nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೊಸೆಗೆ ಕಿಡ್ನಿ ದಾನ ಮಾಡಿ ಪುನರ್ಜನ್ಮ ನೀಡಿದ ಅತ್ತೆ: ಆಕೆ ನನ್ನ ಮಗಳು, ಇದು ನನ್ನ ಕರ್ತವ್ಯ ಎಂದ ಅತ್ತೆ

    March 31, 2026

    ಬೀದರ್: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ದುರ್ಮರಣ

    March 31, 2026

    ಬೆಂಗಳೂರಲ್ಲಿ ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ್ದ ಥಾಯ್ಲೆಂಡ್ ಯುವತಿ: ಸ್ವದೇಶಕ್ಕೆ ಕಳುಹಿಸಲು ಹೈಕೋರ್ಟ್ ಆದೇಶ

    March 31, 2026
    Facebook Twitter Instagram
    ಟ್ರೆಂಡಿಂಗ್
    • ಸೊಸೆಗೆ ಕಿಡ್ನಿ ದಾನ ಮಾಡಿ ಪುನರ್ಜನ್ಮ ನೀಡಿದ ಅತ್ತೆ: ಆಕೆ ನನ್ನ ಮಗಳು, ಇದು ನನ್ನ ಕರ್ತವ್ಯ ಎಂದ ಅತ್ತೆ
    • ಬೀದರ್: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ದುರ್ಮರಣ
    • ಬೆಂಗಳೂರಲ್ಲಿ ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ್ದ ಥಾಯ್ಲೆಂಡ್ ಯುವತಿ: ಸ್ವದೇಶಕ್ಕೆ ಕಳುಹಿಸಲು ಹೈಕೋರ್ಟ್ ಆದೇಶ
    • ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಸರ್ಕಾರದ ಆದ್ಯ ಕರ್ತವ್ಯ: ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಸಮ್ಮೇಳದಲ್ಲಿ ಸಚಿವ ಡಾ.ಜಿ.ಪರಮೇಶ್ವರ್
    • ಪಾವಗಡ: ಬೀದಿ ನಾಯಿಗಳ ದಾಳಿಗೆ 20 ಕುರಿಗಳು ಬಲಿ — ಸಂಕಷ್ಟದಲ್ಲಿ ಕುರಿಗಾಹಿ ಕುಟುಂಬ
    • ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ
    • ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಸರ್ಕಾರದ ಆದ್ಯ ಕರ್ತವ್ಯ: ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಸಮ್ಮೇಳದಲ್ಲಿ ಸಚಿವ ಡಾ.ಜಿ.ಪರಮೇಶ್ವರ್
    ತುಮಕೂರು March 31, 2026

    ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಸರ್ಕಾರದ ಆದ್ಯ ಕರ್ತವ್ಯ: ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಸಮ್ಮೇಳದಲ್ಲಿ ಸಚಿವ ಡಾ.ಜಿ.ಪರಮೇಶ್ವರ್

    By adminMarch 31, 2026No Comments2 Mins Read
    dr g parameshwar

    ತುಮಕೂರು: ಬಡವ ಶ್ರೀಮಂತ ಎನ್ನದೆ ಪ್ರತಿಯೊಬ್ಬರೂ ಉತ್ತಮವಾದ ಆರೋಗ್ಯ ಸೇವೆಯನ್ನು ಪಡೆಯುವಂತೆ ನೋಡಿಕೊಳ್ಳುವುದು ಪ್ರತಿ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೃಹಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

    ನಗರದ ಹೊರವಲಯದಲ್ಲಿರುವ ಅಗಲಕೋಟೆಯ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿನ ಹೆಚ್.ಎಂ.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ತುಮಕೂರು ವತಿಯಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲಿ ಅತೀ ಹೆಚ್ಚು ವೈದ್ಯರು ಹೊರಬರುತ್ತಿರುವುದು ಭಾರತದಿಂದ. ಯಾವುದೇ ಸರ್ಕಾರಗಳು ಅಧಿಕಾರಕ್ಕೆ ಬಂದರೂ ಹೆಚ್ಚು ಪ್ರಾಮುಖ್ಯತೆಯನ್ನು ನೀಡುವುದು ಆರೋಗ್ಯ ಕ್ಷೇತ್ರದ ಮೇಲೆ. ಒಂದು ದೇಶದ ಪ್ರತಿಯೊಬ್ಬರಿಗೂ ಕೈಗೆಟಕುವ ದರದಲ್ಲಿ ಉತ್ತಮವಾದ ಆರೋಗ್ಯ ಸೇವೆಯನ್ನು ನೀಡುತ್ತಿದ್ದರೆ ಆ ದೇಶ ಆರೋಗ್ಯವಾಗಿರುತ್ತದೆ ಎಂದರು.


