ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋನಿಗರಹಳ್ಳಿ ಗ್ರಾಮದ ರಮೇಶ್ ಬಿನ್ ನರಸಿಂಹಯ್ಯ (ಸುಮಾರು 45 ವರ್ಷ) ಹೈನುಗಾರಿಕೆಗಾಗಿ ಮೈಕ್ರೋ ಫೈನಾನ್ಸ್ ಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ..
ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನ ಸಾಗಿರುತ್ತಿದ್ದ ರೈತ ರಮೇಶ್ ಕುಟುಂಬ ಸುಮಾರು 20 ಹಸುಗಳನ್ನು ಸಾಕುತ್ತಿದ್ದರು ಎನ್ನಲಾಗಿದ್ದು, ಮಾರಣಾಂತಿಕ ಕಾಯಿಲೆಗಳಿಂದ ಸುಮಾರು ಹಸುಗಳು ಸಾವನ್ನಪ್ಪಿದ್ದವು ಎಂದು ಮೃತನ ಸಹೋದರ ನಾಗರಾಜು ತಿಳಿದ್ದಾರೆ.
ಹೆಚ್ಚು ಸಾಲ ಮಾಡಿಕೊಂಡು ಬಡ್ಡಿ ಮತ್ತು ಅಸಲು ತೀರಿಸಲಾಗದೆ ಮನನೊಂದು ಜೋನಿಗರಹಳ್ಳಿ ಗ್ರಾಮದ ಸರ್ವೆ ನಂಬರ್ 81/4 ರ ಜಮೀನಿನಲ್ಲಿ ಇರುವ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಷಯ ತಿಳಿದ ತಕ್ಷಣವೇ ಕೊರಟಗೆರೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ರೈತ ರಮೇಶ್ ತನ್ನ ಪತ್ನಿ ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.
ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ರೈತನ ಸಾವಿಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


