ಸರಗೂರು: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ರಂಜಾನ್ ಹಬ್ಬದ ಸಂದರ್ಭದಲ್ಲಿ ಕಸಾಪ ವತಿಯಿಂದ, ಕಸಾಪ ಭವನಕ್ಕೆ ಜಾಗವನ್ನು ನೀಡಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಮನವಿ ಮಾಡಲಾಯಿತು.
ಈ ವೇಳೆ ಕಸಾಪ ಅಧ್ಯಕ್ಷ ಎಂ.ಕೆಂಡಗಣ್ಣಸ್ವಾಮಿ ಮಾತನಾಡಿ, ಸಮಾರಂಭ ಕಾರ್ಯಕ್ರಮವನ್ನು ಮಾಡಲು ಸ್ಥಳ ಇಲ್ಲದೆ ಶಾಲೆ ಮತ್ತು ಸರ್ಕಾರಿ ಕಚೇರಿಗಳನ್ನು ಮನವಿ ಮಾಡಿಕೊಂಡು ಸಭೆಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಕಸಾಪ ಸಂಘಕ್ಕೆ ಪ್ರತ್ಯೇಕವಾಗಿ ಭವನ ಜಾಗ ಬೇಕು. ಅದಕ್ಕೆ ನಿಮ್ಮ ಅನುದಾನವನ್ನು ನೀಡಿ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.
ಮನವಿಗೆ ಸ್ಪಂದಿಸಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ಪಟ್ಟಣದಲ್ಲಿ ಕಸಾಪ ಭವನ ನಿರ್ಮಾಣ ಮಾಡಲು ನಮಗೂ ಆಸೆ ಇದೆ. ಆದರೆ ಪಟ್ಟಣದಲ್ಲಿ ಸರ್ಕಾರಿ ಜಾಗ ಕೊರತೆ ಇರುವುದರಿಂದ ಕಂದಾಯ ಮತ್ತು ಪಪಂ ಅಧಿಕಾರಿಗಳಿಗೆ ಸರ್ಕಾರಿ ಜಾಗವನ್ನು ಗುರುತಿಸಲು ಸೂಚನೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಪಪಂ ಸದಸ್ಯ ಶ್ರೀನಿವಾಸ,ಕಸಾಪ ಪ್ರದಾನ ಕಾರ್ಯದರ್ಶಿ ಎಚ್.ಎನ್.ನಿಂಗರಾಜು, ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಎಸ್.ಎನ್.ನಾಗರಾಜು, ಮಾಜಿ ಜಿ.ಪಂ. ಸದಸ್ಯ ಪಿ.ರವಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಪದಾಧಿಕಾರಿಗಳು ರಘುರಾಮ್, ಚನ್ನೀಪುರ ಮಲ್ಲೇಶ್, ಬಿಲ್ಲಯ್ಯ, ಕಾಳಸ್ವಾಮಿ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


