nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026
    Facebook Twitter Instagram
    ಟ್ರೆಂಡಿಂಗ್
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ
    ಜಿಲ್ಲಾ ಸುದ್ದಿ March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    By adminMarch 11, 2026No Comments3 Mins Read
    social media

    ಧಾರವಾಡ: ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಆದರೆ ಈ ಹಿಂದೆ ದಿನಪತ್ರಿಕೆ ಮತ್ತು ಟಿವಿ ಚಾನೆಲ್‍ ಗಳಲ್ಲಿ ಸೀಮಿತ ಅವಕಾಶವಿತ್ತು. ಇದೀಗ ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದಂತಾಗಿದ್ದು, ನೈಜ ಪ್ರಜಾಪ್ರಭುತ್ವ ಸಾಧಿಸಿದಂತಾಗಿದೆ ಎಂದು ಕವಿವಿ ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಎ.ಎಸ್.ಬಾಲಸುಬ್ರಮಣ್ಯ ಅವರು ಅಭಿಪ್ರಾಯಪಟ್ಟರು.

    ಅವರು ಇಂದು (ಮಾ.10) ಬೆಳಿಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮದ ವಿಭಾಗದ ಸಹಯೋಗದಲ್ಲಿ ಕವಿವಿ ಕನಕ ಅಧ್ಯಯನ ಪೀಠದ ಸಭಾಂಗಣದಲ್ಲಿ ಮೀಡಿಯಾ ಫೆಸ್ಟ್ 2026 ರ ಅಂಗವಾಗಿ ಆಯೋಜಿಸಿದ್ದ ವಿಚಾರಸಂಕಿರಣದಲ್ಲಿ ಪತ್ರಿಕೋದ್ಯಮದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ವಿಷಯಗಳ ವಿಶ್ವಾಸಾರ್ಹತೆ ವಿಷಯದ ಕುರಿತು ಮಾತನಾಡಿದರು.

    ಪತ್ರಿಕೆ, ರೇಡಿಯೋ, ಟಿವಿ ಚಾನೆಲ್‍ಗಳಿಗಿಂತ ಸೋಷಿಯಲ್ ಮೀಡಿಯಾ ಈಗ ಜನಪ್ರಿಯವಾಗಿದೆ. ಅದರ ಮುಂದುವರಿದ ಭಾಗವಾಗಿ ಕೃತಕ ಬುದ್ಧಿಮತ್ತೆ, ರೋಬೋಟ್ ತಂತ್ರಜ್ಞಾನ ಪ್ರವರ್ಧಮಾನಕ್ಕೆ ಬಂದಿದೆ. ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣಗಳಿಂದಾಗಿ ತಕ್ಷಣದ ಸಂವಹನ ಸಾಧ್ಯವಾಗಿದೆ. ಪ್ರತಿ ವ್ಯಕ್ತಿಯ ವ್ಯಕ್ತಿಗತ ಆಸಕ್ತಿಯ ಸುದ್ದಿಗಳನ್ನು ನೀಡಲಾಗುತ್ತಿದೆ. ವೃತ್ತಿ ಕೌಶಲ್ಯ ಮತ್ತು ನೈಪುಣ್ಯತೆ ಬೆಳೆಸಿಕೊಳ್ಳಲು ಎ.ಐ. ತಂತ್ರಜ್ಞಾನ ಮತ್ತು ಚಾಟ್ ಜಿಪಿಟಿ ಬಳಸಿಕೊಂಡು ಸ್ವಯಂ ಕಲಿತುಕೊಳ್ಳಲು ಅವರು ತಿಳಿಸಿದರು.

    ಕೃತಕ ಬುದ್ಧಿಮತ್ತೆ (ಎಐ) ಎಲ್ಲಾ ವಿಷಯಗಳ ಬಗ್ಗೆ ಮಾಹಿತಿ ಒದಗಿಸುತ್ತದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಮಾಧ್ಯಮಗಳಿಗೆ ಕೃತಕ ಬುದ್ಧಿಮತ್ತೆ (ಎಐ) ಹೆಚ್ಚು ಪ್ರಯೋಜನಕಾರಿಯಾಗಿದೆ. ಸಿನಿಮಾದಲ್ಲಿ ವಾಯ್ಸ ಓವರ್ ಪ್ರಾಮುಖ್ಯತೆಯನ್ನು ಹೊಂದಿದೆ. ವಾಯ್ಸ ಓವರನಲ್ಲಿ ಸಹ ಸಾಕಷ್ಟು ಉದ್ಯೋಗಾವಕಾಶಗಳಿವೆ. ಡಬ್ಬಿಂಗ್ ಆರ್ಟಿಸ್ಟಗಳಿಗೆ ಸಂಪರ್ಕ ಮಾಡಿದಾಗ ಉದ್ಯೋಗಗಳು ದೊರೆಯಲಿವೆ. ಚಾಟ್ ಜಿಪಿಟಿ ಕ್ಷಣದಲ್ಲೇ ಮಾಹಿತಿಯನ್ನು ಒದಗಿಸುತ್ತದೆ. ತಂತ್ರಜ್ಞಾನವನ್ನು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದನ್ನು ಕಲಿಯಬೇಕಿದೆ. ಭಾಷಾ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪದ ಸಂಪತ್ತು ಹೆಚ್ಚಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪೆನ್ನು, ಬುಕ್ ಯಾವಾಗಲೂ ಇಟ್ಟುಕೊಳ್ಳಬೇಕು ಎಂದು ಅವರು ತಿಳಿಸಿದರು.

