nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
    ತುಮಕೂರು March 28, 2026

    ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ

    By adminMarch 28, 2026No Comments2 Mins Read
    tumakuru

    ತುಮಕೂರು : ಏಪ್ರಿಲ್ 1ರಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪತಿ ಮುರ್ಮು ಅವರು ಭಾಗವಹಿಸಲಿದ್ದು, ಸಂಬಂಧಿಸಿದಂತೆ ತುಮಕೂರು ನಗರದಾದ್ಯಂತ ಅಂದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಇರಲಿದೆ.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಅತಿಗಣ್ಯರ ಭದ್ರತೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಶುಭಕಲ್ಯಾಣ್, ಈಗಾಗಲೇ ತುಮಕೂರು ಜಿಲ್ಲೆಗೆ ಉಪರಾಷ್ಟ್ರಪತಿ, ಕೇಂದ್ರ ಗೃಹ ಸಚಿವರು, ರಾಜ್ಯಪಾಲರು ಸೇರಿದಂತೆ ಗಣ್ಯರು ಆಗಮಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೂಕ್ತ ಭದ್ರತೆಯನ್ನು ಒದಗಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಜರುಗಿಸಲಾಗಿದೆ. ಪ್ರಸ್ತುತ ರಾಷ್ಟ್ರಪತಿಯವರ ಕಾರ್ಯಕ್ರಮ ಅತಿಗಣ್ಯರ ಭದ್ರತೆ ಹೊಂದಿರುವುದರಿಂದ ಯಾವುದೇ ಲೋಪವಿಲ್ಲದಂತೆ ಭದ್ರತೆ ಒದಗಿಸುವ ಸಲುವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ನಿಯೋಜನೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

    ಭದ್ರತೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಅವರು, ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ಅವರ ಆಗಮನದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.

    ರಾಷ್ಟ್ರಪತಿ ಅವರ ಭದ್ರತೆಗೆ ಸುಮಾರು 15,000 ಪೊಲೀಸ್ ಸಿಬ್ಬಂದಿ ನಿಯೋಜಿಸಲು ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ ಅವರು, ರಾಷ್ಟ್ರಪತಿ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮತ್ತೆ ನಿರ್ಗಮಿಸುವವರೆಗೆ ತುಮಕೂರು ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿರುತ್ತದೆ. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಹೆಲಿಪ್ಯಾಡ್, ವಾಹನ ಸಂಚರಿಸುವ ರಸ್ತೆ ಮಾರ್ಗಗಳು ಹಾಗೂ ಕಾರ್ಯಕ್ರಮ ನಡೆಯುವ ಜಾಗ ಸೇರಿದಂತೆ ಎಲ್ಲಾ ಪ್ರದೇಶಗಳಲ್ಲಿ ಪ್ರತ್ಯೇಕವಾದ ತಂಡಗಳನ್ನು ರಚಿಸಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ಅಲ್ಲದೆ, ಮಾರ್ಚ್ 31ರಂದೇ ತಾಲೀಮು ಪ್ರಕ್ರಿಯೆ ಹಾಗೂ ಪೊಲೀಸ್ ಸಿಬ್ಬಂದಿಗೆ ಮಾಹಿತಿ ಹಾಗೂ ಇನ್ನಿತರ ಚಟುವಟಿಕೆಗಳನ್ನು ಪೊಲೀಸ್ ಇಲಾಖೆ ಹಮ್ಮಿಕೊಂಡಿರುವುದಾಗಿ ಸಭೆಗೆ ಮಾಹಿತಿ ನೀಡಿದರು.

    ನಗರದಾದ್ಯಂತ ಎಲ್ಲಾ ರಸ್ತೆಗಳನ್ನು ಪೊಲೀಸ್ ಬಂದೋಬಸ್‌ನಲ್ಲಿ ಇರಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗುವುದು. ಅಲ್ಲದೆ, ಕಾರ್ಯಕ್ರಮ ನಡೆಯುವ ಜಾಗಕ್ಕೆ ಸಾರ್ವಜನಿಕರು, ಭಕ್ತರು ತೆರಳಲು ಪ್ರತ್ಯೇಕ ಪ್ರವೇಶ ದ್ವಾರಗಳನ್ನು ನಿಗದಿಗೊಳಿಸಲಾಗುವುದು ಎಂದು ಅವರು ತಿಳಿಸಿದರು.

    ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಗುಪ್ತಚರ ಇಲಾಖೆಯ ಸುಹಾಸ್ ಸೂಡ ಅವರು, ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಅತಿಗಣ್ಯರ ಭದ್ರತೆ ಇರುವುದರಿಂದ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತದಿಂದ ಅಧಿಕಾರಿಗಳನ್ನು ನಿಯೋಜಿಸಿ ಜವಾಬ್ದಾರಿ ವಹಿಸಿರುವುದು ಸ್ವಾಗತಾರ್ಹ. ಅಂತೆಯೇ, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ನಿರ್ವಹಿಸಬೇಕಿದೆ ಎಂದರು. ರಾಜ್ಯ ಗುಪ್ತಚರ ಇಲಾಖೆಯ ಪೊಲೀಸ್ ಅಧೀಕ್ಷಕ ಸುರೇಶ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಸಿದ್ಧಗಂಗಾ ಮಠದ ಪ್ರತಿನಿಧಿ ಮಲ್ಲಿಕಾರ್ಜುನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

    ಸಭೆಯ ನಂತರ ತುಮಕೂರು ವಿಶ್ವವಿದ್ಯಾನಿಲಯದ ಹೆಲಿಪ್ಯಾಡ್ ಹಾಗೂ ಸಿದ್ದಗಂಗಾ ಮಠದ ಕಾರ್ಯಕ್ರಮ ನಡೆಯುವ ವೇದಿಕೆ ಇತ್ಯಾದಿ ಪ್ರದೇಶಗಳಿಗೆ ನಿಯೋಗ ಭೇಟಿ ನೀಡಿ ಪರಿಶೀಲಿಸಿತು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಔರಾದ್ (ಬೀದರ್): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಔರಾದ್ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ…

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026

    ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.