nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026
    Facebook Twitter Instagram
    ಟ್ರೆಂಡಿಂಗ್
    • ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
    • ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!
    • ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು
    • ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ
    • ತುಮಕೂರು: ಸೆ.15ರವರೆಗೆ ಗ್ರಾಮೀಣ ಗ್ಯಾರಂಟಿ ಕಾರ್ಡ್ ವಿತರಣೆ
    • ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ: ಮಲ್ಲಿಕಾರ್ಜುನ್
    ಪಾವಗಡ March 21, 2026

    ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ: ಮಲ್ಲಿಕಾರ್ಜುನ್

    By adminMarch 21, 2026No Comments2 Mins Read
    mallikarjuna

    ಪಾವಗಡ : ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದ ಮಲ್ಲಿಕಾರ್ಜುನ್ ಅವರು ತಮ್ಮದೇ ಕಚೇರಿಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ.

    ಪಟ್ಟಣದ ಆಪ್ ಬಂಡೆ ಪ್ರದೇಶದಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ, ಸಾವಿಗೆ ಮುನ್ನ ಮಲ್ಲಿಕಾರ್ಜುನ್ ಅವರು ವಿಡಿಯೋ ಸಂದೇಶವನ್ನು ದಾಖಲಿಸಿ, ತಮ್ಮ ಸಹೋದ್ಯೋಗಿಗಳಿಗೆ ಕಳುಹಿಸಿರುವುದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿದೆ.

    ಆ ವಿಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ ಕಿರುಕುಳವೇ ತಮ್ಮ ಸಾವಿಗೆ ಕಾರಣ ಎಂದು ಆರೋಪಿಸಿರುವುದಾಗಿ ಮೂಲಗಳು ತಿಳಿಸಿವೆ.

    ಕಳೆದ ಮೂರು ವರ್ಷಗಳಿಂದ ಪಾವಗಡದಲ್ಲಿ ಸೇವೆ ಸಲ್ಲಿಸುತ್ತಿದ್ದ ಮಲ್ಲಿಕಾರ್ಜುನ್ ಅವರ ಸೇವಾ ಅವಧಿ ಇನ್ನೂ ಒಂದೇ ವಾರದಲ್ಲಿ ಮುಕ್ತಾಯಗೊಳ್ಳಬೇಕಿತ್ತು. ನಿವೃತ್ತಿಗೆ ಮುನ್ನವೇ ಇಂತಹ ದುರಂತ ಸಂಭವಿಸಿರುವುದು ಎಲ್ಲರಲ್ಲೂ ಆಘಾತ ಮೂಡಿಸಿದೆ.

    ಇವರು ಮೂಲತಃ ಪಾವಗಡ ತಾಲ್ಲೂಕಿನ ಗುಂಡರ್ಲಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ್ ಅವರ ನಿಧನದಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಮಗನ ಮುಂದೆ ತಾಯಿ ಬಿಕ್ಕಿ ಬಿಕ್ಕಿ ಅತ್ತ ದೃಶ್ಯಗಳು ಮನಕಲಕುವಂತಿವೆ.

    ಇನ್ನೂ ಘಟನಾ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

     ಮೃತ ಮಲ್ಲಿಕಾರ್ಜುನ್ ಕೊನೆಯ ಸಂದೇಶ

    “ನಮ್ಮ ತಾಯಿ, ಹೆಂಡತಿ, ಮಕ್ಕಳು ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ. ಅವರಿಗೆ ನಾನು ಇನ್ನೂ ಸಹಾಯ ಮಾಡಬೇಕಿತ್ತು, ಆದರೆ ಅದು ಆಗುತ್ತಿಲ್ಲ. ಜಂಟಿ ನಿರ್ದೇಶಕ ಕೃಷ್ಣಪ್ಪ ಅವರು ನನಗೆ ತೊಂದರೆ ಕೊಟ್ಟ ಕಾರಣದಿಂದಲೇ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಅವರಿಗೆ ದೇವರು ಶಿಕ್ಷೆ ಕೊಡುತ್ತಾನೆ. ನಮ್ಮ ಕುಟುಂಬದವರು ಯಾವುದೇ ಪ್ರತೀಕಾರಕ್ಕೆ ಹೋಗಬಾರದು, ಕಾನೂನು ಮತ್ತು ದೇವರೇ ನ್ಯಾಯ ಕೊಡುತ್ತಾರೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.

    ಈ ಘಟನೆ ಅಧಿಕಾರಿಗಳ ನಡುವಿನ ಒತ್ತಡ, ಕಿರುಕುಳ ಮತ್ತು ಮಾನಸಿಕ ಒತ್ತಡದ ಪ್ರಶ್ನೆಗಳನ್ನು ಮತ್ತೆ ಮುಂದಿಟ್ಟಿದೆ. ತನಿಖೆಯ ನಂತರವೇ ನಿಖರ ಕಾರಣಗಳು ಬಹಿರಂಗವಾಗಲಿದೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಕೊರಟಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಸ್ಪರ್ಧಿಸುವುದಿಲ್ಲ ಮತ್ತು ಬೇರೆ…

    ನಾಗರಪಂಚಮಿ ದಿನವೇ ಹಾವು ಕಚ್ಚಿ ಮಹಿಳೆ ಸಾವು!

    August 18, 2026

    ಅನಾಥಾಶ್ರಮಕ್ಕೆ ತಾಯಿ ತಂದೆಯರನ್ನು ಸೇರಿಸಬೇಡಿ: ಯುವ ಜನತೆಗೆ ಕೆ.ಎನ್. ರಾಜಣ್ಣ ಕಿವಿಮಾತು

    August 18, 2026

    ಡಿಸಿ ಕಚೇರಿ ಬಳಿ ಜಿಲ್ಲಾ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಹೋರಾಟ: ಸಂಪುಟದಿಂದ ನಾಗೇಂದ್ರ ವಜಾಗೊಳಿಸಲು ಬಿಜೆಪಿ ಆಗ್ರಹ

    August 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.