nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026
    Facebook Twitter Instagram
    ಟ್ರೆಂಡಿಂಗ್
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    • ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
    • ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ
    ಚಿಕ್ಕನಾಯಕನಹಳ್ಳಿ March 12, 2026

    ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ

    By adminMarch 12, 2026No Comments2 Mins Read
    huliyaru

    ಹುಳಿಯಾರು: ಇಲ್ಲಿಗೆ ಸಮೀಪದ ದೊಡ್ಡಬಿದರೆಯ ಡಾ.ಗೇಟ್ ಸಮೀಪದ ತೆಂಗಿನ ತೋಟವೊಂದಕ್ಕೆ  ಆಕಸ್ಮಿಕವಾಗಿ ಬೆಂಕಿ ತಗುಲಿದ್ದು,  ಪರಿಣಾಮವಾಗಿ ಐದು ಎಕರೆ ಪ್ರದೇಶದಲ್ಲಿದ್ದ ಹತ್ತಾರು ತೆಂಗಿನ ಮರಗಳು ಹಾಗೂ ಜಾಲಿ ಮರಗಳು ಅಗ್ನಿಗೆ ಆಹುತಿಯಾಗಿವೆ.

    ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಸರ್ವೆ ನಂಬರ್ 181 ರ ತಮ್ಮಯ್ಯ ಎಂಬುವವರ ತೋಟದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ವಿಪರೀತ ಬಿಸಿಲು ಹಾಗೂ ಗಾಳಿಯ ವೇಗಕ್ಕೆ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ, ರಸ್ತೆಯ ಮತ್ತೊಂದು ಬದಿಯ ಸರ್ವೆ ನಂಬರ್ 200 ಹಾಗೂ 75 ರ ಜಮೀನುಗಳಿಗೂ ಕಿಡಿ ಹಾರಿ ಕೆಲವು ಮರಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳ  ಸಕಾಲಕ್ಕೆ  ತಲುಪದ ಕಾರಣ ಬೆಂಕಿ ನಂದಿಸಲಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದರು.

    ಬೆಂಕಿಯಿಂದಾಗಿ ಹಬ್ಬಿದ ಹೊಗೆಯ ದಟ್ಟ ಕಾರ್ಮೋಡಗಳನ್ನು ಕಂಡು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೊಳಗಾದರು. ಸಾರ್ವಜನಿಕರು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರೂ, ವಾಹನ ಬರಲು ಒಂದು ಗಂಟೆ ತಡವಾಯಿತು. ಈ ವಿಳಂಬದಿಂದಾಗಿ ಬೆಂಕಿಯನ್ನು ಹತೋಟಿಗೆ ತರುವ ಹೊತ್ತಿಗೆ ತೋಟದ ಬಹುಭಾಗ ಸುಟ್ಟು ಕರಕಲಾಗಿತ್ತು.

    ಇದೇ ಜಾಗದಲ್ಲಿ ಕಳೆದ ಒಂದು ವಾರದಲ್ಲಿ ಸಂಭವಿಸುತ್ತಿರುವ ಮೂರನೇ ಬೆಂಕಿ ಅವಘಡ ಇದಾಗಿದೆ. ಪದೇ ಪದೇ ಬೆಂಕಿ ಬೀಳುತ್ತಿದ್ದರೂ, ಅಗ್ನಿಶಾಮಕ ವ್ಯವಸ್ಥೆಯ ಕೊರತೆಯಿಂದಾಗಿ ಗ್ರಾಮಸ್ಥರು ಬೆಂಕಿ ನಂದಿಸಲಾಗದೆ ಅಸಹಾಯಕರಾಗಿ ನಿಲ್ಲುವಂತಾಗಿದೆ. ಅಗ್ನಿಶಾಮಕ ವಾಹನವು ದುಗಡಿಹಳ್ಳಿಗೆ ತೆರಳಿದ್ದರಿಂದ ಘಟನಾ ಸ್ಥಳಕ್ಕೆ ಬರಲು ವಿಳಂಬವಾಯಿತು. ಇರುವ ಒಂದು ವಾಹನದಲ್ಲಿ ನೀರು ಖಾಲಿಯಾದಲ್ಲಿ ಮತ್ತೆ ತುಂಬಿಸಿಕೊಂಡು ಬರುವಷ್ಟರಲ್ಲಿ ಹಾನಿಯ ಪ್ರಮಾಣ ದುಪ್ಪಟ್ಟಾಗಿತ್ತು.

    ಚಿಕ್ಕನಾಯಕನಹಳ್ಳಿ ತಾಲ್ಲೂಕು ವಿಸ್ತಾರವಾಗಿದ್ದು, ಇಡೀ ತಾಲ್ಲೂಕಿಗೆ ಇರುವುದು ಕೇವಲ ಒಂದೇ ಅಗ್ನಿಶಾಮಕ ಠಾಣೆ. ಅಲ್ಲಿರುವುದೂ ಒಂದೇ ವಾಹನ. ದೊಡ್ಡಬಿದರೆಯಲ್ಲಿ ಬೆಂಕಿ ಬಿದ್ದ ಸಮಯದಲ್ಲಿ ಗೋಪಾಲಪುರ, ಕಾತ್ರಿಕೆಹಾಲ್ ಹಾಗೂ ಕೊಡಗೂರು ಗ್ರಾಮಗಳಿಂದಲೂ ಅಕಸ್ಮಿಕ ಬೆಂಕಿ ಅವಘಡದ ಕರೆಗಳು ಬಂದಿದ್ದವು. ಆದರೆ ಇದ್ದ ಒಂದೇ ವಾಹನ ಬೇರೆಡೆ ಕಾರ್ಯಾಚರಣೆಯಲ್ಲಿದ್ದ ಕಾರಣ ದೊಡ್ಡಬಿದರೆಗೆ ಬರಲು ತಡವಾಯಿತು.

    ಜನವರಿ ಬಳಿಕ 173 ಬೆಂಕಿ ಕರೆ:

    ಈ ವರ್ಷದ ಜನವರಿಯಿಂದ ಈವರೆಗೆ ಒಟ್ಟು 173 ಫೈರ್ ಕಾಲ್‌ಗಳು ಬಂದಿರುವುದು ತಾಲ್ಲೂಕಿನ ಭೀಕರ ಪರಿಸ್ಥಿತಿಗೆ ಸಾಕ್ಷಿ. ಕೂಡಲೇ ಸರ್ಕಾರ ಹುಳಿಯಾರಿನಲ್ಲಿ ಠಾಣೆ ಸ್ಥಾಪಿಸಿ, ಹೆಚ್ಚುವರಿ ವಾಹನಗಳನ್ನು ನಿಯೋಜಿಸಬೇಕಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು

    July 17, 2026

    ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್

    June 27, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

     ರಾಘವೇಂದ್ರ ಅಡಿಗ ಎಚ್ಚೆನ್. ‘ಪುಣ್ಯಕೋಟಿ’ ಹಾಡನ್ನು ಕೇಳದ ಕಿವಿಗಳೆ ಇಲ್ಲ ಎನ್ನಬಹುದು. ಅಂತಹ “ಪುಣ್ಯಕೋಟಿ” ಹಾಡನ್ನು ಖ್ಯಾತ ಕಾದಂಬರಿಕಾರ, ಬರಹಗಾರ,…

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.