ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿರುವ ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ದೇವೇಂದ್ರಪ್ಪ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಯುಗಾದಿ ಹಬ್ಬದ ಸಂಭ್ರಮದ ನಡುವೆಯೇ ಈ ಘಟನೆ ಸಂಭವಿಸಿರುವುದು ಭಕ್ತರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.
ಮೃತ ದೇವೇಂದ್ರಪ್ಪ ಅವರು ಈ ಹಿಂದೆ ಮುಳ್ಳೂರು (ಇಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಂತರ ಜೀವನದಲ್ಲಿ ವೈರಾಗ್ಯ ತಾಳಿದ ಅವರು ದೀಕ್ಷೆ ಪಡೆದು ಮಠವನ್ನು ಸ್ಥಾಪಿಸಿದ್ದರು.
ಬಸ್ಸಾಪುರ ಮಠದ ಭಜನಾ ಕೋಣೆಯಲ್ಲಿ ಸ್ವಾಮೀಜಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಆತ್ಮಹತ್ಯೆಗೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ರಮೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ. ಮಠದ ಭಕ್ತರು ಮತ್ತು ಗ್ರಾಮಸ್ಥರು ಈ ಅನಿರೀಕ್ಷಿತ ಘಟನೆಯಿಂದ ಆತಂಕಕ್ಕೊಳಗಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


