ಲಿ ಕಡಪ ಕಲ್ಲುಗಳನ್ನು ಸಾಗಿಸುತ್ತಿದ್ದರು. ಪ್ರಯಾಣದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯು ರಸ್ತೆ ಬದಿಯ ಅರಳಿ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ನಂತರ ಕುಣಿಗಲ್–ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ರಸ್ತೆಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಹಂಪ್ಸ್ (ವೇಗ ತಡೆ) ಅಳವಡಿಸಬೇಕು ಮತ್ತು ಅಪಘಾತ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಈ ಕುರಿತು ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


