ಪಾವಗಡ: ಈ ಹಿಂದೆ ಜಾರಿಯಲ್ಲಿದ್ದ ಮೀಸಲಾತಿಯನ್ನೇ ಮುಂದುವರಿಸಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿ ಮಾರ್ಚ್ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ವತಿಯಿಂದ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಬಂಜಾರ ಜಾಗೃತಿ ದಳ ಸಂಸ್ಥಾಪಕ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಉದ್ಯೋಗ ನೇಮಕಾತಿ ಕುರಿತು ರೋಸ್ಟರ್ ಹಂಚಿಕೆ ಮಾಡಿ ಸರ್ಕಾರ ಹೊರಡಿಸಿರುವ ಎಲ್ಲಾ ಆದೇಶ ಸುತ್ತೋಲೆಗಳನ್ನು ಹಿಂಪಡೆಯಬೇಕು, ಈಗಾಗಲೇ ಹೊರಡಿಸಿರುವ ನೇಮಕಾತಿ ಅಧಿಸೂಚನೆಗಳನ್ನು ರದ್ದುಗೊಳಿಸಬೇಕು ಹಳೆಯ ಜಾತಿ ಪ್ರಮಾಣ ಪತ್ರವನ್ನೇ ಮುಂದುವರಿಸಬೇಕು ಅಂತಾ ಅವರು ಒತ್ತಾಯಿಸಿದರು.
ಇತ್ತೀಚೆಗೆ ರಾಜ್ಯ ಸರ್ಕಾರದ ವಿವಿಧ ಯುನಿವರ್ಸಿಟಿ.ಪ್ರಾಧಿಕಾರ ಮತ್ತು ಕೆಲ ಇಲಾಖೆಗಳ ನೇಮಕಾತಿಯ ಅಧಿಸೂಚನೆಯಲ್ಲಿ ಪರಿಶಿಷ್ಟ ಜಾತಿಗಳ ಪ್ರವರ್ಗ ಬಿ.ಪ್ರವರ್ಗ ಸಿ. ಗುಂಪಿಗೆ ಶೂನ್ಯ ಹುದ್ದೆಗಳನ್ನು ಹಂಚಿಕೆ ಮಾಡಲಾಗಿತ್ತು. ಇದರಿಂದಾಗಿ ಮೀಸಲಾತಿ ಅವೈಜ್ಞಾನಿಕವಾದದ್ದು ಎಂದು ತಿಳಿದಿರುವ ವಿಚಾರ.ನ್ಯಾ.ನಾಗಮೋಹನ್ ದಾಸ್ ಆಯೋಗದ ಸಮೀಕ್ಷಾ ಸಮಗ್ರ ದತ್ತಾಂಶ ಮಾಹಿತಿಯನ್ನು ತಾಲ್ಲೂಕುವಾರು ಬಿಡುಗಡೆಗೊಳಿಸಬೇಕು. ನ್ಯಾ. ನಾಗಮೋಹನ್ ದಾಸ್ ಆಯೋಗ ಸಂಗ್ರಹಿಸಿರುವ ದತ್ತಾಂಶ ಒಂದು ಸಮಾಜಕ್ಕೆ ಪೂರ್ವಗ್ರಹ ಪೀಡಿತವಾಗಿದೆ. ನ್ಯಾ. ನಾಗಮೋಹನ್ ದಾಸ್ ಆಯೋಗ ಸಂಗ್ರಹಿಸಿರುವ ದತ್ತಾಂಶಕ್ಕೂ ಸರ್ಕಾರಕ್ಕೆ ನೀಡಿರುವ ವರದಿಗೂ ವ್ಯತ್ಯಾಸ ಇದೆ ಅಲೆಮಾರಿ ಸಮುದಾಯಗಳಿಗೆ ಪರಿಶಿಷ್ಟ ಜಾತಿಗಳಾಗಿ ನ್ಯಾಯ ಸಿಗಬೇಕು. ಮಾರ್ಚ್ 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇರುವುದರಿಂದ ಅದಕ್ಕೂ ಮುನ್ನವೇ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಒಳ ಮೀಸಲಾತಿ ವಿರೋಧಿಸಿ ಮಾರ್ಚ್ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ ಬಂಜಾರ ಭೋವಿ ಕೊರಮ ಕೊರಚ ಸೂಕ್ಷ್ಮ ಅಲೆಮಾರಿ ಸಮುದಾಯದ ಎಲ್ಲಾ ಸಂಘ ಸಂಸ್ಥೆಗಳ ಭಾಗವಹಿಸಲಿದ್ದೇವೆ ಎಂದು ಕರ್ನಾಟಕ ಬಂಜಾರ ಜಾಗೃತಿ ದಳ(ರಿ) ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ತಿಪ್ಪೇಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


