ತಿಪಟೂರು: ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ನಾಲ್ಕು ದಿನಗಳ ಕಾಲ ನಡೆಯಲಿದೆ ಅಂತರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕ್ರೀಡಾಕೂಟಕ್ಕೆ ಮಾರ್ಚ್ 26ರಂದು ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ ನೀಡಲಿದ್ದಾರೆ ಎಂದು ಕಲ್ಪತರು ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೆ ರುದ್ರಪ್ಪನವರ ಸಮ್ಮುಖದಲ್ಲಿ ಟಿ.ಎಸ್. ಶಿವಪ್ರಸಾದ್ ತಿಳಿಸಿದರು.
2.0 ಅಂತರವಿಟಿಯು ಕ್ರೀಡಾಕೂಟವನ್ನು ಆಯೋಜಿಸಲು ನಮ್ಮ ಸಂಸ್ಥೆ ತಯಾರಿ ನಡೆಸುತ್ತಿದೆ, ಹಾಗೂ ವಿದ್ಯಾರ್ಥಿಗಳ ಪ್ರದರ್ಶನಕ್ಕೆ ಈ ಕ್ರೀಡಾಕೂಟ ಮಹತ್ವದ ವೇದಿಕೆಯಾಗಿದೆ ಎಂದರು.
ಮಾರ್ಚ್26ರಂದು ಮಧ್ಯಾಹ್ನ 3 ಗಂಟೆಗೆ ತಿಪಟೂರು ಕೆಂಪಮ್ಮ ದೇವಿ ದೇವಾಲಯದಿಂದ ಭವ್ಯ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ. ಈ ಕ್ರೀಡಾ ಕೂಟದಲ್ಲಿ 2 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ, 250 ಕೋಚ್ ಗಳು ಆಗಮಿಸಲಿದ್ದಾರೆ. ರಾತ್ರಿ ಎಂಟು ಗಂಟೆವರೆಗೆ ಪೈಡ್ಲಲೈಟ್ ಕ್ರೀಡಾಕೂಟ ನಡೆಯಲಿದೆ ಎಂದರು.
ಕೇಂದ್ರ ಸಚಿವ ವಿ.ಸೋಮಣ್ಣ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಸಂಸ್ಥೆ ಅಧ್ಯಕ್ಷ ಪಿ.ಕೆ.,ತಿಪ್ಪೇರುದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ.ಷಡಕ್ಷರಿ, ಇಲಾಖೆ ಆಯುಕ್ತ ಆರ್.ಚೇತನ್ ಏಕಲವ್ಯ ಪ್ರಶಸ್ತಿ ವಿಜೇತ ನಿಹಾಲ್ ಜೋಯೆಲ್ ಭಾಗವಹಿಸಲಿದ್ದಾರೆ.
ವಿಜೇತ ಕ್ರೀಡಾಪಟುಗಳಿಗೆ ವಿಟಿಯು ವತಿಯಿಂದ ಬೆಳ್ಳಿ ಪದಕ ನೀಡಲಾಗುವುದು, ಈ ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ ವಿನಯ್ ರಾಜ್ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆ ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜ್ ಟಿ.ಎಸ್.ಬಸವರಾಜ್, ಜಿ.ಪಿ. ದೀಪಕ್, ಉಮಾಶಂಕರ್, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎಸ್.ಜಯಂತ್ ಹಲವಾರು ಉಪನ್ಯಾಸಕರು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