    Provided by
    Provided by

    ವೈದ್ಯರು ಸಮಾಜಕ್ಕೆ ತಮ್ಮಿಂದ ಯಾವ ರೀತಿ ಸೇವೆಯನ್ನು ನೀಡಬೇಕು ಎಂಬುದನ್ನು ಚಿಂತಿಸಬೇಕು. ಇಂದು ಸಾಕಷ್ಟು ವಿದೇಶಿ ನೇರ ಬಂಡವಾಳಗಳು ಹೂಡಿಕೆಯಾಗುತ್ತಿರುವುದು ವೈದ್ಯಕೀಯ ಕ್ಷೇತ್ರದಲ್ಲಿ ಇದು ಹೆಚ್ಚಾದರೆ ಸಾಮಾನ್ಯ ಬಡ ಜನರಿಗೆ ಉತ್ತಮವಾದ ಆರೋಗ್ಯ ಸೇವೆ ದೊರೆಯದೆ ಹೋಗಬಹುದು. ಹಾಗಾಗಿ ನಾವು ಇದಕ್ಕೆ ಹೆಚ್ಚು ಅವಕಾಶ ಮಾಡಿಕೊಡದೆ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.

    ರಾಜ್ಯ ಸರ್ಕಾರದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ವೈದ್ಯಕೀಯ ವೃತ್ತಿಯಲ್ಲಿ ಮಾನವೀಯತೆ ಜೊತೆಗೆ ಸೇವಾಮನೋಭಾವ ಇರುವುದು ಪ್ರಮುಖವಾಗಿದೆ. ಇಲ್ಲವಾದರೆ ವೈದ್ಯಕೀಯ ವೃತ್ತಿಗೆ ಮೌಲ್ಯವೇ ಇಲ್ಲದಂತಾಗುತ್ತದೆ. ಪ್ರತಿಯೊಬ್ಬರನ್ನು ಸಮಾನವಾಗಿ ಕಾಣುವ ಮನೋಧರ್ಮ ವೈದ್ಯರಲ್ಲಿ ಇರಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಹಣವೇ ಮುಖ್ಯವಾಗದೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಕಡು ಬಡವರಿಗೂ ಉತ್ತಮ ವೈದ್ಯಕೀಯ ಸೌಲಭ್ಯಗಳು ದೊರೆಯಬೇಕು. ಇಂದು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಕಾಯ್ದೆಗಳನ್ನು ರೂಪಿಸಲಾಗಿದೆ ಈ ಮೂಲಕ ವೈದ್ಯರು, ಶುಶ್ರೂಷಕರ ರಕ್ಷಣೆ ಈ ಕಾಯ್ದೆಗಳ ಮೂಲಕ ಆಗುತ್ತದೆ ಎಂದು ಹೇಳಿದರು.

    ಈ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜಿ.ಬಿ ಜ್ಯೋತಿ ಗಣೇಶ್, ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಉಪ ಪ್ರಾಂಶುಪಾಲ ಡಾ. ಪ್ರಭಾಕರ್, ಐಎಂಎ ಕೇಂದ್ರ ಕಚೇರಿಯ ಕಾರ್ಯದರ್ಶಿ ಡಾ. ಶಾರ್ವರಿ ದತ್ತ, ಸಮ್ಮೇಳನದ ಅಧ್ಯಕ್ಷ ಡಾ. ವೀರಭದ್ರಯ್ಯ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸದಸ್ಯರು, ಪದಾಧಿಕಾರಿಗಳು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ

    March 30, 2026

    ಒಳಮೀಸಲಾತಿ:  ರಾಜ್ಯ ಸರ್ಕಾರ ಮಾದಿಗರ ತಾಳ್ಮೆ ಪರೀಕ್ಷಿಸುತ್ತಿದೆ: ಪಿ.ಎನ್.ರಾಮಯ್ಯ ಕಿಡಿ

    March 30, 2026

    ಮುಕ್ತ ವಿವಿ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನ

    March 30, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸೊಸೆಗೆ ಕಿಡ್ನಿ ದಾನ ಮಾಡಿ ಪುನರ್ಜನ್ಮ ನೀಡಿದ ಅತ್ತೆ: ಆಕೆ ನನ್ನ ಮಗಳು, ಇದು ನನ್ನ ಕರ್ತವ್ಯ ಎಂದ ಅತ್ತೆ

    March 31, 2026

    ಯಾದಗಿರಿ: ಅತ್ತೆ–ಸೊಸೆಯ ಸಂಬಂಧ ಎಂದರೆ ಜಗಳ, ಭಿನ್ನಾಭಿಪ್ರಾಯಗಳೇ ಹೆಚ್ಚು ಎಂಬ ಸಮಾಜದ ಸಾಮಾನ್ಯ ಕಲ್ಪನೆಯನ್ನು ಸುಳ್ಳು ಮಾಡಿರುವ ಅಪರೂಪದ ಘಟನೆಯೊಂದು…

    ಬೀದರ್: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ದುರ್ಮರಣ

    March 31, 2026

    ಬೆಂಗಳೂರಲ್ಲಿ ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ್ದ ಥಾಯ್ಲೆಂಡ್ ಯುವತಿ: ಸ್ವದೇಶಕ್ಕೆ ಕಳುಹಿಸಲು ಹೈಕೋರ್ಟ್ ಆದೇಶ

    March 31, 2026

    ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಸರ್ಕಾರದ ಆದ್ಯ ಕರ್ತವ್ಯ: ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಸಮ್ಮೇಳದಲ್ಲಿ ಸಚಿವ ಡಾ.ಜಿ.ಪರಮೇಶ್ವರ್

    March 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.