nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಳಮೀಸಲಾತಿ: “ನಾಗಮೋಹನ್ ದಾಸ್  ಆಯೋಗದ ವರದಿ ಅವೈಜ್ಞಾನಿಕ”: ಮಾ.25ರಂದು ಬೃಹತ್ ಪ್ರತಿಭಟನೆ
    ತುಮಕೂರು March 24, 2026

    ಒಳಮೀಸಲಾತಿ: “ನಾಗಮೋಹನ್ ದಾಸ್  ಆಯೋಗದ ವರದಿ ಅವೈಜ್ಞಾನಿಕ”: ಮಾ.25ರಂದು ಬೃಹತ್ ಪ್ರತಿಭಟನೆ

    By adminMarch 24, 2026No Comments2 Mins Read
    olamesalati

    ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರದಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗ ನೀಡಿರುವ ವರದಿ ಅವೈಜ್ಞಾನಿಕ, ಅಪೂರ್ಣ ಹಾಗೂ ಪಕ್ಷಪಾತದಿಂದ ಕೂಡಿದೆ ಅದನ್ನು ತಿರಸ್ಕರಿಸಿ ಮರು ಸಮೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಮಾ. 25 ರಂದು ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಡಿಸಿಎಂಎಸ್ ಜಿಲ್ಲಾ ಸಂಚಾಲಕ ಭಾನು ಪ್ರಕಾಶ್ ಸಿ. ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ. 12, 2026ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಒಳಮೀಸಲಾತಿ ವಿಷಯವಾಗಿ ವಿಸ್ತೃತ ಚರ್ಚೆ ನಡೆಸಲಾಗಿದೆ. ಒಳಮೀಸಲಾತಿ ಕುರಿತಂತೆ ನ್ಯಾಯಾಲಯ ತಡೆಯಾಜ್ಞೆ ಇರುವುದರ ಜೊತೆಗೆ ರೋಸ್ಟರ್ ಬಿಂದುಗಳ ವಿಷಯದಲ್ಲಿ ಗೊಂದಲ ಉಂಟಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಕೇಂದ್ರ ಸರ್ಕಾರವು ಶೇಕಡಾ 50ರಷ್ಟು ಮೀಸಲಾತಿಗೆ ಒಪ್ಪಿಗೆ ನೀಡುವವರೆಗೂ ಒಳಮೀಸಲಾತಿ ರಹಿತವಾಗಿ ಶೇಕಡಾ 15+3ರಷ್ಟು ಮೀಸಲಾತಿಯನ್ನು ಜಾರಿಗೊಳಿಸಿ ಫೆ. 27, 2026ರಂದು ಸರ್ಕಾರದ ಆದೇಶವನ್ನು ಹೊರಡಿಸಿದೆ. ಆದರೆ 101 ಜಾತಿಗಳ ಪೈಕಿ ಒಂದೇ ಜಾತಿಯ ಒತ್ತಡಕ್ಕೆ ಮಣಿದು ಸರ್ಕಾರವು ಶೇಕಡಾ 15+3ರ ಮೀಸಲಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಮುಂದಾದರೆ ರಾಜ್ಯ ಸರ್ಕಾರವು ಬಲಗೈ ಸಮುದಾಯಗಳ ತೀವ್ರ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.


    Provided by
    Provided by

    ಡಿಸಿಎಂಎಸ್‌ನ ಅಧ್ಯಕ್ಷ ಡಾ.ಚಂದ್ರಪ್ಪ ಮಾತನಾಡಿ, ಸರ್ಕಾರ ಅವೈಜ್ಞಾನಿಕ ಮತ್ತು ದೋಷಪೂರಿತವಾದ ನ್ಯಾ.ನಾಗಮೋಹನ್ ದಾಸ್ ವರದಿಯನ್ನು ತಿರಸ್ಕರಿಸಬೇಕು. ಒಬಿಸಿ ಆಯೋಗದ ಸಮೀಕ್ಷಾ ವರದಿಯನ್ನು ನ್ಯಾ.ನಾಗಮೋಹನ್ ದಾಸ್ ವರದಿಗೆ ತಾಳೆಹಾಕಿ, ವ್ಯತ್ಯಾಸ ಕಂಡು ಬಂದರೆ ಮತ್ತೊಮ್ಮೆ ಸಮೀಕ್ಷೆ ನಡೆಸಬೇಕು. ರಾಜ್ಯ ಸರ್ಕಾರವೂ 03-09-2025 ರಂದು ಯಾವುದೇ ಮಾನದಂಡವಿಲ್ಲದೆ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆಯಬೇಕು. ಜಾತಿ ಪ್ರಮಾಣ ಪತ್ರ ಪ್ರಮಾಣ ಪತ್ರಗಳೊಂದಿಗೆ ಪರಿಗಣಿಸಲು ಸೂಕ್ತ ಆದೇಶ ಹೊರಡಿಸಬೇಕು. ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳನ್ನು ಒಂದು ಗುಂಪಿಗೆ ತಂದು ಉದ್ಯೋಗ, ಶಿಕ್ಷಣ ಇತರೆ ಸೌಲಭ್ಯ ಪಡೆಯಲು ಆದೇಶ ಹೊರಡಿಸಬೇಕು ಎಂದರು.

    ಮುಖಂಡರಾದ ಶ್ರೀ ನಿವಾಸ್ ಮಾತನಾಡಿ, ಸರ್ಕಾರದ ಮೀಸಲಾತಿ ಇತ್ತೀಚಿನ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶಗಳಲ್ಲಿನ ರೋಸ್ಟರ್ ಬಿಂದುಗಳನ್ನು ಅವಲೋಕಿಸಿದರೆ ಬಲಗೈ ಸಮುದಾಯ ಸೇರಿದಂತೆ ಎಲ್ಲಾ ಸಮುದಾಯಗಳಿಗೆ ಭಾರಿ ಅನ್ಯಾಯವಾಗಲಿದೆ. ನಾವು ಮೀಸಲಾತಿ ವಿರೋಧಿಗಳಲ್ಲ. ಆದರೆ ಇದೇ ರೋಸ್ಟರ್ ಬಿಂದು ಮುಂದುವರೆದರೆ ಪರಿಶಿಷ್ಟ ಜಾತಿಯಲ್ಲಿರುವ ಒಂದು ವರ್ಗವನ್ನು ಹೊರತು ಪಡಿಸಿ, ಉಳಿದ ವರ್ಗಗಳಿಗೆ ಉದ್ಯೋಗ, ಶಿಕ್ಷಣ, ಆರ್ಥಿಕ ಸವಲತ್ತುಗಳು ದೊರೆಯುವುದು ಮರೀಚಿಕೆ. ಹಾಗಾಗಿ ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಶ್ರೀ ನಿವಾಸ್, ಛಲವಾದಿ ಶೇಖರ್, ಸಿದ್ದಲಿಂಗಯ್ಯ, ಭೈರೇಶ್, ಕೃಷ್ಣಪ್ಪ ಹೆಗ್ಗರೆ, ಗಿರೀಶ್ ಜಿ.ಆರ್, ಅಪ್ಪಾಜಯ್ಯ, ಇಂದ್ರಕುಮಾರ್, ವಕೀಲ ನಾಗೇಶ್, ಗಂಗಾಂಜನೇಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!

    May 24, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ…

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.