ಬೀದರ್: ದೇಶದಲ್ಲಿ ಸದ್ಯ ಎದುರಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೀವ್ರ ಕೊರತೆಯು ಕೇಂದ್ರದ ಬಿಜೆಪಿ ಸರ್ಕಾರವೇ ಹರಿಬಿಟ್ಟಿರುವ ಬಿಕ್ಕಟ್ಟು ಎಂದು ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಉದ್ಯಮಿ ಸ್ನೇಹಿತರನ್ನು ಓಲೈಸಲು ದೇಶದ ವಿದೇಶಾಂಗ ನೀತಿಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಪರಿಸ್ಥಿತಿ ಇರುವಾಗ ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡುವ ಅಗತ್ಯವೇನಿತ್ತು? ಅವರು ಇರಾನ್ ನಾಯಕರ ಮೇಲಿನ ದಾಳಿಯನ್ನು ಖಂಡಿಸದೆ ಕೇವಲ ಪ್ರಶಸ್ತಿ ಪಡೆಯಲು ಆಸಕ್ತಿ ತೋರಿದರು ಎಂದು ಟೀಕಿಸಿದರು.
ದೇಶದ ಹಿತಕ್ಕಿಂತ ಹೆಚ್ಚಾಗಿ ಇಬ್ಬರು-ಮೂವರು ಉದ್ಯಮಿ ಗೆಳೆಯರಿಗಾಗಿ ವಿದೇಶಾಂಗ ನೀತಿಯನ್ನು ಬಲಿಕೊಡಲಾಗಿದೆ. ಇದರ ಪರಿಣಾಮವಾಗಿ ಇಂದು ದೇಶದ ಜನತೆ ಎಲ್‌ಪಿಜಿ ಕೊರತೆ ಅನುಭವಿಸುವಂತಾಗಿದೆ ಎಂದರು.
ಕಳೆದ 14 ದಿನಗಳಿಂದ ಯುದ್ಧ ನಡೆಯುತ್ತಿದ್ದರೂ ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಅಥವಾ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಈ ಬಗ್ಗೆ ಸ್ಪಷ್ಟನೆ ನೀಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.
ಇದೇ ವೇಳೆ, ಪರಿಸ್ಥಿತಿ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಹೋಟೆಲ್‌ಗಳು ಕಲ್ಲಿದ್ದಲು ಬಳಸಲು ಮತ್ತು ಮನೆಗಳಲ್ಲಿ ಪಿಎನ್‌ಜಿ (PNG) ಬಳಸಲು ಸಲಹೆ ನೀಡಿರುವುದನ್ನು ಅವರು ಖಂಡಿಸಿದರು.
ಮತ್ತೊಂದೆಡೆ, ಲೋಕಸಭೆಯಲ್ಲಿ ಈ ಬಗ್ಗೆ ಪ್ರತಿಭಟನೆ ನಡೆಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಿಡಿಕಾರಿದ್ದು, ದೇಶದ ಹಿತಾಸಕ್ತಿಯ ವಿಷಯದಲ್ಲಿ ವಿರೋಧ ಪಕ್ಷಗಳು ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿವೆ ಎಂದು ತಿರುಗೇಟು ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


