ಬೆಂಗಳೂರು: ದೇಶದಲ್ಲಿ ಅಡುಗೆ ಅನಿಲ (LPG), ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಿದೆ ಎಂಬುದು ಕೇವಲ ವದಂತಿ. ಕಾಂಗ್ರೆಸ್ ಪಕ್ಷವು ರಾಜಕೀಯ ಲಾಭಕ್ಕಾಗಿ ಜನರಲ್ಲಿ ಗೊಂದಲ ಮೂಡಿಸಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಇಂಧನ ಕೊರತೆಯಾಗುತ್ತದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರು ಒಬ್ಬ ಅಪ್ರಬುದ್ಧ ನಾಯಕ ಎಂದು ಜೋಶಿ ಟೀಕಿಸಿದರು.
ಸಿಲಿಂಡರ್ ಕೊರತೆ ಇದೆ ಎಂದು ಮುಷ್ಕರಕ್ಕೆ ಕರೆ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ದುರ್ದೈವದ ಸಂಗತಿ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಬಾರದು ಎಂದರು.
ಮೊದಲು ಭಾರತ 20–22 ದೇಶಗಳಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ತರಿಸಿಕೊಳ್ಳುತ್ತಿತ್ತು, ಈಗ ಅದನ್ನು 40 ದೇಶಗಳಿಗೆ ಹೆಚ್ಚಿಸಲಾಗಿದೆ. ಇದರಿಂದಾಗಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಗ್ಯಾಸ್ ಕೊರತೆಯಾಗಬಹುದು ಎಂಬ ಆತಂಕದಿಂದ ಜನರು ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಸ್ವಲ್ಪ ರಶ್ ಕಂಡುಬರುತ್ತಿದೆ. ಆದರೆ ಐದು ದಿನಗಳಲ್ಲಿ ಎಲ್‌ಪಿಜಿ ಉತ್ಪಾದನೆಯನ್ನು ಶೇ. 28ರಷ್ಟು ಹೆಚ್ಚಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಇರಾನ್–ಇಸ್ರೇಲ್ ಯುದ್ಧದ ನಡುವೆಯೂ ಹರ್ಮುಜ್ ಜಲಸಂಧಿ ಮೂಲಕ ಯುಎಇ ಹಡಗುಗಳು ಭಾರತಕ್ಕೆ ಬರುತ್ತಿವೆ. ಇದು ಇತರ ದೇಶಗಳೊಂದಿಗೆ ಪ್ರಧಾನಿ ಮೋದಿ ಹೊಂದಿರುವ ಉತ್ತಮ ಬಾಂಧವ್ಯಕ್ಕೆ ಸಾಕ್ಷಿ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


