nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ

    March 22, 2026

    ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ದಾಳಿಂಬೆ ಬೆಳೆ ನಷ್ಟ | ರೈತರ ಸಂಕಷ್ಟ ಆಲಿಸಿದ ಚಿದಾನಂದ್ ಎಂ.ಗೌಡ

    March 22, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ
    • ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ದಾಳಿಂಬೆ ಬೆಳೆ ನಷ್ಟ | ರೈತರ ಸಂಕಷ್ಟ ಆಲಿಸಿದ ಚಿದಾನಂದ್ ಎಂ.ಗೌಡ
    • ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ
    • ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ
    • ಏ.1 ರಂದು ಡಾ.ಶ್ರೀ.ಶಿವಕುಮಾರಸ್ವಾಮೀಜಿ 119ನೇ ಜನ್ಮಜಯಂತಿ: ಗುರುವಂದನಾ ಮಹೋತ್ಸವಕ್ಕೆ ಆಗಮಿಸಲಿದ್ದಾರೆ ದ್ರೌಪದಿ ಮುರ್ಮು
    • ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು
    • ಜಿಲ್ಲಾಡಳಿತದ ನಿರ್ಬಂಧಕ್ಕೆ ಡೋಂಟ್ ಕೇರ್: ಪೊಲೀಸರ ಎದುರೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!
    • ಶಿರಾದ ಲಕ್ಕನಹಳ್ಳಿಯಲ್ಲಿ ಖಬರಸ್ಥಾನಕ್ಕೆ ಜಾಗ ನೀಡಲು ಮುಸ್ಲಿಮರ ಒತ್ತಾಯ: ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏ.1 ರಂದು ಡಾ.ಶ್ರೀ.ಶಿವಕುಮಾರಸ್ವಾಮೀಜಿ 119ನೇ ಜನ್ಮಜಯಂತಿ: ಗುರುವಂದನಾ ಮಹೋತ್ಸವಕ್ಕೆ ಆಗಮಿಸಲಿದ್ದಾರೆ ದ್ರೌಪದಿ ಮುರ್ಮು
    ತುಮಕೂರು March 22, 2026

    ಏ.1 ರಂದು ಡಾ.ಶ್ರೀ.ಶಿವಕುಮಾರಸ್ವಾಮೀಜಿ 119ನೇ ಜನ್ಮಜಯಂತಿ: ಗುರುವಂದನಾ ಮಹೋತ್ಸವಕ್ಕೆ ಆಗಮಿಸಲಿದ್ದಾರೆ ದ್ರೌಪದಿ ಮುರ್ಮು

    By adminMarch 22, 2026No Comments2 Mins Read
    siddaganga

    ತುಮಕೂರು: ಏಪ್ರಿಲ್ 1ರಂದು ಸಿದ್ದಗಂಗಯ ತ್ರಿವಿಧ ದಾಸೋಹಿ ಲಿಂಗೈಕ್ಯ ಕರ್ನಾಟಕ ರತ್ನ ಡಾ. ಶ್ರೀಶಿವಕುಮಾರಮಹಾಸ್ವಾಮೀಜಿ ಅವರ 119ನೇ ಜನ್ಮಜಯಂತೋತ್ಸವ ಹಿನ್ನೆಲೆಯಲ್ಲಿ ಶ್ರೀ ಮಠದಲ್ಲಿ ಗುರುವಂದನಾ ಮಹೋತ್ಸವ ನಡೆಯಲಿದೆ. ಈ ಬಾರಿಯ ಗುರುವಂದನಾ ಮಹೋತ್ಸವದ ವಿಶೇಷ ಅತಿಥಿಗಳಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪಾಲ್ಗೊಳ್ಳುತ್ತಿದ್ದಾರೆ.

    ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮದ ಹಿನ್ನೆಲೆ ನಡೆದ ಪೂರ್ವಭಾವಿ ಸಭೆಯಲ್ಲಿ ತುಮಕೂರು ಕ್ಷೇತ್ರದ ಸಂಸದರು, ಕೇಂದ್ರ ಸಚಿವರೂ ಆಗಿರುವ ವಿ.ಸೋಮಣ್ಣ ಭಾಗಿಯಾಗಿದ್ದರು. ಸಿದ್ದಗಂಗಾ ಮಠದಲ್ಲಿ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.


    Provided by
    Provided by

    ಪೂರ್ವಭಾವಿ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಭಕ್ತರ ಪಾಲಿಗೆ ನಡೆದಾಡುವ ದೇವರೆಂದೇ ಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ 119ನೇ ಜನ್ಮ ಜಯಂತಿ ಗುರುವಂದನಾ ಮಹೋತ್ಸವಕ್ಕೆ ದೇಶದ ಘನವೆತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏ.1ರಂದು ಆಗಮಿಸುತ್ತಿರುವುದು ವಿಶೇಷವೆನಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಿಲ್ಲೆಗೆ ಅದರಲ್ಲೂ ತುಮಕೂರು ನಗರಕ್ಕೆ ಆಗಮಿಸುತ್ತಿರುವುದು ತುಮಕೂರಿನ ಅದೃಷ್ಟವೇ ಸರಿ ಎಂದರು.