    ಸೋಷಿಯಲ್ ಮೀಡಿಯಾಗಳು ಜನರಿಗೆ ಬಹಳ ಹತ್ತಿರವಾಗುತ್ತಿವೆ. ಕೃತಕ ಬುದ್ಧಿಮತ್ತೆ (ಎಐ)ಯನ್ನು ಅಭಿವೃದ್ಧಿ ಪಡಿಸುವಾಗ ಸುಮಾರು 2 ಕೋಟಿ ಪ್ರಶ್ನೆಗಳಿಗೆ ಉತ್ತರಿಸುವ ರೀತಿಯಲ್ಲಿ ಸೃಷ್ಟಿಸಲಾಗಿದೆ. ವಿಶ್ವದಾದ್ಯಂತ ಸೋಷಿಯಲ್ ಮೀಡಿಯಾಗಳ ಬಳಕೆ ಹೆಚ್ಚಳವಾಗಿದೆ. ಒಂದು ನಿಮಿಷದಲ್ಲಿ ಜಗತ್ತಿನ ಜೊತೆ ಸಂಭಾಷಣೆ ಮಾಡಬಹುದು. ಪ್ರಪಂಚದ ಶೇ.70 ರಷ್ಟು ಜನರು ಸೋಷಿಯಲ್ ಮೀಡಿಯಾಗಳಲ್ಲಿ ಮುಳುಗಿದ್ದಾರೆ. ಅಂತರ್ಜಾಲ ಬಳಕೆ ಮಾಡುವ ಶೇ.94 ರಷ್ಟು ಜನರು ಪ್ರತಿನಿತ್ಯ ಸುಮಾರು 2 ಗಂಟೆಗಳ ಕಾಲ ಸೋಷಿಯಲ್ ಮೀಡಿಯಾ ಬಳಕೆ ಮಾಡುತ್ತಾರೆ. ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ವಾಟ್ಸಪ್, ಇನ್ಸ್ಟ್ರಾಗ್ರಾಂಗಳು ಜನರಿಗೆ ಅವಶ್ಯಕವಾದ ಮನರಂಜನೆ ನೀಡುವ ತಾಣಗಳಾಗಿವೆ. 300 ಕೋಟಿ ಜನರು ಫೇಸ್‍ಬುಕ್ ಬಳಸುತ್ತಾರೆ. ಸೋಷಿಯಲ್ ಮೀಡಿಯಾ ದಿನನಿತ್ಯದ ಜೀವನದಲ್ಲಿ ಅವಿಭಾಜ್ಯ ಅಂಗವಾಗಿದೆ ಎಂದರು.

    ಭಾರತದಲ್ಲಿ ಸುಮಾರು 491 ಮಿಲಿಯನ್ ಜನರು ಸೋಷಿಯಲ್ ಮೀಡಿಯಾ ಬಳಕೆ ಮಾಡುತ್ತಿದ್ದಾರೆ. ಶೇ. 33.7 ರಷ್ಟು ಜನರು ಸೋಷಿಯಲ್ ಮಿಡಿಯಾ ಬಳಸುತ್ತಿದ್ದಾರೆ. ಕೋವೀಡ್ ಕಾಲದಲ್ಲಿ ಸೋಷಿಯಲ್ ಮೀಡಿಯಾಗಳ ಬಳಕೆ ಹೆಚ್ಚಾಯಿತು. ಜನರು ವಾಟ್ಸಾಪ್ ಮೂಲಕ ಗುಂಪುಗಳನ್ನು ರಚಿಸಿ ಸಂಭಾಷಣೆ ನಡೆಸುತ್ತಿರುವರು. ಭಾರತದಲ್ಲಿ 1 ಬಿಲಿಯನ್ ಜನರು ಅಂತರ್ಜಾಲವನ್ನು ಬಳಕೆ ಮಾಡುತ್ತಿದ್ದಾರೆ. ಯೂಟ್ಯೂಬ್ ಮೂಲಕ ಕ್ಷಣ ಮಾತ್ರದಲ್ಲಿ ಎಲ್ಲ ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ. ಯೂಟ್ಯೂಬ್‍ನಲ್ಲಿ ಲೈವ್ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತಿದೆ. ಪುಸ್ತಕಗಳನ್ನು ಓದುವವರ ಸಂಖ್ಯೆ ತೀರಾ ಕಡಿಮೆಯಾಗಿದೆ. ದಿನಪತ್ರಿಕೆಗಳು ಸಹ ಡಿಜಿಟಲ್ ಮಾಧ್ಯಮಗಳಾಗಿ ಬದಲಾವಣೆ ಮಾಡಿಕೊಂಡಿವೆ. ಆ ಮೂಲಕ ವೆಬ್‍ಸೈಟ್‍ನಲ್ಲಿ ಸುದ್ದಿಗಳನ್ನು ಬಿತ್ತರಿಸುತ್ತಿವೆ. ದಿನಪತ್ರಿಕೆಗಳ ಮುಂಚಿತವಾಗಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸುದ್ದಿಗಳು ವೈರಲ್ ಆಗುತ್ತವೆ. ಡಿಜಿಟಲ್ ಜಾಹೀರಾತುಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾದ ನಂತರ ಟಿವಿ, ರೇಡಿಯೋ, ಬ್ಯಾನರ್‍ಗಳ ಮೂಲಕ ತಿಳಿದುಕೊಳ್ಳಲಾಗುತ್ತದೆ. ಆದರೆ ಇಂದು ಎಲ್ಲವೂ ಬದಲಾಗಿದೆ ಎಂದರು.

