ತುಮಕೂರು: ಜಿಲ್ಲೆಯಾದ್ಯಂತ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ–1 ಇಂದಿನಿಂದ (ಮಾರ್ಚ್ 18) ಪ್ರಾರಂಭವಾಗಲಿದ್ದು, ಏಪ್ರಿಲ್ 2ರ ವರೆಗೆ ನಡೆಯಲಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಶಾಲಾ ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಜಿಲ್ಲೆಯಲ್ಲಿ ಒಟ್ಟು 37,130 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. (ತುಮಕೂರು ದಕ್ಷಿಣ ಜಿಲ್ಲೆ: 23,693 ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆ: 13,437).
ಜಿಲ್ಲೆಯಾದ್ಯಂತ ಒಟ್ಟು 131 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ತುಮಕೂರು ದಕ್ಷಿಣದ 82 ಮತ್ತು ಮಧುಗಿರಿಯ 49 ಕೇಂದ್ರಗಳು ಸೇರಿವೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಮತ್ತು ಹತ್ತಿರದ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸ್ಥಾಪಿಸಲಾದ ವೆಬ್ ಕಾಸ್ಟಿಂಗ್ ಕೇಂದ್ರದ ಮೂಲಕ ನೇರ ನಿಗಾ ಇರಿಸಲಾಗುತ್ತದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ (Hall Ticket) ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತು ವಿದ್ಯಾರ್ಥಿಗಳಿಗೆ ಪೂರಕವಾದ ಡೆಸ್ಕ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರತಿ ಕೇಂದ್ರಕ್ಕೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಬೆಸ್ಕಾಂಗೆ ಸೂಚನೆ ನೀಡಲಾಗಿದೆ.
ಪರೀಕ್ಷೆಯ ಪಾರದರ್ಶಕತೆ ಕಾಪಾಡಲು ಮತ್ತು ಯಾವುದೇ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಎಲ್ಲಾ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