    ಮುರ್ಮು ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ಭರದ ಸಿದ್ಧತೆಗಳು ನಡೆದಿದ್ದು, ಪೂರ್ವಭಾವಿ ಸಭೆಯಲ್ಲಿ ಮಠಕ್ಕೆ ರಾಷ್ಟ್ರಪತಿಗಳು, ರಾಜ್ಯಪಾಲರ ಭೇಟಿ, ಭದ್ರತಾ ವ್ಯವಸ್ಥೆ, ಗುರುವಂದನಾ ಮಹೋತ್ಸವ, ದಾಸೋಹ ವಿವರಣೆ ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗಿದೆ. ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮೀಜಿ ಅವರು ಸೇರಿದಂತೆ ಅನೇಕರು ಉಪಯುಕ್ತ ಸಲಹೆಗಳನ್ನು ನೀಡಿದ್ದು, ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು ಸೇರಿದಂತೆ ಎಲ್ಲಾ ಭಕ್ತರ ಸಹಕಾರದೊಂದಿಗೆ ಪೂಜ್ಯರ ಗುರುವಂದನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಕಲ್ಪಿಸಲಾಗಿದೆ ಎಂದರು.

    ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಎಸ್ಪಿ ಕೆ.ವಿ.ಅಶೋಕ್, ಜಿಪಂ ಸಿಇಒ ಜಿ.ಪ್ರಭು, ಎಡಿಸಿ ಶೈಲಜಾಪಿ, ತಹಶೀಲ್ದಾರ್ ರಾಜೇಶ್ವರಿ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಗಂಗಪ್ಪ, ಜಿಪಂ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ, ಸೇರಿದಂತೆ ಮಠದ ಆಡಳಿತ ಪ್ರಮುಖರಾದ ಟಿ.ಕೆ.ನಂಜುಂಡಪ್ಪ, ಜಯವಿಶ್ವಾಸ್ವಾಮಿ ಎಸ್.ವಿಶ್ವನಾಥಯ್ಯ, ಡಾ.ಶಿವಕುಮಾರ್‌ಯ್ಯ, ಉದ್ಯಮಿ ಸ್ಫೂರ್ತಿ ಚಿದಾನಂದ್, ಕೊಪ್ಪಳ ನಾಗರಾಜ್, ಕೋರಿ ಮಂಜುನಾಥ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡರು.

    ಹಿಂದಿನ ದಿನವೇ ರಾಷ್ಟ್ರಪತಿಗಳ ಆಗಮನ:  ಮಾ.31ರಂದು ರಾತ್ರಿ 8.30ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿಗಳು ಲೋಕಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಏ.1ರಂದು ಬೆಳಗ್ಗೆ 9.30ಕ್ಕೆ ತುಮಕೂರಿಗೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ಮಠಕ್ಕೆ ಭೇಟಿ ನೀಡುವರು. ಮೊದಲಿಗೆ ಡಾ. ಶ್ರೀ ಶಿವಕುಮಾರಸ್ವಾಮೀಜಿ ಅವರ ಗದ್ದುಗೆ ದರ್ಶನ ಮಾಡಿ, ನಂತರ ಮಠದ ಹತ್ತುಸಾವಿರ ಮಕ್ಕಳ ಸಮೂಹವನ್ನು ಕೆಲ ನಿಮಿಷ ವೀಕ್ಷಿಸಿ ಗುರುವಂದನಾ ಸಮಾರಂಭದ ವೇದಿಕೆಗೆ ಆಗಮಿಸುವರು.

    ಸಮಾರಂಭದಲ್ಲಿ ರಾಷ್ಟ್ರಪತಿಗಳೊಂದಿಗೆ ರಾಜ್ಯಪಾಲರು, ಶ್ರೀ ಸಿದ್ದಲಿಂಗಸ್ವಾಮೀಜಿ, ಕಿರಿಯ ಶ್ರೀ ಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಹಿರಿಯ ಶಾಸಕರಾದ ಕೆ.ಎನ್.ರಾಜಣ್ಣ, ಟಿ.ಬಿ.ಜಯಚಂದ್ರ, ಬಿ.ಸುರೇಶ್‌ಗೌಡ ಉಪಸ್ಥಿತರಿರುವರು. ಸುಮಾರು ಒಂದೂವರೆ ತಾಸು ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗುವರು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ

    March 21, 2026

    ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ

    March 21, 2026

    ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿಸಲ್ಲಿಸಬಹುದು?

    March 21, 2026

    Leave A Reply Cancel Reply

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ

    March 22, 2026

    ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸಿದ್ದರಬೆಟ್ಟದ ಶ್ರೀ ಬಾಳೆಹೊನ್ನೂರು ಖಾಸಾ ಶಾಖ ಮಠದ 20ನೇ ವರ್ಷದ ವಾರ್ಷಿಕೋತ್ಸವ…

    ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ದಾಳಿಂಬೆ ಬೆಳೆ ನಷ್ಟ | ರೈತರ ಸಂಕಷ್ಟ ಆಲಿಸಿದ ಚಿದಾನಂದ್ ಎಂ.ಗೌಡ

    March 22, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.