ಔರಾದ್: ತಾಲೂಕಿನ ಕಾಂಗ್ರೆಸ್ ಮುಖಂಡರಾದ ಭೀಮಸೇನರಾವ್ ಸಿಂದೆ ಅವರು ಸಾಮಾಜಿಕ ಬದ್ಧತೆ ಮೆರೆದಿದ್ದಾರೆ. ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕಾಗಿ ಅವರು ನೀಡಿದ್ದ ಭರವಸೆಯಂತೆ ಮಂಗಳವಾರ ₹2.50 ಲಕ್ಷ ನಗದು ಸಹಾಯಧನವನ್ನು ಹಸ್ತಾಂತರಿಸಿದರು.
ಈ ಹಿಂದೆ ಗ್ರಾಮಸ್ಥರು ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆಗೆ ಸಹಕರಿಸುವಂತೆ ಭೀಮಸೇನರಾವ್ ಸಿಂದೆ ಅವರಲ್ಲಿ ವಿನಂತಿಸಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ್ದ ಅವರು, ಮೂರ್ತಿ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವುದಾಗಿ ಮಾತು ಕೊಟ್ಟಿದ್ದರು. ಅದರಂತೆ ಮಂಗಳವಾರ ಚಿಕ್ಲಿ ಗ್ರಾಮಕ್ಕೆ ಭೇಟಿ ನೀಡಿದ ಸಿಂದೆ ಅವರು, ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ₹2 ಲಕ್ಷ 50 ಸಾವಿರ ಮೊತ್ತವನ್ನು ಹಸ್ತಾಂತರಿಸುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.
ಭೀಮಸೇನರಾವ್ ಸಿಂದೆ ಅವರ ಈ ಉದಾತ್ತ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಂತು ಬೆಂಬಲ ನೀಡುತ್ತಿರುವ ಅವರಿಗೆ ಚಿಕ್ಲಿ (ಜೆ) ಗ್ರಾಮದ ಪರವಾಗಿ ಹೃತ್ಪೂರ್ವಕವಾಗಿ ಅಭಿನಂದಿಸಿ, ಧನ್ಯವಾದಗಳನ್ನು ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ವೆಂಕಟರಾವ್ ಪಾಟೀಲ್, ಸೂರ್ಯಕಾಂತ್ ಮಾಲೆ, ದೇವ್ ಮಹಾರಾಜ್ ಸುಂಕನಾಳ್, ಶ್ರೀನಿವಾಸ್ ಪಾಟೀಲ್, ಕಿಶೋರ್ ಪಾಟೀಲ್, ಸಾಯಿನಾಥ್ ಪಾಟೀಲ್ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಯುವಕರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


