ಸರಗೂರು: ಎಚ್ ಪಿ ವಿ ಲಸಿಕೆಯು ಗರ್ಭಕಂಠದ ಕ್ಯಾನ್ಸರ್ ಗೆ ಮುಖ್ಯ ಕಾರಣವಾದ ಹ್ಯೂಮನ್ ಪ್ಯಾಪಿಲೋಮ ವೈರಸ್ ಸೋಂಕಿನಿಂದ ರಕ್ಷಣೆ ನೀಡುತ್ತದೆ. ಈ ಅಭಿಯಾನವು ಹದಿಹರೆಯದ ಬಾಲಕಿಯರ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಹೆಜ್ಜೆಯಾಗಿದ್ದು ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಸಮುದಾಯ ಆಸ್ಪತ್ರೆಯಲ್ಲಿ ಶುಕ್ರವಾರದಂದು ತಾಲೂಕು ಆರೋಗ್ಯಾಧಿಕಾರಿ ಇಲಾಖೆ ದಿಂದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ(ಎಚ್ ಪಿ ವಿ) ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹ್ಯೂಮನ್ ಪ್ಯಾಪಿಲೋಮ ವೈರಸ್ ಗರ್ಭಕಂಠ ಸೇರಿದಂತೆ ಅನೇಕ ಮಾದರಿಯ ಕ್ಯಾನ್ಸರ್ ಗೆ ಕಾರಣವಾಗುತ್ತದೆ. ಲಸಿಕೆ ಹಾಕಿಸಿಕೊಳ್ಳುವುದರಿಂದ ಕ್ಯಾನ್ಸರ್ ಸೇರಿದಂತೆ ಇತರ ಗಂಭೀರ ಕಾಯಿಲೆಗಳು ಬರದಂತೆ ತಡೆಯಬಹುದು’ ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ಅಭಿಯಾನದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 14ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ತಾಲ್ಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುವುದು.
ಫಲಾನುಭವಿಗಳು ಗುರುತಿನ ಚೀಟಿಯೊಂದಿಗೆ ಮೊಬೈಲ್ ಫೋನ್ ಸಂಖ್ಯೆ, ಆಧಾರ್ ಕಾರ್ಡ್ ಜತೆಗೆ ಆಸ್ಪತ್ರೆಗೆ ಬಂದು ಲಸಿಕೆ ಪಡೆಯಬಹುದು. ಹೆಣ್ಣು ಮಕ್ಕಳ ಸದೃಢ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಎಲ್ಲ ಪೋಷಕರು ಸಹಕರಿಸಬೇಕು’ ಎಂದರು.
ಗರ್ಭಕಂಠದ ಕ್ಯಾನ್ಸರ್ ಮಹಿಳೆಯರ ಆರೋಗ್ಯಕ್ಕೆ ಇರುವ ಪ್ರಮುಖ ಬೆದರಿಕೆಗಳಲ್ಲಿ ಒಂದು, ಆದರೆ ಇದು ತಡೆಗಟ್ಟಬಹುದಾದ ಕ್ಯಾನ್ಸರ್’ಗಳಲ್ಲಿ ಒಂದಾಗಿದೆ. ಇಂದು ನಾವು, ಹ್ಯೂಮನ್ ಪ್ಯಾಪಿಲೋಮವೈರಸ್ (ಎಚ್‌ಪಿವಿ) ಲಸಿಕೆಗೆ ಆದ್ಯತೆ ನೀಡುವ ಮೂಲಕ, ನಾವು ಕೇವಲ ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತಿಲ್ಲ, ಬದಲಿಗೆ, ನಾವು “ತಡೆಗಟ್ಟಬಹುದಾದ” ಲಸಿಕೆಯ ಮೇಲೆ ಹೂಡಿಕೆ ಮಾಡುತ್ತಿದ್ದೇವೆ.
ಪ್ರಸ್ತುತ ಈ ಲಸಿಕೆಯನ್ನು14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನ ಒಳಗಿನ ಹೆಣ್ಣು ಮಕ್ಕಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ನೀಡಲಾಗುವುದು. ಲಸಿಕಾಕರಣವನ್ನು ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಮಾರ್ಗಸೂಚಿ ಅನುಸಾರ ಆಯೋಜನೆ ಮಾಡಲಾಗುತ್ತಿದೆ. ಲಸಿಕೆ ಪಡೆದವರ ಹೆಸರನ್ನು ‘ಯೂ-ವಿನ್‘ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗುದು’ ಎಂದು ಮಾಹಿತಿ ನೀಡಿದರು. ಲಸಿಕೆ ಪಡೆದ ಮಕ್ಕಳಿಗೆ ಪ್ರಮಾಣಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಚೈತ್ರ ಸ್ವಾಮಿ, ಉಪಾಧ್ಯಕ್ಷ ಶಿವಕುಮಾರ್, ಇಓ ಪ್ರೇಮ್ ಕುಮಾರ್, ಆಡಳಿತಾಧಿಕಾರಿ ಪಾರ್ಥ ಸಾರಥಿ, ಡಾ.ಭಾಗ್ಯಲಕ್ಷ್ಮಿ, ಡಾ.ಜಯಮಾಲಾ, ಡಾ.ಪ್ರಿಯಾಂಕಾ, ಡಾ.ಪೂರ್ಣಿಮಾ, ರವಿರಾಜ್, ಜಗದೀಶ್, ಪ್ರಗತಿ ವಿದ್ಯಾಸಂಸ್ಥೆ ಶಿಕ್ಷಕ ಸುರೇಶ್, ಇನ್ನೂ ಮುಖಂಡರು ಸೇರಿದಂತೆ ಸಿಬ್ಬಂದಿ ವರ್ಗದವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಶಾಲೆಯ ಮಕ್ಕಳು ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