    ಹಿರಿಯ ಪತ್ರಕರ್ತರಾದ ಸುಭಾμï ಹೂಗಾರ ಅವರು ಪತ್ರಿಕೋದ್ಯಮ ಮತ್ತು ನವ ತಂತ್ರಜ್ಞಾನ ಬಳಕೆ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಪತ್ರಿಕಾ ರಂಗ ಹೆಚ್ಚು ಬದಲಾವಣೆಗಳನ್ನು ಕಂಡಿದೆ. ಪತ್ರಕರ್ತರಾಗಲು ಪತ್ರಿಕೋದ್ಯಮ ಪದವಿ ಅವಶ್ಯಕವಾಗಿಲ್ಲ. ಪತ್ರಿಕೋದ್ಯಮಕ್ಕೆ ಅವಶ್ಯಕವಾಗಿರುವ ಕೌಶಲ್ಯಗಳನ್ನು ಹೊಂದಿದವರು ಪತ್ರಕರ್ತರಾಗಬಹುದು. ಪತ್ರಕರ್ತರು ಕೃತಕ ಬುದ್ಧಿಮತ್ತೆಯನ್ನು ಹೇಗೆ ಬಳಕೆ ಮಾಡಬೇಕು ಎಂಬುದನ್ನು ಅರಿತುಕೊಳ್ಳಬೇಕಿದೆ. ಇಲ್ಲವಾದರೆ ಪತ್ರಕರ್ತರ ಅಸ್ತಿತ್ವ ಉಳಿಯಲು ಸಾಧ್ಯವಿಲ್ಲ. ಆನ್‍ಲೈನ್ ಲೈವ್ ಮೂಲಕ ಕಾರ್ಯಕ್ರಮಗಳನ್ನು ನೇರವಾಗಿ ವೀಕ್ಷಿಸಬಹುದು. ಎಐ ನೀಡಿದ ಮಾಹಿತಿಯನ್ನು ಎಂಟು ಜನರಲ್ಲಿ ಒಬ್ಬರೂ ಮಾತ್ರ ನಂಬುತ್ತಾರೆ. ಯುಟ್ಯೂಬರ್‍ಗಳು ಪ್ರತಿ ಗಲ್ಲಿಗಳಲ್ಲಿ ಸಹ ಸಿಗುತ್ತಾರೆ. ಅಷ್ಟರಮಟ್ಟಿಗೆ ಯೂಟ್ಯೂಬ್ ಬೆಳವಣಿಗೆ ಕಂಡಿದೆ. ವಿದ್ಯಾರ್ಥಿಗಳು ಅವುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

    ಕಾರ್ಯಕ್ರಮದಲ್ಲಿ ವಾರ್ತಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಬಸವರಾಜ ಕಂಬಿ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕನ್ನಡಪ್ರಭ ಪತ್ರಿಕೆಯ ಸ್ಥಾನಿಕ ಸಂಪಾದಕ ಮಲ್ಲಿಕಾರ್ಜುನ ಸಿದ್ದಣ್ಣವರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಸಂಜಯಕುಮಾರ ಮಾಲಗತ್ತಿ ಹಾಗೂ ವಿವಿಧ ಮಾಧ್ಯಮ ಪ್ರತಿನಿಧಿಗಳು, ವಿವಿಧ ಪತ್ರಿಕೋದ್ಯಮ ಕಾಲೇಜುಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ವಾರ್ತಾ ಇಲಾಖೆಯ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಡಾ.ಪ್ರಭಾಕರ ಕಾಂಬಳೆ ಸ್ವಾಗತಿಸಿದರು. ಡ್ಯಾನಿಯಲ್ ಮತ್ತು ದಿನೇಶ ಗೌಡ ಪರಿಚಯಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ನೋಡಲು ಮುಳ್ಳುಗಳಿಂದ ತುಂಬಿ ಹೊರಗಿನಿಂದ ಕಠಿಣವಾಗಿ ಕಾಣಿಸುವ ಕಳ್ಳಿ ಗಿಡದ ಹಣ್ಣುಗಳು (Prickly Pears / Cactus Fruit) ಅತ್ಯಂತ…

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.