ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಐಸಿಐಸಿಐ ಬ್ಯಾಂಕ್, ಸಾಟಿನ್ ಕ್ರೆಡಿಟ್ ಕೇರ್ ನೆಟ್ವರ್ಕಿಂಗ್ ಲಿ. ಹಾಗೂ ಗ್ರೇ ಮ್ಯಾಟರ್ ರಿಸೋರ್ಸಸ್ ಪ್ರೈ. ಲಿ. ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮಾ. 23ರಂದು ನೇರ ಸಂದರ್ಶನ ನಡೆಯಲಿದೆ.
ಎಸ್ಎಸ್ಎಲ್ಸಿ, ಪಿಯುಸಿ, ಯಾವುದೇ ಪದವಿ, ಐಟಿಐ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳು ಮಾ. 23ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿಡಿಪಿಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟೆಲ್ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು-572102, ಇಲ್ಲಿ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


